Sorry Politics: ರಾಹುಲ್‌ - ಮೋದಿ ಕ್ಷಮೆ ಗಲಾಟೆಗೆ ಬಲಿಯಾಯ್ತು 2ನೇ ದಿನದ ಕಲಾಪ..!

Published : Mar 15, 2023, 09:06 AM IST
Sorry Politics: ರಾಹುಲ್‌ - ಮೋದಿ ಕ್ಷಮೆ ಗಲಾಟೆಗೆ ಬಲಿಯಾಯ್ತು 2ನೇ ದಿನದ ಕಲಾಪ..!

ಸಾರಾಂಶ

ಸದಸ್ಯರೊಬ್ಬರು ವಿದೇಶಕ್ಕೆ ತೆರಳಿ ತಮ್ಮದೇ ದೇಶದ ಪ್ರಜಾಪ್ರಭುತ್ವದ ವಿರುದ್ಧ ಮಾತನಾಡಿದ್ದನ್ನು ನೋಡಿಕೊಂಡು ಸಂಸತ್‌ ಸುಮ್ಮನೆ ಕೂರಲಾಗದು. ಈ ವಿಷಯದಲ್ಲಿ ರಾಹುಲ್‌ ಗಾಂಧಿ ಕ್ಷಮೆ ಕೇಳಲೇಬೇಕು. ಈ ವಿಷಯದಲ್ಲಿ ಸರ್ಕಾರದ ನಿಲುವು ಸ್ಪಷ್ಟವಾಗಿದೆ’ ಎಂದು ಸಚಿವ ಪಿಯೂಷ್‌ ಗೋಯಲ್‌ ಹೇಳಿದರು.

ನವದೆಹಲಿ (ಮಾರ್ಚ್‌ 15, 2023): ಭಾರತದ ಪ್ರಜಾಪ್ರಭುತ್ವ ನಿಸ್ತೇಜಗೊಂಡಿದ್ದು, ಈ ವಿಷಯದಲ್ಲಿ ಅಮೆರಿಕ ಮತ್ತು ಯೂರೋಪ್‌ ದೇಶಗಳು ಮಧ್ಯಪ್ರವೇಶ ಮಾಡಬೇಕು ಎಂಬ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಲಂಡನ್‌ ಭಾಷಣ, ಸತತ 2ನೇ ದಿನವಾದ ಮಂಗಳವಾರವೂ ಸಂಸತ್ತಿನ ಉಭಯ ಸದನಗಳಲ್ಲಿ ಭಾರೀ ಗದ್ದಲಕ್ಕೆ ಕಾರಣವಾಗಿದೆ. ಮತ್ತೊಂದೆಡೆ 2015ರಲ್ಲಿ ಸೋಲ್‌ನಲ್ಲಿ ಮಾಡಿದ್ದ ಭಾಷಣ ಪ್ರಸ್ತಾಪಿಸಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್‌ ಹೊಸ ಅಸ್ತ್ರ ಪ್ರಯೋಗಿಸಿದ ಹಿನ್ನೆಲೆಯಲ್ಲಿ 2ನೇ ದಿನವೂ ಕಲಾಪ ಸಾಧ್ಯವಾಗದೇ ಬುಧವಾರಕ್ಕೆ ಮುಂದೂಡಿಕೆಯಾಗಿದೆ.

ಮಂಗಳವಾರ ಬೆಳಗ್ಗೆ ಕಲಾಪ (Session) ಆರಂಭವಾಗುತ್ತಲೇ ಲೋಕಸಭೆಯಲ್ಲಿ (Lok Sabha) ವಿಷಯ ಪ್ರಸ್ತಾಪಿಸಿದ ಬಿಜೆಪಿಯ (BJP) ಸದಸ್ಯರು ಮತ್ತು ಹಲವು ಸಚಿವರು ‘ರಾಹುಲ್‌ ಗಾಂಧಿ (Rahul Gandhi) ಕ್ಷಮೆ ಕೇಳಿ’ ಎಂದು ಘೋಷಣೆ ಕೂಗಿದರು. ಈ ವೇಳೆ ಪ್ರತಿಪಕ್ಷ ಕಾಂಗ್ರೆಸ್‌ (Congress) ಸದಸ್ಯರು 2015ರಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಸೋಲ್‌ನಲ್ಲಿ ಮಾಡಿದ ‘ಏನು ತಪ್ಪು ಮಾಡಿದ್ದೆನೋ ಗೊತ್ತಿಲ್ಲ, ನಾನು ಭಾರತದಲ್ಲಿ (India) ಹುಟ್ಟಿದ್ದೇನೆ’ ಎಂಬ ಹೇಳಿಕೆ ಒಳಗೊಂಡ ಭಿತ್ತಿಪತ್ರ ಪ್ರದರ್ಶಿಸುವ ಮೂಲಕ ಪ್ರಧಾನಿ ಮೋದಿ ಕ್ಷಮೆಗೆ ಆಗ್ರಹ ಮಾಡಿದರು.

ಇದನ್ನು ಓದಿ: ಭಾರತದ ಸಂಸತ್ತಿನಲ್ಲಿ ವಿಪಕ್ಷಗಳಿಗೆ ಉಸಿರುಗಟ್ಟಿಸುವ ಸ್ಥಿತಿ; ಬಿಜೆಪಿಯದ್ದು ಹೇಡಿತನದ ಸಿದ್ಧಾಂತ: ರಾಹುಲ್‌ ಗಾಂಧಿ ಆರೋಪ

ಈ ವೇಳೆ ಪ್ರಶ್ನೋತ್ತರ ಕಲಾಪಕ್ಕೆ ಅವಕಾಶ ಮಾಡಿಕೊಡಿ. ಬಳಿಕ ವಿಪಕ್ಷ ಸದಸ್ಯರಿಗೆ ವಿಷಯ ಪ್ರಸ್ತಾಪಕ್ಕೆ ಅವಕಾಶ ಮಾಡಿಕೊಡುವುದಾಗಿ ಸ್ಪೀಕರ್‌ ಓಂ ಬಿರ್ಲಾ (Lok Sabha Speaker Om Birla) ಹೇಳಿದರೂ ಗದ್ದಲ ಕಡಿಮೆಯಾಗದ ಹಿನ್ನೆಲೆಯಲ್ಲಿ ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಲಾಯಿತು. ಮಧ್ಯಾಹ್ನ 2 ಗಂಟೆಗೆ ಕಲಾಪ ಆರಂಭವಾದಾಗಲೂ ಇದೇ ಪರಿಸ್ಥಿತಿ ಪುನರಾವರ್ತನೆಗೊಂಡ ಹಿನ್ನೆಲೆಯಲ್ಲಿ ಬುಧವಾರಕ್ಕೆ ಕಲಾಪ ಮುಂದೂಡಲಾಯಿತು.

ಇನ್ನೊಂದೆಡೆ ರಾಜ್ಯಸಭೆಯಲ್ಲೂ (Rajya Sabha) ಬಿಜೆಪಿ ಸದಸ್ಯರು ರಾಹುಲ್‌ ಗಾಂಧಿ ಕ್ಷಮೆಗೆ ಆಗ್ರಹಿಸಿ ಘೋಷಣೆ ಕೂಗಿದರು. ‘ಸದಸ್ಯರೊಬ್ಬರು ವಿದೇಶಕ್ಕೆ ತೆರಳಿ ತಮ್ಮದೇ ದೇಶದ ಪ್ರಜಾಪ್ರಭುತ್ವದ ವಿರುದ್ಧ ಮಾತನಾಡಿದ್ದನ್ನು ನೋಡಿಕೊಂಡು ಸಂಸತ್‌ ಸುಮ್ಮನೆ ಕೂರಲಾಗದು. ಈ ವಿಷಯದಲ್ಲಿ ರಾಹುಲ್‌ ಗಾಂಧಿ ಕ್ಷಮೆ ಕೇಳಲೇಬೇಕು. ಈ ವಿಷಯದಲ್ಲಿ ಸರ್ಕಾರದ ನಿಲುವು ಸ್ಪಷ್ಟವಾಗಿದೆ’ ಎಂದು ಸಚಿವ ಪಿಯೂಷ್‌ ಗೋಯಲ್‌ ಹೇಳಿದರು. ಈ ವೇಳೆ ಮತ್ತೊಂದು ಸದನದ ಸದಸ್ಯರ ಬಗ್ಗೆ ರಾಜ್ಯಸಭೆಯಲ್ಲಿ ಪ್ರಸ್ತಾಪ ಸರಿಯಲ್ಲ ಎಂದು ಕಾಂಗ್ರೆಸ್‌ ನಾಯಕರು ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಭಾರಿ ಗದ್ದಲ ಉಂಟಾದ ಕಾರಣ ಮಧ್ಯಾಹ್ನಕ್ಕೆ ಕಲಾಪ ಮುಂದೂಡಲಾಯಿತು. ಬಳಿಕವೂ ಅದೇ ಪರಿಸ್ಥಿತಿ ಮುಂದುವರೆದ ಕಾರಣ ದಿನದ ಮಟ್ಟಿಗೆ ಕಲಾಪ ಮುಂದೂಡಲಾಯಿತು.

ಇದನ್ನೂ ಓದಿ: 140 ಕೋಟಿ ಜನರ ನಂಬಿಕೆಯೇ ರಕ್ಷಾ ಕವಚ: ಸಂಸತ್ತಲ್ಲಿ ಮೋದಿ ಗುಡುಗು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..