ಪುಲ್ವಾಮಾ ಎನ್‌ಕೌಂಟರ್: ಮೂವರು ಉಗ್ರರ ಹತ್ಯೆ, ಇಂಟರ್ನೆಟ್ ಸ್ಥಗಿತ

By Suvarna NewsFirst Published Jun 3, 2020, 2:56 PM IST
Highlights

ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್ ಪಿಎಫ್ ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆ| ಕಾರ್ಯಾಚರಣೆಯಲ್ಲಿ ಮೂವರು ಉಗ್ರರ ಹತ್ಯೆ| ಕಾರ್ಯಾಚರಣೆ ವೇಳೆ ಪುಲ್ವಾಮಾದಲ್ಲಿ ಇಂಟರ್ನೆಟ್ ಸ್ಥಗಿತ

ಪುಲ್ವಾಮಾ(ಜೂ.03): ಜುಮ್ಮು ಕಾಶ್ಮೀರದ ಪಲ್ವಾಮಾದಲ್ಲಿ ಬುಧವಾರ ನಸುಕಿನ ಜಾವ ನಡೆದ ಎನ್‌ಕೌಂಟರ್‌ನಲ್ಲಿ ಭಾರತೀಯ ಭದ್ರತಾ ಪಡೆ ಮೂವರು ಉಗ್ರರನ್ನು ಹತ್ಯೆಗೈಯುವಲ್ಲಿ ಯಶಸ್ವಿಯಾಗಿದೆ.

ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಸೇನೆ, ಸಿಆರ್ ಪಿಎಫ್ ಮತ್ತು ಪೊಲೀಸರ ಜಂಟಿಯಾಗಿ  ಇಲ್ಲಿನ ಕಂಗನ್ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ನಡೆಸಿತ್ತು. ಹೀಗಿರುವಾಗ ಭದ್ರತಾ ಪಡೆ ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಎನ್‌ಕೌಂಟರ್‌ನಲ್ಲಿ ಐಇಡಿ ತಜ್ಞ ಸೇರಿದಂತೆ ಜೈಶ್ ಇ ಮೊಹಮ್ಮದ್ ಸಂಘಟನೆಯ ಮೂವರು ಉಗ್ರರು ಹತರಾಗಿದ್ದಾರೆ.

Three terrorists have been neutralised in the encounter that broke out between terrorists & security forces in Kangan area of Pulwama, earlier today. Arms and ammunition recovered. More details awaited: J&K Police (Visuals deferred by unspecified time) https://t.co/IgMbGMcKGA pic.twitter.com/qUb0D4eKDO

— ANI (@ANI)

ದಾಳಿ ಸಂಬಂಧ ಪ್ರತಿಕ್ರಿಯಿಸಿರುವ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ ಮದ್ದು ಗುಂಡುಗಳನ್ನು ವಶಪಡಿಸಲಾಗಿದೆ ಎಂದು ತಿಳಿಸಿದ್ದಾರೆ. ಇನ್ನು ಈ ಪ್ರದೇಶದಲ್ಲಿ ಮೊಬೈಲ್ ಇಂಟರ್‌ನೆಟ್ ಸೇವೆ  ಕಡಿತಗೊಳಿಸಲಾಗಿದೆ ಎಂಬ ಮಾಹಿತಿಯೂ ಲಭ್ಯವಾಗಿದೆ.

ಮಂಗಳವಾರ ಟ್ರಾಲ್ ಪ್ರದೇಶದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಜೈಷೆ ಮೊಹಮ್ಮದ್ ಉಗ್ರನನ್ನು ಹತ್ಯೆಗೈಯಲಾಗಿತ್ತು. ಈ ವೇಳೆಯಲ್ಲೂ ಶಸ್ತ್ರಾಸ್ತ್ರ ಹಾಗೂ ಸ್ಫೋಟಕಗಳನ್ನು ವಶಪಡಿಸಲಾಗಿತ್ತು.

click me!