ತಮಿಳುನಾಡು(ಜು.12); ಮೇಕೆದಾಟು ಅಣೆಕಟ್ಟು ಯೋಜನೆ ಆರಂಭಿಸಲು ಇತ್ತೀಚೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಡೆಸದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಆದರೆ ಕರ್ನಾಟಕದ ಉತ್ಸಾಹಕ್ಕೆ ಬ್ರೇಕ್ ಬೀಳುವ ಸಾಧ್ಯತೆ ದಟ್ಟವಾಗುತ್ತಿದೆ. ಕರ್ನಾಟಕ ಮೇಕೆದಾಡು ಯೋಜನೆ ವಿರುದ್ಧ ಇಂದು ತಮಿಳುನಾಡು ಸರ್ವಪಕ್ಷ ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದ್ದು, ಕೇಂದ್ರ ಹಾಗೂ ಕಾನೂನು ಹೋರಾಟ ಮುಂದುವರಿಸಲು ಸಜ್ಜಾಗಿದೆ.
ರಾಜ್ಯದ ಮೇಕೆದಾಟು ಡ್ಯಾಂ ಶೀಘ್ರ ಆರಂಭ...
ಕಳೆದೊಂದು ದಶಕದಿಂದ ಕರ್ನಾಟಕ ಸರ್ಕಾರದ ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧ ವ್ಯಕ್ತಪಡಿಸುತ್ತಿದೆ. ಆದರೆ ಇತ್ತ ಕರ್ನಾಟಕ ಮೇಕದಾಟು ಕ್ರೀಯಾಯೋಜನೆ ಸಿದ್ಧಪಡಿಸಲು ಸಭೆ ನಡೆಸಿದ ಬೆನ್ನಲ್ಲೇ ಇದೀಗ ತಮಿಳುನಾಡು ಸರ್ಕಾರ ಸರ್ವಪಕ್ಷ ಸಭೆಯಲ್ಲಿ 3 ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗಿದೆ.
ತಮಿಳುನಾಡು ಮುಖ್ಯಮಂತ್ರಿ ಎಕೆ ಸ್ಟಾಲಿನ್ ನೇತೃತ್ವದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಡಿಎಂಕೆ, ಎಐಎಡಿಎಂಕೆ, ಬಿಜೆಪಿ, ಕಾಂಗ್ರೆಸ್, ಎಡಪಕ್ಷಗಳು ಪಾಲ್ಗೊಂಡಿತ್ತು 13 ಪಕ್ಷಗಳು ಪಾಲ್ಗೊಂಡ ಈ ಸಭೆಯಲ್ಲಿ ಕರ್ನಾಟಕದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಲು ಒಮ್ಮತದ ನಿರ್ಧಾರ ಕೈಗೊಳ್ಳಲಾಯಿತು.
ಕೇಂದ್ರ ಜಲ ಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿಯಾಗಿ ಕರ್ನಾಟಕದ ನಿರ್ಣಯದ ವಿರುದ್ಧ ಕೇಂದ್ರದ ಮೇಲೆ ಒತ್ತಡ ತರಲು ನಿರ್ಧರಿಸಲಾಗಿದೆ. ಇನ್ನು ಕಾನೂನು ಹೋರಾಟ ಮುಂದುವರಿಸಲು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲು ನಿರ್ಧರಿಸಲಾಗಿದೆ. ಈ ಮೂರು ನಿರ್ಣಯ ಇದೀಗ ಕರ್ನಾಟಕದ ಯೋಜನೆಗೆ ಅಡೆ ತಡೆಯಾಗುವ ಸಾಧ್ಯತೆ ಹೆಚ್ಚಿದೆ.
ತಮಿಳುನಾಡು ಒಪ್ಪದಿದ್ದರೆ ಮೇಕೆದಾಟಿಗೆ ಸಮ್ಮತಿ ಇಲ್ಲ?...
ಇತ್ತೀಚೆಗೆ ತಮಿಳುನಾಡು ಜಲಸಂಪನ್ಮೂಲ ಸಚಿವ ದೊರೈ ಮುರುಗನ್, ಗಜೇಂದ್ರ ಸಿಂಗ್ ಶೇಖಾವತ್ ಭೇಟಿಯಾಗಿ ಈ ಕುರಿತು ಮನವಿ ಸಲ್ಲಿಸಿದ್ದಾರೆ. ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿರುವ ಕಾರಣ ಕರ್ನಾಟಕದ ಯೋಜನೆಗೆ ಕೇಂದ್ರ ಅನುಮತಿ ನೀಡಬಾರದು. ಇದರಿಂದ ತಮಿಳುನಾಡು ರೈತರಿಗೆ ಅನ್ಯಾವಾಗಲಿದೆ. ಕೋರ್ಟ್ ತೀರ್ಪಿನ ಬಳಿಕ ನಿರ್ಧಾರ ಕೈಗೊಳ್ಳಬೇಕಾಗಿ ಮನವಿ ಮಾಡಿದ್ದರು. ಇದಕ್ಕೆ ಕೇಂದ್ರ ಸರ್ಕಾರ ಕೂಡ ಸಕರಾತ್ಮಕವಾಗಿ ಸ್ಪಂದಿಸಿದೆ. ಈ ಬೆಳವಣಿಗೆ ಕರ್ನಾಟಕದ ಪಾಲಿಗೆ ಮುಳ್ಳಾಗಲಿದೆ.