ಮುಂದಿನ ಸಿಬಿಐ ನಿರ್ದೇಶಕರಾಗಿ ಕ್ರಿಕೆಟಿಗ ಮಯಾಂಕ್‌ ಅಗರ್‌ವಾಲ್‌ ಮಾವ ಪ್ರವೀಣ್‌ ಸೂದ್‌ ಆಯ್ಕೆ!

Published : May 14, 2023, 01:25 PM ISTUpdated : May 14, 2023, 03:02 PM IST
ಮುಂದಿನ ಸಿಬಿಐ ನಿರ್ದೇಶಕರಾಗಿ ಕ್ರಿಕೆಟಿಗ ಮಯಾಂಕ್‌ ಅಗರ್‌ವಾಲ್‌ ಮಾವ ಪ್ರವೀಣ್‌ ಸೂದ್‌ ಆಯ್ಕೆ!

ಸಾರಾಂಶ

ದೇಶದ ಪ್ರಧಾನ ಮಂತ್ರಿ, ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಸಮಿತಿಯು ಕೇಂದ್ರೀಯ ತನಿಖಾ ದಳದ ಉನ್ನತ ಹುದ್ದೆಗೆ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಆಯ್ಕೆ ಮಾಡಿದೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ (ಮೇ 14, 2023): ಕರ್ನಾಟಕ ರಾಜ್ಯಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್‌ಗೆ ಸಿಬಿಐ ನಿರ್ದೇಶಕರ ಪಟ್ಟ ಒಲಿದುಬಂದಿದೆ. ಇಂದು ಅಥವಾ ನಾಳೆ ಈ ಸಂಬಂಧ ಆದೇಶ ಹೊರಬೀಳುವ ಸಾಧ್ಯತೆ ಇದೆ ಎಂದು ಕೇಂದ್ರ ಗೃಹ ಇಲಾಖೆಯ ಮೂಲಗಳು ಮಾಹಿತಿ ನೀಡಿವೆ. ಕರ್ನಾಟಕ ಕೇಡರ್ ನಿಂದ ಸಿಬಿಐ ನಿರ್ದೇಶಕರಾಗುತ್ತಿರುವವರ ಪೈಕಿ ಪ್ರವೀಣ್‌ ಸೂದ್‌ 3ನೇ ಅಧಿಕಾರಿ ಎಂದು ತಿಳಿದುಬಂದಿದೆ. ರಾಜೀವ್ ಗಾಂಧಿ ಹಂತಕರ ಪ್ರಕರಣ ತನಿಖೆ ನಡೆಸಿದ್ದ ಕಾರ್ತೀಕೇಯನ್, ಜೋಗಿಂದರ್ ಸಿಂಗ್ ಈ‌ ಹಿಂದೆ ಸಿಬಿಐ ನಿರ್ದೇಶಕರಾಗಿದ್ದರು. ದೇವೇಗೌಡರು ಪ್ರಧಾನಿಯಾಗಿದ್ದಾಗ ಜೋಗಿಂದರ್ ಸಿಂಗ್ ಸಿಬಿಐ ನಿರ್ದೇಶಕರಾಗಿದ್ದರು. 

ಸಿಬಿಐ ಮುಂದಿನ ನಿರ್ದೇಶಕರನ್ನು ಆಯ್ಕೆ ಮಾಡಲು ಕೇಂದ್ರ ಸರ್ಕಾರ ನೇಮಕ ಮಾಡಿದ್ದ ಸಮಿತಿ ಮೂವರ ಹೆಸರನ್ನು ಶಾರ್ಟ್‌ಲಿಸ್ಟ್‌ ಮಾಡಿ ಶಿಫಾರಸು ಮಾಡಿತ್ತು. ಈ ಪೈಕಿ, ಕರ್ನಾಟಕದ ರಣಜಿ ಆಡುವ ಹಾಗೂ ಆರ್‌ಸಿಬಿ ತಂಡದಲ್ಲೂ ಆಡಿದ್ದ ಮಯಾಂಕ್‌ ಅಗರ್‌ವಾಲ್‌ ಅವರ ಮಾವ ಹಾಗೂ ರಾಜ್ಯದ ಡಿಜಿಪಿ ಪ್ರವೀಣ್‌ ಸೂದ್‌ ಅವರ ಹೆಸರನ್ನು ಸಹ ಶಿಫಾರಸು ಮಾಡಲಾಗಿತ್ತು. ಅಲ್ಲದೆ, ಇವರೇ ಪ್ರಮುಖ ಆಯ್ಕೆ ಎಂದೂ ಹೇಳಲಾಗ್ತಿದೆ. 

ಹೌದು, ದೇಶದ ಪ್ರಧಾನ ಮಂತ್ರಿ, ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಸಮಿತಿಯು ಕೇಂದ್ರೀಯ ತನಿಖಾ ದಳದ ಉನ್ನತ ಹುದ್ದೆಗೆ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಆಯ್ಕೆ ಮಾಡಿದೆ ಎಂದು ಮೂಲಗಳು ತಿಳಿಸಿವೆ. ಹಾಗೂ, ಶನಿವಾರ ಸಂಜೆ ನಡೆದ ಉನ್ನತ ಮಟ್ಟದ ಸಮಿತಿ ಸಭೆಯ ನಂತರ ಹೆಸರುಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗಿದೆ. ಈ ಪಟ್ಟಿಯಲ್ಲಿ ಪ್ರವೀಣ್ ಸೂದ್ (ಕರ್ನಾಟಕ ಡಿಜಿಪಿ), ಸುಧೀರ್ ಸಕ್ಸೇನಾ (ಡಿಜಿಪಿ ಮಧ್ಯಪ್ರದೇಶ) ಮತ್ತು ತಾಜ್ ಹಾಸನ್ ಅವರು ಈಗ ಸಿಬಿಐ ಮುಂದಿನ ನಿರ್ದೇಶಕರಾಗುವ ಲೆಕ್ಕಾಚಾರದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನು ಓದಿ: ಪ್ರಧಾನಿ ಸಾರ್, ನಿಮಗೆ ಬೇಕಾದುದನ್ನು ಮಾಡಿ, ಆಪ್‌ ಹೋರಾಟ ನಿಲ್ಸಲ್ಲ; ಸಿಬಿಐ ತನ್ನನ್ನು ಅರೆಸ್ಟ್‌ ಮಾಡಬಹುದು: ಕೇಜ್ರಿವಾಲ್‌

ಸಿಬಿಐ ನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್ ಅವರ ಎರಡು ವರ್ಷಗಳ ಅವಧಿ ಮೇ 25 ರಂದು ಕೊನೆಗೊಳ್ಳಲಿದೆ. ಈ ಹಿನ್ನೆಲೆ ಶೀಘ್ರದಲ್ಲೇ ಸಿಬಿಐ ಮುಂದಿನ ನಿರ್ದೇಶಕರನ್ನು ಕೇಂದ್ರ ಸರ್ಕಾರ ನೇಮಕ ಮಾಡಲಿದೆ ಮೂಲಗಳ ಪ್ರಕಾರ, ರಾಜ್ಯ ಕೇಡರ್‌ನ 1986-ಬ್ಯಾಚ್‌ನ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಅವರು ಈ ಹುದ್ದೆಗೆ ಮುಂಚೂಣಿಯಲ್ಲಿದ್ದಾರೆ.

ಪ್ರವೀಣ್‌ ಸೂದ್‌ ಅವರು ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ರಕ್ಷಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮಾರ್ಚ್‌ ತಿಂಗಳಲ್ಲಿ ಆರೋಪಿಸಿದ್ದರು. ಅಲ್ಲದೆ, ಕಾಂಗ್ರೆಸ್ ನಾಯಕರ ವಿರುದ್ಧ ಇವರು ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕರನ್ನು ಬಂಧಿಸುವಂತೆ ಡಿಕೆಶಿ ಕೋರಿದ್ದರು. ಈಗ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದು, ಡಿ.ಕೆ. ಶಿವಕುಮಾರ್‌ ಮುಂದಿನ ಸಿಎಂ ಎಂದೇ ಹೇಳಲಾಗುತ್ತಿದೆ. ಈ ನಡುವೆ, ಸಿಬಿಐ ಮುಖ್ಯಸ್ಥರನ್ನಾಗಿ ಪ್ರವೀಣ್‌ ಸೂದ್‌ ಅವರ ಹೆಸರು ಕೇಳಿಬರುತ್ತಿರುವುದು ಪ್ರಮುಖ ಎನಿಸಿದೆ. 

ಇದನ್ನೂ ಓದಿ: ಸಿಬಿಐಗೆ ಹಿನ್ನೆಡೆ: ಪಿಎನ್‌ಬಿ ವಂಚಕ ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಕರೆತರಲು ಆಂಟಿಗುವಾ ಕೋರ್ಟ್‌ ತಡೆ

ಪ್ರಧಾನ ಮಂತ್ರಿ, ಸಿಜೆಐ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಸಮಿತಿಯು ಎರಡು ವರ್ಷಗಳ ಅವಧಿಗೆ ಸಿಬಿಐ ನಿರ್ದೇಶಕರನ್ನು ಆಯ್ಕೆ ಮಾಡುತ್ತದೆ. ಈ ಅಧಿಕಾರಾವಧಿಯನ್ನು ಐದು ವರ್ಷಗಳವರೆಗೆ ವಿಸ್ತರಿಸಬಹುದು. ಇನ್ನೊಂದೆಡೆ. ಈ ಸಭೆಯಲ್ಲಿ ನೂತನ ಕೇಂದ್ರ ವಿಚಕ್ಷಣ ಕಮೀಷನರ್ ಮತ್ತು ಲೋಕಪಾಲ್ ಸದಸ್ಯನಾಗಿ ನೇಮಕಗೊಳ್ಳುವ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆಯೂ ಚರ್ಚಿಸಲಾಯಿತು ಎಂದೂ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಸುಪ್ರೀಂಕೋರ್ಟ್‌ ವಿರೋಧ ಪಕ್ಷಗಳಿಗೆ ಹೊಡೆತ ನೀಡಿದೆ: ತನಿಖಾ ಸಂಸ್ಥೆಗಳ ದುರ್ಬಳಕೆ ಆರೋಪಕ್ಕೆ ಚಾಟಿ ಬೀಸಿದ ಮೋದಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..
ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್