ಖಚಿತ ಮಾಹಿತಿ ಮೇರೆ ದಾಳಿ; ಮೂವರು ಉಗ್ರರ ಸದ್ದಡಗಿಸಿದ ಸೇನೆ!

Published : Jun 29, 2020, 05:35 PM ISTUpdated : Jun 29, 2020, 05:47 PM IST
ಖಚಿತ ಮಾಹಿತಿ ಮೇರೆ ದಾಳಿ; ಮೂವರು ಉಗ್ರರ ಸದ್ದಡಗಿಸಿದ ಸೇನೆ!

ಸಾರಾಂಶ

ಜಮ್ಮ ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆ ಹತ್ತಿಕ್ಕಲು ಭಾರತೀಯ ಸೇನೆ , CRPF ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಜಂಟಿ ಕಾರ್ಯಚರಣೆ ನಡೆಸುತ್ತಿದೆ. ಪ್ರತಿ ದಿನ ಉಗ್ರರನ್ನು ಬೇಟೆಯಾಡುತ್ತಿದೆ. ಇದೀಗ ಮತ್ತೆ ಮೂವರು ಉಗ್ರರನ್ನು ಸೇನೆ ಹೊಡೆದುರುಳಿಸಿದೆ.

ಅನಂತನಾಗ್(ಜೂ.29): ಭಯೋತ್ಪಾದಕ ಚಟುವಟಿಕೆಗಳನ್ನು ಸಂಪೂರ್ಣವಾಗಿ ಹತ್ತಿಕ್ಕಲು ಭಾರತೀಯ ಸೇನೆ ವಿಶೇಷ ಕಾರ್ಯಚರಣೆ ನಡೆಸುತ್ತಿದೆ. ಜಮ್ಮ ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಿ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿದ ಬಳಿಕ ಉಗ್ರರ ಚಟುವಟಿಕೆಗೆ ಬ್ರೇಕ್ ಬಿದ್ದಿದೆ. ಆದರೆ ಅಡಗುತಾಣಗಲ್ಲಿ ಉಗ್ರರು ವಿಧ್ವಂಸಕ ಕೃತ್ಯ ಎಸಗಲು ಪ್ಲಾನ್ ರೆಡಿ ಮಾಡುತ್ತಿದ್ದಾರೆ. ಖಚಿತ ಮಾಹಿತಿ ಪಡೆದು ದಾಳಿ ಮಾಡಿದ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ.

ಪುಲ್ವಾಮದಲ್ಲಿ ಮೂವರು ಉಗ್ರರ ಹತ್ಯೆ, ತಪ್ಪಿತು ಮತ್ತೊಂದು ದುರಂತ!

ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ನಡೆದ ಕಾರ್ಯಚರಣೆಯಲ್ಲಿ ಉಗ್ರರ ಸದೆಬಡಿಯಲಾಗಿದೆ. ಉಗ್ರರ ಮಾಹಿತಿ ಪಡೆದ ಸೇನೆ ಸರ್ಚ್ ಆಪರೇಶನ್ ನಡೆಸಿತು. ಈ ವೇಳೆ ಅಡಗಿದ್ದ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಪ್ರತಿ ದಾಳಿ ನಡೆಸಿದ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಹತ್ಯೆಯಾದ ಉಗ್ರರಿಂದ A-47 ರೈಫಲ್ ಹಾಗೂ 2 ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ.

ಗಲ್ವಾನ್ ಆಯ್ತು, ಈಗ ಮತ್ತೊಂದು ಗಡಿಯಲ್ಲಿ ಚೀನಾ ಕ್ಯಾತೆ..!..

ಹತ್ಯೆಯಾದ ಉಗ್ರರ ಮಾಹಿತಿ ಲಭ್ಯವಾಗಿಲ್ಲ. ಈ ಕುರಿತು ಸೇನೆ ಮಾಹಿತಿ ಸಂಗ್ರಹಿಸುತ್ತಿದೆ.  ಮತ್ತಷ್ಟು ಉಗ್ರರು ಅಡಗಿರುವ ಶಂಕೆ ಮೇಲೆ ಸೇನೆ ಸರ್ಚ್ ಆಪರೇಶನ್ ಮುಂದುವರಿಸಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ನನ್ನ ತಂಗಿಯರಿಗಾಗಿ ಅವರನ್ನು ಬಿಟ್ಟುಬಿಡಿ: ತನ್ನ ಕೊಲ್ಲಲೆತ್ನಿಸಿದ ತಂದೆಯ ಬಿಡುಗಡೆಗೆ ಬೇಡಿದ ಬಾಲಕಿ
25 ಜನರ ಬಲಿ ಪಡೆದ ಗೋವಾ ಕ್ಲಬ್ ಬೆಂಕಿ ದುರಂತ ಸಂಭವಿಸಿದ ಕೆಲ ಗಂಟೆಗಳಲ್ಲೇ ಥೈಲ್ಯಾಂಡ್‌ಗೆ ಹಾರಿದ ಕ್ಲಬ್ ಮಾಲೀಕ