
ರಾಂಚಿ(ಮೇ.07): ಜಾರ್ಖಂಡ್‌ನಲ್ಲಿ ಭ್ರಷ್ಟಾಚಾರ ಪ್ರಕರಣದಲ್ಲಿ, ಜೆಎಂಎಂ ನಾಯಕ ಹೇಮಂತ್ ಸೊರೇನ್ ಬಂಧನವಾದ ಬೆನ್ನಲ್ಲೇ, ಜೆಎಂಎಂ ಮಿತ್ರ ಪಕ್ಷವಾಗಿರುವ ಕಾಂಗ್ರೆಸ್ ಸಚಿವ ಆಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿಯ ಮನೆಯ ಕೆಲಸದನವ ಬಳಿ 30 ಕೋಟಿ ರು. ನಗದು ಪತ್ತೆ ಆಗಿರುವುದು ಸಂಚಲನಕ್ಕೆ ಕಾರಣವಾಗಿದೆ.
ಜಾರ್ಖಂಡ್‌ನ ಅಧಿಕಾರಿಯೊಬ್ಬರ ಮೇಲಿನ ಭ್ರಷ್ಟಾಚಾರದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ಸೋಮವಾರ ಇಲ್ಲಿ ಆಲಂ ಆಪ್ತ ಅಧಿಕಾರಿಯ ಮನೆ ಕೆಲಸದವರ ಮನೆ ಮೇಲೆ ನಡೆಸಿದ ದಾಳಿಯಲ್ಲಿ ಭರ್ಜರಿ 25 ಕೋಟಿ ರು. ನಗದು ಪತ್ತೆಯಾಗಿದೆ. ದಾಳಿ ವೇಳೆ ಭಾರೀ ಪ್ರಮಾಣದ ನಗದು, ಚಿನ್ನಾಭರಣ ಮತ್ತು ಇತರೆ ಮಹತ್ವದ ದಾಖಲೆಗಳು ಲಭ್ಯವಾಗಿವೆ. ಇದು ರಾಜಕೀಯ ಸಂಚಲನಕ್ಕೆ ಕಾರಣವಾಗಿದ್ದು ಕಾಂಗ್ರೆಸ್ ಹಾಗೂ ಇಂಡಿಯಾ ಕೂಟದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
ಲೋಕಸಭಾ ಚುನಾವಣೆ 2024: 3ನೇ ಹಂತದ ಚುನಾವಣೆ ಇಂದು
ಆಗಿದ್ದೇನು?:
ಜಾರ್ಖಂಡ್‌ನ ಗ್ರಾಮೀಣಾಭಿವೃದ್ಧಿ ಇಲಾಖೆಯ ಮಾಜಿ ಮುಖ್ಯ ಎಂಜಿನಿಯರ್ ವೀರೇಂದ್ರಕುಮಾರ್ ರಾಮ್ ಅವರನ್ನು ಕಳೆದ ವರ್ಷ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿ. ಅಧಿಕಾರಿಗಳು ಬಂಧಿಸಿದ್ದರು. ಅಲ್ಲದೆ ರಾಮ್‌ಗೆ ಸೇರಿದ 39 ಕೋಟಿ ರು. ಮೌಲ್ಯದ ಆಸ್ತಿಯನ್ನು ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದರು. ಅದೇ ಪ್ರಕರಣದ ಭಾಗವಾಗಿ ಇ.ಡಿ. ಅಧಿಕಾರಿಗಳ ತಂಡವು ಸೋಮವಾರ, ಜಾರ್ಖಂಡ್ ಸಚಿವ, ಕಾಂಗ್ರೆಸ್ ಮುಖಂಡ ಆಲಂಗೀರ್ ಆಲಂರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ನಂಟಿನ ಹಲವು ಆಸ್ತಿಗಳ ಮೇಲೆ ದಾಳಿ ನಡೆಸಿದೆ.
'ನಾನು ಡಾನ್ಸ್ ಮಾಡ್ತಿರೋದನ್ನ ನೋಡಿ ಎಂಜಾಯ್ ಮಾಡಿದೆ' ‘DICTATOR’ ಪೋಸ್ಟ್‌ಗೆ ಮೋದಿ ಪ್ರತಿಕ್ರಿಯೆ!
ಈ ಪೈಕಿ ಸಂಜೀವ್ ಲಾಲ್ ಮನೆ ಕೆಲಸದವರ ಮನೆಯಲ್ಲಿ 30 ಕೋಟಿ ರು. ನಗದು ಪತ್ತೆಯಾಗಿದೆ. ನೋಟುಗಳನ್ನು ಎಣಿಸಲು 6 ಯಂತ್ರಗಳನ್ನು ಬಳಸಲಾಗಿದ್ದು, ಎಣಿಕೆ 1 ದಿನದಿಂದ ನಡೆಯುತ್ತಿದೆ. ಅದು ಪೂರ್ಣಗೊಂಡಾಗ ನಗದು ಮೌಲ್ಯ ಮತ್ತಷ್ಟು ಏರಿಕೆ ಆಗುವ ಸಾಧ್ಯತೆ ಇದೆ.
ನಂಗೇನೂ ಗೊತ್ತಿಲ್ಲ- ಆಲಂ:
ಈ ಕುರಿತು ಪ್ರತಿಕ್ರಿಯೆ ನೀಡಿರುವ ಪಕುರ್ ಕ್ಷೇತ್ರದ ಕಾಂಗ್ರೆಸ್ ಶಾಸಕರೂ ಆಗಿರುವ ಆಲಂಗೀರ್ ಆಲಂ ‘ಯಾಕೆ ದಾಳಿ ನಡೆದಿದೆ ಎಂದು ನನಗೆ ಗೊತ್ತಿಲ್ಲ. ಸಂಜೀವ್ ಲಾಲ್ ನನಗೆ ಸರ್ಕಾರ ನೀಡಿದ ಅಧಿಕಾರಿ. ಈ ಹಿಂದೆ ಅವರು ಇತರೆ ಹಲವು ಸಚಿವರ ಬಳಿಯೂ ಕಾರ್ಯನಿರ್ವಹಿಸಿದ್ದರು’ ಎಂದಷ್ಟೇ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ