
ಮುಂಬೈ[ಜ.04]: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಕಸರತ್ತು ಹಾಗೂ ರಾಜಕೀಯ ಪಕ್ಷಗಳು ಪರಸ್ಪರ ಕೆಸರೆರೆಚಾಟ ನಡೆಯುತ್ತಿರುವ ವೇಳೆಯೇ, ನವೆಂಬರ್ ತಿಂಗಳಿನಲ್ಲಿ ರಾಜ್ಯದಲ್ಲಿ ಬರೋಬ್ಬರಿ 300 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಕಾಲಿಕ ಮಳೆಯಿಂದಾಗಿ ಶೇ.70ರಷ್ಟುಬೆಳೆ ನಾಶವಾಗಿದ್ದರಿಂದ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಹಿಂದೆ 2015ರಲ್ಲಿ ಕೂಡ ಇಷ್ಟೇ ಸಂಖ್ಯೆಯ ರೈತರು ನೇಣಿಗೆ ಕೊರಳೊಡ್ಡಿದ್ದರು. ಕಳೆದ ಬಾರಿಗೆ ಹೋಲಿಸಿದರೆ ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಿನಲ್ಲಿ ರೈತರ ಆತ್ಮಹತ್ಯೆ ಪ್ರಮಾಣ ಶೇ.61ರಷ್ಟುಹೆಚ್ಚಳವಾಗಿದೆ. ಅಕ್ಟೋಬರ್ ತಿಂಗಳಿನಲ್ಲಿ 186 ರೈತರು ಆತ್ಮಹತ್ಯೆಗೆ ಶರಣಾದರೆ, ನವೆಂಬರ್‌ನಲ್ಲಿ 300 ಮಂದಿ ಬಲಿಯಾಗಿದ್ದಾರೆ.
ಬರ ಪೀಡಿತ ಮರಾಠವಾದ ಪ್ರದೇಶದಲ್ಲಿ 120 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಮಾನ್ಯವಾಗಿ ಅತೀ ಹೆಚ್ಚು ರೈತರು ಬಲಿಯಾಗುತ್ತಿದ್ದ ವಿದರ್ಭ ಪ್ರದೇಶದಲ್ಲಿ 112 ರೈತರ ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ. 2019ರ ಜನವರಿಯಿಂದ ನವೆಂಬರ್‌ವರೆಗೆ 2,532 ರೈತರು ಆತ್ಮಹತ್ಯೆ ಮಾಡಿಕೊಂಡರೆ ಇದೇ ಅವಧಿಯಲ್ಲಿ 2018ರಲ್ಲಿ 2,518 ಮಂದಿ ರೈತರು ಪ್ರಾಣತ್ಯಾಗ ಮಾಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ