
ನವದೆಹಲಿ(ಜೂ.19): ಕೊರೋನಾ ವೈರಸ್ ಅಟ್ಟಹಾಸ ದೇಶದಲ್ಲಿ ಮುಂದುವರಿದಿದ್ದು, ಗುರುವಾರ 349 ಮಂದಿ ಸಾವಿಗೀಡಾಗಿದ್ದಾರೆ. ಇದರೊಂದಿಗೆ ಒಟ್ಟಾರೆ ಮೃತರ ಸಂಖ್ಯೆ 12532ಕ್ಕೆ ಏರಿಕೆಯಾಗಿದೆ.
ಇದೇ ವೇಳೆ, 12,881 ಮಂದಿಯಲ್ಲಿ ಗುರುವಾರ ಹೊಸದಾಗಿ ಸೋಂಕು ಕಾಣಿಸಿಕೊಂಡಿದ್ದು, ಒಟ್ಟು ವೈರಸ್ ಪೀಡಿತರ ಸಂಖ್ಯೆ 3.81 ಲಕ್ಷಕ್ಕೆ ಹೆಚ್ಚಳವಾಗಿದೆ. ಜೂ.1ರಿಂದ 18ರವರೆಗೆ ದೇಶದಲ್ಲಿ 1.76 ಲಕ್ಷ ಹೊಸ ಕೇಸ್‌ಗಳು ಪತ್ತೆಯಾಗಿವೆ.
ಮಹಾರಾಷ್ಟ್ರ, ತಮಿಳುನಾಡು, ಗುಜರಾತ್ ಹಾಗೂ ಉತ್ತರಪ್ರದೇಶಗಳು ಅತಿ ಹೆಚ್ಚು ಕೊರೋನಾಪೀಡಿತ ರಾಜ್ಯಗಳಾಗಿ ಮುಂದುವರಿದಿವೆ. ಸಮಾಧಾನದ ಸಂಗತಿಯೆಂದರೆ, ಸೋಂಕು ಹಾಗೂ ಸಾವಿನ ಪ್ರಮಾಣ ಹೆಚ್ಚಳದ ನಡುವೆಯೇ ಕೊರೋನಾದಿಂದ ಚೇತರಿಸಿಕೊಳ್ಳುತ್ತಿರುವವರ ಪ್ರಮಾಣ ಶೇ.53 ಕ್ಕೇರಿಕೆಯಾಗಿದೆ.
ಕ್ವಾರಂಟೈನ್‌ನಲ್ಲಿ ಇರುವವರ ಕಣ್ಗಾವಲಿಗೆ ತಂಡ: ನಿಯಮ ಉಲ್ಲಂಘಿಸಿದ್ರೆ FIR
ಅತಿಹೆಚ್ಚು ಕೊರೋನಾ ಸೋಂಕಿತ ರಾಷ್ಟ್ರಗಳ ಪಟ್ಟಿಯಲ್ಲಿ ಅಮೆರಿಕ ಮೊದಲ ಸ್ಥಾನದಲ್ಲೇ ಮುಂದುವರೆದಿದೆ. ಭಾರತ ನಾಲ್ಕನೇ ಸ್ಥಾನದಲ್ಲಿದೆ. ಎರಡು ಹಾಗೂ ಮೂರನೇ ಸ್ಥಾನದಲ್ಲಿ ಕ್ರಮವಾಗಿ ಬ್ರೆಜಿಲ್ ಹಾಗೂ ರಷ್ಯಾ ದೇಶಗಳಿವೆ. ಭಾರತದಲ್ಲಿ ಜೂನ್ 19ರ ಬೆಳಗಿನ ವರದಿಯಂತೆ ಎರಡು ಲಕ್ಷದ ಐದುಸಾವಿರ ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಇನ್ನು ದೇಶದಲ್ಲಿ 1,63,305 ಸಕ್ರಿಯ ಕೊರೋನಾ ಪ್ರಕರಣಗಳಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ