ಸ್ವಾತಂತ್ರ್ಯ ದಿನ ಹಿನ್ನೆಲೆ: 350 ಪೊಲೀಸರಿಗೆ ಈಗಲೇ ಕ್ವಾರಂಟೈನ್‌!

Published : Aug 10, 2020, 10:51 AM ISTUpdated : Aug 10, 2020, 11:11 AM IST
ಸ್ವಾತಂತ್ರ್ಯ ದಿನ ಹಿನ್ನೆಲೆ: 350 ಪೊಲೀಸರಿಗೆ ಈಗಲೇ ಕ್ವಾರಂಟೈನ್‌!

ಸಾರಾಂಶ

ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ 350 ಪೊಲೀಸರು| ಸ್ವಾತಂತ್ರ್ಯ ದಿನ ಹಿನ್ನೆಲೆ: 350 ಪೊಲೀಸರಿಗೆ ಈಗಲೇ ಕ್ವಾರಂಟೈನ್‌!

ನವದೆಹಲಿ(ಆ.10): ಕೋವಿಡ್‌ ಹಿನ್ನೆಲೆಯಲ್ಲಿ ಆ.15ರ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ 350 ಪೊಲೀಸರನ್ನು ಈಗಿನಿಂದಲೇ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

ಪ್ರಧಾನಿ ಸೇರಿ ಆಯ್ದ ಗಣ್ಯರು ಭಾಗವಹಿಸುವ ಹಿನ್ನೆಲೆಯಲ್ಲಿ ಅವರಿಗೆ ಯಾವುದೇ ಸೋಂಕು ತಗುಲದೇ ಇರಲಿ ಎನ್ನುವ ಕಾರಣಕ್ಕಾಗಿ 350 ಪೊಲೀಸರನ್ನು ಡೆಲ್ಲಿ ಕಂಟೋನ್ಮೆಂಟ್‌ನ ಪೊಲೀಸ್‌ ಕಾಲೋನಿ ಕಟ್ಟಡದಲ್ಲಿ ಯಾರ ಸಂಪರ್ಕವೂ ಇಲ್ಲದ ರೀತಿಯಲ್ಲಿ, ಅಗತ್ಯ ಸೌಕರ್ಯಗಳನ್ನೆಲ್ಲ ನೀಡಿ ಇರಿಸಲಾಗಿದೆ.

ಈ ಬಾರಿಯ ಧ್ವಜಾರೋಹಣ ಯಾರು ಮಾಡ್ತಾರೆ? ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗ್ತಾರಾ?

ಪ್ರತಿದಿನವೂ ಪರೇಡ್‌ ಅಭ್ಯಾಸವಾದ ಬಳಿಕ ಪ್ರತಿಯೊಬ್ಬರೂ ಕಡ್ಡಾಯವಾಗಿ ಸ್ಯಾನಿಟೈಸ್‌ಗೆ ಒಳಗಾಗುತ್ತಿದ್ದಾರೆ. ಇದಲ್ಲದೇ ಸುರಕ್ಷತೆ ದೃಷ್ಟಿಯಿಂದ ತೆಗೆದುಕೊಳ್ಳಬಹುದಾದ ಎಲ್ಲ ನಿಯಮಗಳನ್ನೂ ಪಾಲಿಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ನನ್ನ ತಂಗಿಯರಿಗಾಗಿ ಅವರನ್ನು ಬಿಟ್ಟುಬಿಡಿ: ತನ್ನ ಕೊಲ್ಲಲೆತ್ನಿಸಿದ ತಂದೆಯ ಬಿಡುಗಡೆಗೆ ಬೇಡಿದ ಬಾಲಕಿ
25 ಜನರ ಬಲಿ ಪಡೆದ ಗೋವಾ ಕ್ಲಬ್ ಬೆಂಕಿ ದುರಂತ ಸಂಭವಿಸಿದ ಕೆಲ ಗಂಟೆಗಳಲ್ಲೇ ಥೈಲ್ಯಾಂಡ್‌ಗೆ ಹಾರಿದ ಕ್ಲಬ್ ಮಾಲೀಕ