2024ರಲ್ಲಿ 37 ಲಕ್ಷ ನಾಯಿ ಕಡಿತ, 54 ಜನ ರೇಬಿಸ್‌ಗೆ ಬಲಿ : ಕೇಂದ್ರ

Published : Jul 23, 2025, 05:53 AM ISTUpdated : Jul 23, 2025, 10:30 AM IST
dog bite

ಸಾರಾಂಶ

2024ರಲ್ಲಿ ದೇಶದಲ್ಲಿ 37 ಲಕ್ಷ ಜನರು ನಾಯಿ ಕಡಿತಕ್ಕೆ ಒಳಗಾಗಿದ್ದಾರೆ. ಈ ಪೈಕಿ 54 ಮಂದಿ ಶಂಕಿತ ರೇಬಿಸ್‌ಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಮಾಹಿತಿ ನೀಡಿದೆ.

ನವದೆಹಲಿ: 2024ರಲ್ಲಿ ದೇಶದಲ್ಲಿ 37 ಲಕ್ಷ ಜನರು ನಾಯಿ ಕಡಿತಕ್ಕೆ ಒಳಗಾಗಿದ್ದಾರೆ. ಈ ಪೈಕಿ 54 ಮಂದಿ ಶಂಕಿತ ರೇಬಿಸ್‌ಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಮಾಹಿತಿ ನೀಡಿದೆ.

ಲೋಕಸಭೆಯಲ್ಲಿ ಲಿಖಿತ ಉತ್ತರ ನೀಡಿದ ಮೀನುಗಾರಿಕೆ, ಪಶು ಸಂಗೋಪನೆ ಮತ್ತು ಹೈನುಗಾರಿಕೆ ರಾಜ್ಯ ಸಚಿವ ಎಸ್‌. ಪಿ. ಸಿಂಗ್‌ ‘ 2024ರಲ್ಲಿ 37.17 ಲಕ್ಷ ಜನರು ನಾಯಿ ಕಡಿತಕ್ಕೆ ಒಳಗಾಗಿದ್ದಾರೆ. ಇದರಲ್ಲಿ 54 ಮಂದಿ ಶಂಕಿತ ರೇಬಿಸ್‌ನಿಂದ ಸಾವನ್ನಪ್ಪಿದ್ದಾರೆ. ಈ ಅಂಕಿ ಅಂಶಗಳನ್ನು ರಾಷ್ಟ್ರೀಯ ರೋಗ ನಿಯಂತ್ರಣದ ಅಂಕಿ ಅಂಶಗಳಿಂದ ಸಂಗ್ರಹಿಸಲಾಗಿದೆ’ ಎಂದಿದ್ದಾರೆ.

ಆರೇ ತಿಂಗಳಲ್ಲಿ ರಾಜ್ಯದ 2.3 ಲಕ್ಷ ಜನರಿಗೆ ನಾಯಿ ಕಡಿತ!

ರಾಜ್ಯದಲ್ಲಿ ನಾಯಿ ಕಡಿತ ಪ್ರಕರಣಗಳು ಹೆಚ್ಚಾಗಿದ್ದು, ಆರೇ ತಿಂಗಳಲ್ಲಿ 2.3 ಲಕ್ಷಕ್ಕೂ ಅಧಿಕ ನಾಯಿ ಕಡಿತ ಪ್ರಕರಣ, 19 ರೇಬೀಸ್ ಸಾವುಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

2025ರ ಜ.1ರಿಂದ ಜೂ.30ರ ನಡುವೆ 2,31,091 ನಾಯಿ ಕಡಿತ ವರದಿಯಾಗಿದ್ದು, ಇದೇ ಅವಧಿಯಲ್ಲಿ ಕಳೆದ ವರ್ಷ 1,69,672 ನಾಯಿ ಕಡಿತ ಮತ್ತು 18 ರೇಬೀಸ್ ಸಾವು ವರದಿಯಾಗಿದ್ದವು. 2024ರಲ್ಲಿ ರಾಜ್ಯದಲ್ಲಿ ಇಡೀ ವರ್ಷದಲ್ಲಿ 3.6 ಲಕ್ಷ ನಾಯಿ ಕಡಿತ ಹಾಗೂ 42 ರೇಬೀಸ್ ಸಾವು ಸಂಭವಿಸಿದ್ದವು. 2023ರ ಮೊದಲ ಆರು ತಿಂಗಳ ಅವಧಿಗೆ ಹೋಲಿಸಿದರೆ ಈ ವರ್ಷ ನಾಯಿ ಕಡಿತ ಪ್ರಕರಣಗಳ ಸಂಖ್ಯೆಯಲ್ಲಿ ಶೇ.36.20ರಷ್ಟು ಹೆಚ್ಚಳ ಕಂಡುಬಂದಿದೆ.

ನಾಯಿ ಕಡಿತವನ್ನು ಅಧಿಸೂಚಿತ ಕಾಯಿಲೆ ಪಟ್ಟಿಗೆ 2022ರಲ್ಲಿ ಕರ್ನಾಟಕ ಸರ್ಕಾರ ಸೇರ್ಪಡೆ ಮಾಡಿತ್ತು. ಅದಾದ ನಂತರ ಎಲ್ಲ ಸರ್ಕಾರಿ ಹಾಗೂ ಖಾಸಗಿ ಆರೋಗ್ಯ ಸಂಸ್ಥೆಗಳು ನಾಯಿ ಕಡಿತ ಹಾಗೂ ದೃಢಪಟ್ಟ ರೇಬೀಸ್‌ ಪ್ರಕರಣಗಳನ್ನು ಆರೋಗ್ಯ ಇಲಾಖೆಗೆ ವರದಿ ಮಾಡುತ್ತಿವೆ. 2022ರ ನಂತರ ರಾಜ್ಯದಲ್ಲಿ ಅತಿ ಹೆಚ್ಚು ನಾಯಿ ಕಡಿತ ಪ್ರಕರಣಗಳು ಈ ವರ್ಷ ವರದಿಯಾಗಿವೆ.

 ವಿಜಯಪುರದಲ್ಲಿ ಅತಿ ಹೆಚ್ಚು:

ರಾಜ್ಯದಲ್ಲಿ ಅತಿ ಹೆಚ್ಚು ನಾಯಿ ಕಡಿತ ಪ್ರಕರಣಗಳು ವರದಿಯಾಗಿರುವುದು ವಿಜಯಪುರ ಜಿಲ್ಲೆಯಲ್ಲಿ. ಈ ವರ್ಷದ ಆರೇ ತಿಂಗಳ ಅವಧಿಯಲ್ಲಿ ಅಲ್ಲಿ 15,527 ಮಂದಿಗೆ ನಾಯಿಗಳು ಕಡಿದಿವೆ. ಬಿಬಿಎಂಪಿ (13,831), ಹಾಸನ (13388), ದಕ್ಷಿಣ ಕನ್ನಡ (12524) ಹಾಗೂ ಬಾಗಲಕೋಟೆ (12,392) ಜಿಲ್ಲೆಗಳು ನಂತರದ ಸ್ಥಾನದಲ್ಲಿವೆ.

ಅತಿ ಕಡಿಮೆ ನಾಯಿ ಕಡಿತ ಪ್ರಕರಣಗಳು ವರದಿಯಾಗಿರುವುದು ಯಾದಗಿರಿ ಜಿಲ್ಲೆಯಲ್ಲಿ. ಅಲ್ಲಿ 1132 ಪ್ರಕರಣಗಳು ವರದಿಯಾಗಿವೆ. ಚಾಮರಾಜನಗರ (1810), ಕೊಡಗು (2523) ನಂತರದ ಸ್ಥಾನದಲ್ಲಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..