
ನವದೆಹಲಿ(ಜೂ.03): ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡುಬಂದಿದ್ದು, ಗುರುವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ಒಟ್ಟು 3712 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ.
ಇದೇ ವೇಳೆಯಲ್ಲಿ ಒಟ್ಟು 5 ಸೋಂಕಿತರು ಸಾವನ್ನಪ್ಪಿದ್ದಾರೆ. 5 ಸಾವುಗಳು ಕೇರಳದಲ್ಲೇ ವರದಿಯಾಗಿವೆ. ಸಕ್ರಿಯ ಸೋಂಕಿತರ ಸಂಖ್ಯೆಯು 19,509ಕ್ಕೆ ಏರಿಕೆಯಾಗಿದೆ. ಮಂಗಳವಾರ ಶೇ.0.6 ಇದ್ದ ದೈನಂದಿನ ಪಾಸಿಟಿವಿಟಿ ದರವು 0.84 ಕ್ಕೆ ಏರಿಕೆಯಾಗಿದ್ದು, ವಾರದ ಪಾಸಿಟಿವಿಟಿ ದರವು ಶೇ. 0.67 ರಷ್ಟಿದೆ. ಮಹಾರಾಷ್ಟ್ರದಲ್ಲಿ ಮಂಗಳವಾರ 3 ತಿಂಗಳ ದಾಖಲೆ ಎನ್ನಬಹುದಾದ 1000 ಪ್ರಕರಣ ದಾಖಲಾಗಿದ್ದು, ಇದು ಕೋವಿಡ್ ಏರಿಕೆಗೆ ಕಾರಣ ಎಂದು ವಿಶ್ಲೇಷಿಸಲಾಗಿದೆ.
Covid Crisis: ಕರ್ನಾಟಕದಲ್ಲಿ 300 ಗಡಿಗೆ ಕೊರೋನಾ ಕೇಸ್!
ಈ ನಡುವೆ, ದೇಶದಲ್ಲಿ ಕೋವಿಡ್ ಚೇತರಿಕೆ ದರ ಶೇ. 98.74ರಷ್ಟಿದೆ. ಈವರೆಗೆ ಕೋವಿಡ್ ಸೋಂಕಿಗೆ ತುತ್ತಾದವರ ಸಂಖ್ಯೆಯು 4,31,64,544ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಮೃತಪಟ್ಟವರ ಪ್ರಮಾಣ 5,24,641ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಇದುವರೆಗೆ 193.70 ಕೋಟಿ ಡೋಸು ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ