
ನವದೆಹಲಿ: ಅಕ್ರಮ ಹಣ ವರ್ಗಾವಣೆ ತಡೆ ಕಾನೂನಿನ ಅಡಿಯಲ್ಲಿ ಜಾರಿ ನಿರ್ದೇಶನಾಲಯವು (ಇ.ಡಿ) ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿಯವರ ಮುಂಬೈನಲ್ಲಿರುವ 17 ಅಂತಸ್ತಿನ 3,716 ಕೋಟಿ ರು. ಮೌಲ್ಯದ ಐಷಾರಾಮಿ ಮನೆ ‘ಅಬೋಡ್’ ಅನ್ನು ಬುಧವಾರ ಮುಟ್ಟುಗೋಲು ಹಾಕಿಕೊಂಡಿದೆ. ಈ ಮೂಲಕ ಇ.ಡಿ.ಯಿಂದ ಮುಟ್ಟುಗೋಲಾದ ಅಂಬಾನಿ ಆಸ್ತಿಯ ಒಟ್ಟು ಮೌಲ್ಯ 15,700 ಕೋಟಿ ರು.ಗೆ ಏರಿಕೆಯಾಗಿದೆ.
2017ರಿಂದ 2019ರ ನಡುವೆ ಯೆಸ್ ಬ್ಯಾಂಕ್ ರಿಲಯನ್ಸ್ ಗ್ರೂಪ್ ಕಂಪನಿಗಳಿಗೆ ನೀಡಿದ ಸುಮಾರು 3,000 ಕೋಟಿ ರು. ಸಾಲವನ್ನು ಬೇರೆಡೆಗೆ ತಿರುಗಿಸಿದ ಆರೋಪ ಹಿನ್ನೆಲೆಯಲ್ಲಿ ಇ.ಡಿ. ತನಿಖೆ ನಡೆಸುತ್ತಿದೆ. ಯೆಸ್ ಬ್ಯಾಂಕ್ನಿಂದ ಅಕ್ರಮವಾಗಿ ಸಾಲ ಪಡೆದಿರುವುದು ಮತ್ತು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಆರ್ಥಿಕ ನಿಯಮಗಳನ್ನು ಉಲ್ಲಂಘಿಸಿರುವ ಆರೋಪವೂ ಅನಿಲ್ ಅಂಬಾನಿ ಮೇಲಿದೆ.
ಅಂಬಾನಿ 2ನೇ ಸುತ್ತಿನ ವಿಚಾರಣೆಗಾಗಿ ದೆಹಲಿಯಲ್ಲಿ ಇ.ಡಿ ಮುಂದೆ ಹಾಜರಾಗುವ ನಿರೀಕ್ಷೆಯಿದೆ. ಮೊದಲು 2025ರ ಆಗಸ್ಟ್‌ನಲ್ಲಿ ಹಾಜರಾಗಿ ಹೇಳಿಕೆಯನ್ನು ದಾಖಲಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ