ಭಾರತದಲ್ಲಿ ಕೊರೋನಾ ಎಷ್ಟು ಪ್ರಮಾಣದಲ್ಲಿದೆ? ಇಲ್ಲಿದೆ ಅಂಕಿ-ಸಂಖ್ಯೆ ವಿವರ

By Suvarna News  |  First Published Aug 11, 2021, 7:40 PM IST

* ಭಾರತದ ದೇಶದ ಕೊರೋನಾ ಅಂಕಿ-ಸಂಖ್ಯೆ
* ದೇಶದಲ್ಲಿ ಚೇತರಿಕೆ ಪ್ರಮಾಣ ಶೇ.97.45
* ದಿನದ ಪಾಸಿಟಿವಿಟಿ ದರ 2.16
* ಕೇಂದ್ರ ಆರೋಗ್ಯ ಇಲಾಖೆಯಿಂದ ಮಾಹಿತಿ


ನವದೆಹಲಿ, (ಆ.11): ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 38,353 ಹೊಸ ಕೊವಿಡ್ -19 ಪ್ರಕರಣಗಳು ಪತ್ತೆಯಾಗಿದ್ದು, 497 ಮಂದಿ ಸಾವನ್ನಪ್ಪಿದ್ದಾರೆ.

 ಹೊಸ ಪ್ರಕರಣಗಳೊಂದಿಗೆ ಭಾರತದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 32,036,511 ಕ್ಕೆ ತಲುಪಿದ್ರೆ, ದೇಶದಲ್ಲಿ ಕೋವಿಡ್ ನಿಂದ ಈವರೆಗೆ 4,29,179 ಮಂದಿ ಸಾವನ್ನಪ್ಪಿದ್ದಾರೆ. 

Latest Videos

undefined

ಕೋವಿಡ್‌ ಗುಣಮುಖರಲ್ಲಿ ಕ್ಷಯ ಪತ್ತೆಗೆ ಅಭಿಯಾನ

 ಸಕ್ರಿಯ ಪ್ರಕರಣಗಳ ಸಂಖ್ಯೆ 3,86,351 ಕ್ಕೆ ಇಳಿದಿದ್ದು, ಇಂದು (ಆ.11)  40,013 ಮಂದಿ ಗುಣಮುಖರಾಗಿದ್ದಾರೆ. ಇದರೊಂದಿಗೆ ಒಟ್ಟು 3,12,20,981 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಹೇಳಿದೆ

 ದೇಶದಲ್ಲಿ ಚೇತರಿಕೆ ಪ್ರಮಾಣ ಶೇ.97.45ರಷ್ಟಿದೆ. ದಿನದ ಪಾಸಿಟಿವಿಟಿ ದರ 2.16ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ.2.34ರಷ್ಟಿದೆ ಎಂದು ಸಚಿವಾಲಯದ ಅಂಕಿಅಂಶ ತಿಳಿಸಿದೆ. ಈವರೆಗೆ ದೇಶದಲ್ಲಿ 51.90 ಕೋಟಿ ಡೋಸ್ ನೀಡಲಾಗಿದೆ.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಪ್ರಕಾರ ಆಗಸ್ಟ್ 10 ರವರೆಗೆ ಒಟ್ಟು 48,50,56,507 ಮಾದರಿಗಳನ್ನು ಪರೀಕ್ಷಿಸಲಾಗಿದೆ.

click me!