ಪಶ್ಚಿಮ ಬಂಗಾಳದಲ್ಲಿ ಭಾರೀ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೇರಿ ಬೀಗುತ್ತಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮೂರು ದಿನಗಳ ಮುಂಬೈ ಪ್ರವಾಸ ತೆರಳುತ್ತಿದ್ದು, ಈ ಸಂದರ್ಭದಲ್ಲಿ ಅವರು ಹಲವು ರಾಜಕೀಯ ನಾಯಕರು, ಉದ್ಯಮಿಗಳು ಹಾಗೂ ಬಂಡವಾಳ ಹೂಡಿಕೆದಾರರನ್ನು ಭೇಟಿಯಾಗಲಿದ್ದಾರೆ.
ಮುಂಬೈ(ನ.30): ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ಮೂರು ದಿನಗಳ ಪ್ರವಾಸಕ್ಕಾಗಿ ಮುಂಬೈಗೆ ಆಗಮಿಸಲಿದ್ದಾರೆ. ಈ ಭೇಟಿ ವೇಳೆ ಅವರು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ(Uddhav Thackeray) ಹಾಗೂ ರಾಷ್ಟ್ರೀಯ ಕಾಂಗ್ರೆಸ್ ಪಾರ್ಟಿ(NCP)ಯ ಮುಖ್ಯಸ್ಥ ಶರದ್ ಪವರ್(Sharad Pawar) ಅವರನ್ನು ಭೇಟಿಯಾಗಲಿದ್ದಾರೆ. ಈ ಭೇಟಿ ವೇಳೆ ಮಮತಾ ಬ್ಯಾನರ್ಜಿ ಕೈಗಾರಿಕೋದ್ಯಮಿಗಳು, ಹೂಡಿಕೆದಾರರು ಹಾಗೂ ಉದ್ಯಮಿಗಳ ಜೊತೆ ಸಭೆ ನಡೆಸುವ ನಿರೀಕ್ಷೆ ಇದ್ದು, ಇವರೆಲ್ಲರಿಗೂ 'ಬೆಂಗಾಲ್ ಗ್ಲೋಬಲ್ ಬ್ಯುಸಿನೆಸ್ ಸಮಿಟ್'(Bengal Global Business Summit) ಗೆ ಆಹ್ವಾನ ನೀಡುವ ಸಾಧ್ಯತೆ ಇದೆ. ಬೆಂಗಾಲ್ ಗ್ಲೋಬಲ್ ಬ್ಯುಸಿನೆಸ್ ಸಮಿಟ್ ಮುಂದಿನ ವರ್ಷ ಎಪ್ರಿಲ್‌ನಲ್ಲಿ ಬಂಗಾಳದಲ್ಲಿ ನಡೆಯಲಿದೆ.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಟಿಎಂಸಿ ನಾಯಕರೊಬ್ಬರು, ಮಮತಾ ಮೂರು ದಿನಗಳ ಮುಂಬೈ ಪ್ರವಾಸ ಕೈಗೊಳ್ಳಲಿದ್ದು, ಈ ವೇಳೆ ಅವರು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಹಾಗೂ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಜೊತೆ ಮಾತುಕತೆ ನಡೆಸಲಿದ್ದಾರೆ, ಜೊತೆಗೆ ಈ ಭೇಟಿ ವೇಳೆ ರಾಜ್ಯಕ್ಕೆ ಬಂಡವಾಳ ಆಕರ್ಷಿಸುವ ಗುರಿಯನ್ನು ಕೂಡ ಸಿಎಂ ಮಮತಾ ಹೊಂದಿದ್ದಾರೆ ಎಂದರು.
Congress to TMC:ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸೇರಿದ ಕಾಂಗ್ರೆಸ್ ನಾಯಕ ಕೀರ್ತಿ ಅಜಾದ್!
ಕಳೆದ ವಾರ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ತಮ್ಮ ದೆಹಲಿ ಪ್ರವಾಸದ ವೇಳೆ ಪ್ರಧಾನಿ( Prime Minister) ನರೇಂದ್ರ ಮೋದಿ(Narendra Modi)ಯವರನ್ನು ಭೇಟಿಯಾಗಿದ್ದರು. ಇದೇ ವೇಳೆ ಎಐಸಿಸಿ ನಾಯಕಿ ಸೋನಿಯಾ ಗಾಂಧಿ ಅವರನ್ನು ಕೂಡ ಭೇಟಿಯಾಗುವ ನಿರೀಕ್ಷೆ ಇತ್ತು. ಆದರೆ ಕಾಂಗ್ರೆಸ್ ಹಾಗೂ ತೃಣಮೂಲ ಕಾಂಗ್ರೆಸ್ ನಡುವಿನ ಬದಲಾದ ರಾಜಕೀಯ ಸಮೀಕರಣಗಳಿಂದಾಗಿ ಮಮತಾ ಬ್ಯಾನರ್ಜಿ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ(Sonia Gandhi)ಯವರನ್ನು ಭೇಟಿಯಾಗುವ ಯೋಜನೆಯನ್ನು ರದ್ದುಗೊಳಿಸಿದರು.
ಪಶ್ಚಿಮ ಬಂಗಾಳದಲ್ಲಿ ಅನೇಕ ಕಾಂಗ್ರೆಸ್ ನಾಯಕರು, ಪಕ್ಷ ತೊರೆದು ತೃಣಮೂಲ ಕಾಂಗ್ರೆಸ್ ಪಕ್ಷ(TMC)ವನ್ನು ಸೇರಿದ್ದರು. ಇದು ಎರಡು ಪಕ್ಷಗಳ ಉನ್ನತ ಮಟ್ಟದ ನಾಯಕರ ಮಧ್ಯೆ ಶೀತಲ ಸಮರಕ್ಕೆ ಕಾರಣವಾಗಿತ್ತು. ಚಳಿಗಾಲದ ಅಧಿವೇಶನ ಆರಂಭಕ್ಕೂ ಮೊದಲು ಕಾಂಗ್ರೆಸ್ ಪಕ್ಷ ಕರೆದಿದ್ದ ವಿರೋಧ ಪಕ್ಷಗಳ ಸಭೆಯಲ್ಲಿಯೂ ಕೂಡ ತೃಣಮೂಲ ಕಾಂಗ್ರೆಸ್ ಪಕ್ಷ ಭಾಗಿಯಾಗಿರಲಿಲ್ಲ. ಪಶ್ಚಿಮ ಬಂಗಾಳದಲ್ಲಿ ಆಡಳಿತ ಪಕ್ಷವಾಗಿರುವ ತೃಣಮೂಲ ಕಾಂಗ್ರೆಸ್ ತಾನೇ ಪ್ರಮುಖ ವಿರೋಧ ಪಕ್ಷ ಎಂದು ಬಿಂಬಿಸಿಕೊಳ್ಳಲು ಹಾಗೂ ಮುಂಬರುವ 2024ರ ಲೋಕಸಭಾ ಚುನಾವಣೆ(Lok Sabha elections 2024.)ಯಲ್ಲಿ ಬಿಜೆಪಿಗೆ ಪ್ರತಿಯಾಗಿ ಆಯ್ಕೆಯಾಗಿ ಹೊರ ಹೊಮ್ಮಲು ಮಾಡುತ್ತಿರುವ ಪ್ರಯತ್ನ ಇದು ಎಂದು ತೃಣಮೂಲ ಕಾಂಗ್ರೆಸ್ ಪಕ್ಷದ ಈ ನಡೆಯನ್ನು ಬಿಂಬಿಸಲಾಗುತ್ತಿದೆ.
ಮೋದಿ, ದೀದಿ, ಅದಾರ್‌ಗೆ ಟೈಮ್ಸ್ ವರ್ಷದ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನ!
ಕಳೆದ ಮೇ ತಿಂಗಳಲ್ಲಿ ನಡೆದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಸಂಪೂರ್ಣ ಬಹುಮತದಿಂದ ತೃಣಮೂಲ ಕಾಂಗ್ರೆಸ್ ಗೆದ್ದು ಬಂದು ಮಮತಾ ಬ್ಯಾನರ್ಜಿ ಮೂರನೇ ಬಾರಿ ಪಶ್ಚಿಮ ಬಂಗಾಳ ಸಿಎಂ ಆಗಿ ಆಯ್ಕೆಯಾದರು. ಚುನಾವಣಾ ಫಲಿತಾಂಶದ ಬಳಿಕ ರಾಜ್ಯದಲ್ಲಿ ಗಲಭೆಗಳು ಹೆಚ್ಚಾಗಿದ್ದವು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ನನ್ನ ಎರಡನೇ ಗುರಿಯಾಗಿದೆ. ಇಲ್ಲಿನ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ವಿಶೇಷ ಅಧಿಕಾರಿಗಳನ್ನು ನೇಮಕ ಮಾಡುತ್ತೇನೆ. ಬಂಗಾಳದ ಹಿಂಸಾಚಾರದಲ್ಲಿ ಅನೇಕ ಅಮಾಯಕ ಜೀವಗಳು ಬಲಿಯಾಗಿವೆ. ಇದು ಬೇಸರದ ಸಂಗತಿ ಎಂದು ಪ್ರಮಾಣ ವಚನ ಸ್ವೀಕರಿಸಿದ ವೇಳೆ ಮಮತಾ ಹೇಳಿದ್ದರು.