
ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಮೂರನೇ ಹಂತದ ಲೋಕಸಭಾ ಚುನಾವಣೆಗೆ ಮತದಾನ ಭರದಿಂದ ಸಾಗಿದ್ದು, ಗಣ್ಯಾತಿಗಣ್ಯರು ತಮ್ಮ ತಮ್ಮ ಲೋಕಸಭಾ ಕ್ಷೇತ್ರಗಳಲ್ಲಿ ಮತ ಚಲಾಯಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ಅಹ್ಮದಾಬಾದ್‌ನ ನಿಶಾನ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಮತ ಚಲಾಯಿಸಿದರು. ಇದಕ್ಕೂ ಮೊದಲು ಪ್ರಧಾನಿ ಕಾಲ್ನಡಿಗೆಯ ಮೂಲಕ ಜನರತ್ತ ಕೈಬೀಸಿಕೊಂಡು ಮತಗಟ್ಟೆ ಕೇಂದ್ರಕ್ಕೆ ಆಗಮಿಸಿದ್ದರು. ಕಳೆದ ಗುಜರಾತ್ ವಿಧಾನಸಭೆ ಮತ್ತು ಕಳೆದ ಲೋಕಸಭೆ ಮತದಾನಕ್ಕೂ ಹೀಗೆ ಪ್ರಧಾನಿ ಮೋದಿ ಆಗಮಿಸಿದ್ದರು, ಅಮಿತ್ ಷಾ ಕೂಡ ಪ್ರಧಾನಿ ಜೊತೆಗಿದ್ದರು. ಇತ್ತ ಪ್ರಧಾನಿ ನರೇಂದ್ರ ಮೋದಿಯನ್ನು ನೋಡುವುದಕ್ಕಾಗಿ ರಸ್ತೆಯುದ್ಧಕ್ಕೂ ಜನ ನಿಂತಿದ್ದರು.
ಮತದಾನ ಚಲಾಯಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಪ್ರಧಾನಿ ಮೋದಿ ಇಂದು ದೇಶಾದ್ಯಂತ ಮೂರನೇ ಹಂತದ ಮತದಾನ ನಡೆಯುತ್ತಿದೆ. ದೇಶದ ಜನ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸುವಂತೆ ಅವರು ಮನವಿ ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ