
ನವದೆಹಲಿ(ಜ.01): ರೂಪಾಂತರ ಕೊರೋನಾ ವೈರಸ್ ತಳಿ ಭಾರತದ ತಲೆನೋವು ಹೆಚ್ಚಿಸುತ್ತಿದೆ. ಬ್ರಿಟನ್ ವಿಮಾನಕ್ಕೆ ಹೇರಿರುವ ನಿರ್ಭಂಧ ಮುಂದುವರಿಸಲಾಗಿದೆ. ಆದರೆ ಪ್ರಕರಣ ಸಂಖ್ಯೆ ಮಾತ್ರ ಕಡಿಮೆಯಾಗುತ್ತಿಲ್ಲ. ಇಂದು(ಜನವವರಿ 1) ಭಾರತದಲ್ಲಿ ನಾಲ್ಕು ಪ್ರಕರಣಗಳು ದಾಖಲಾಗಿದೆ. ಈ ಮೂಲಕ ರೂಪಾಂತರ ಕೊರೋನಾ ವೈರಸ್ ಸಂಖ್ಯೆ 29ಕ್ಕೇರಿಕೆಯಾಗಿದೆ.
ಆಸ್ಟ್ರಾಝೆನಿಕಾ ಕೊರೋನಾ ಲಸಿಕೆ ತುರ್ತು ಬಳಕೆಗೆ ಭಾರತ ಡ್ರಗ್ ರೆಗ್ಯೂಲೇಟರಿ ಅನುಮತಿ
ಭಾರತದಲ್ಲಿ ಪತ್ತೆಯಾಗಿರುವ ಈ ನಾಲ್ಕು ರೂಪಾಂತರ ಕೊರೋನಾ ವೈರಸ್ ಪ್ರಕರಣದಲ್ಲಿ ಮೂರು ಪ್ರಕರಣಗಳು ಬೆಂಗಳೂರಿನ ಲ್ಯಾಬ್‌ನಲ್ಲಿ ಪತ್ತೆಯಾಗಿದ್ದರೆ, ಒಂದು ಪ್ರಕರಣ ಹೈದರಾಬಾದ್ ಲ್ಯಾಬ್‌ನಲ್ಲಿ ಪತ್ತೆಯಾಗಿದೆ.
ದೇಶದಲ್ಲಿ 29 ರೂಪಾಂತರ ಕೊರೋನಾ ವೈರಸ್ ಪ್ರಕರಣಗಳಲ್ಲಿ 10 ದೆಹಲಿ, 10 ಬೆಂಗಳೂರು, 3 ಹೈದರಾಬಾದ್, 1 ಪಶ್ಚಿಮ ಬಂಗಾಳ, 5 ಪ್ರಕರಣಗಳು ಪುಣೆ ವಿರೋಲಜಿ ಸಂಸ್ಥೆಯಲ್ಲಿ ಪತ್ತೆಯಾಗಿದೆ. ಎಲ್ಲಾ 29 ಸೋಂಕಿತರನ್ನು ಐಸೋಲೇಶನ್‌ನಲ್ಲಿ ಇಡಲಾಗಿದೆ. ಡೆನ್ಮಾರ್ಕ್, ನೆದರ್ಲೆಂಡ್, ಆಸ್ಟ್ರೇಲಿಯಾ, ಇಟಲಿ, ಸ್ವೀಡನ್, ಫ್ರಾನ್ಸ್, ಸ್ವೀಡನ್, ಸ್ವಿಟ್ಜರ್‌ಲೆಂಡ್, ಜರ್ಮನಿ, ಕೆನಡಾ, ಜಪಾನ್, ಲೆಬೆನಾನ್ ಹಾಗೂ ಸಿಂಗಾಪುರದಲ್ಲಿ ರೂಪಾಂತರ ಕೊರೋನಾ ವೈರಸ್ ತಳಿ ಪತ್ತೆಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ