
ಕರ್ನಾಲ್, ಹರ್ಯಾಣ (ಏಪ್ರಿಲ್ 18, 2023): ಹರ್ಯಾಣದ ಕರ್ನಾಲ್‌ನಲ್ಲಿ 3 ಅಂತಸ್ತಿನ ಅಕ್ಕಿ ಗಿರಣಿ ಕುಸಿತ ಕಂಡಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಅಲ್ಲದೆ, ಈ ಘಟನೆಯಲ್ಲಿ ಕನಿಷ್ಠ 20 ಜನರು ಗಾಯಗೊಂಡಿದ್ದಾರೆ ಎಂದು ಸರ್ಕಾರ ಮಂಗಳವಾರ ತಿಳಿಸಿದೆ. ಇನ್ನು, ಈ ಅವಘಡ ನಡೆಯುವಾಗ 150 ಜನರು ಅಲ್ಲಿ ಕೆಲಸ ಮಾಡುತ್ತಿದ್ದರು ಎಂದೂ ತಿಳಿದುಬಂದಿದೆ. ಅಲ್ಲದೆ, ಗಾಯಾಳುಗಳನ್ನು ಆಸ್ಪತ್ರೆಯೊಂದಕ್ಕೆ ಶಿಫ್ಟ್ ಮಾಡಲಾಗಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.
ಈ ಅವಘಡದಲ್ಲಿ 4 ಜನರು ಮೃತಪಟ್ಟಿದ್ದು, 20 ಜನರು ಗಾಯಗೊಂಡಿದ್ದಾರೆ. ಈ ಅವಘಡ ನಡೆದಾಗ ಸುಮಾರು 150 ಜನರು ಕಟ್ಟಡದೊಳಗಿದ್ದರು. ಗಾಯಾಳುಗಳನ್ನು ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ ಎಂದು ಕರ್ನಾಲ್ ಡಿಸಿ ಅನೀಶ್ ಯಾದವ್ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.
ಇದನ್ನು ಓದಿ:ಅಯ್ಯೋ ಪಾಪಿ! ಹೆಣ್ಣು ಶಿಶುವಿಗೆ ಜನ್ಮ ಕೊಟ್ಟು ಕಿಟಕಿಯಿಂದ ಎಸೆದು ಕೊಂದ 19 ವರ್ಷದ ಯುವತಿ
ಇನ್ನು, ಕಟ್ಟಡದಲ್ಲಿ ಕೆಲವು ದೋಷಗಳಿವೆ ಎಂಬುದು ಬೆಳಕಿಗೆ ಬಂದಿದೆ. ಈ ಘಟನೆಯನ್ನು ತನಿಖೆ ಮಾಡಲು ಸಮಿತಿಯೊಂದನ್ನು ರಚನೆ ಮಾಡಲಾಗುವುದು. ಹಾಗೂ, ಅಕ್ಕಿ ಗಿರಣಿ ಮಾಲೀಕರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದೂ ಅವರು ಹೇಳಿದ್ದಾರೆ. ಈ ಮಧ್ಯೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಸಹ ಸ್ಥಳಕ್ಕೆ ಭೇಟಿ ನೀಡಲಿದೆ ಎಂದೂ ತಿಳಿದುಬಂದಿದೆ.
ಇನ್ನೊಂದೆಡೆ, ಈ ಘಟನೆಯಲ್ಲಿ ನಾಲ್ವರು ಜನರು ಮೃತಪಟ್ಟಿದ್ದು ಹಾಗೂ 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯವನ್ನು ಆರಂಭಿಸಲಾಗಿದೆ. ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ತಂಡಗಳು ಸಹ ಸ್ಥಳಕ್ಕೆ ಧಾವಿಸಲಿದೆ. ಇನ್ನು, ಈ ಕಟ್ಟಡದಲ್ಲಿದ್ದ ಯಾರೊಬ್ಬರೂ ನಾಪತ್ತೆಯಾಗಿಲ್ಲ, ನಾವು ಕಟ್ಟಡದೊಳಗಿದ್ದ ಕಾರ್ಮಿಕರ ಹೆಸರನ್ನು ಪರಿಶೀಲಿಸಿದ್ದೇವೆ ಎಂದು ಕರ್ನಾಲ್ ಸೂಪರಿಟೆಂಡೆಂಟ್ ಆಫ್ ಪೊಲೀಸ್ ಶಶಾಂಕ್ ಕುಮಾರ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಯುಪಿಯಲ್ಲಿ ಗುಂಡಿನ ದಾಳಿಗೆ ಯುವತಿ ಬಲಿ: ಅತೀಕ್ ಹತ್ಯೆಯಂತೆ ಈ ಸಾವನ್ನೂ ಸಂಭ್ರಮಿಸುತ್ತೀರಾ ಎಂದು ಟೀಕೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ