ರಸ್ತೆ ಬದಿ ನಿಂತವರ ಮೇಲೆ ಚಲಿಸಿದ ಬಸ್ : ಐವರ ದಾರುಣ ಸಾವು

Published : May 11, 2023, 03:44 PM IST
ರಸ್ತೆ ಬದಿ ನಿಂತವರ ಮೇಲೆ  ಚಲಿಸಿದ ಬಸ್ : ಐವರ ದಾರುಣ ಸಾವು

ಸಾರಾಂಶ

ಗುಜರಾತ್ ರಾಜ್ಯ ಸಾರಿಗೆ ಬಸ್‌ಗೆ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಆ ಬಸ್‌ ರಸ್ತೆ ಬದಿ ನಿಂತಿದ್ದವರ ಮೇಲೆ ಹರಿದಿದೆ. ಪರಿಣಾಮ ಐವರು ಮೃತಪಟ್ಟು ಆರು ಜನ ಗಂಭೀರವಾಗಿ ಗಾಯಗೊಂಡ ಘಟನೆ ಗುಜರಾತ್‌ನಲ್ಲಿ ನಡೆದಿದೆ.

ಅಹ್ಮದಾಬಾದ್‌:ಗುಜರಾತ್ ರಾಜ್ಯ ಸಾರಿಗೆ ಬಸ್‌ಗಗೆ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಆ ಬಸ್‌ ರಸ್ತೆ ಬದಿ ನಿಂತಿದ್ದವರ ಮೇಲೆ ಹರಿದಿದೆ. ಪರಿಣಾಮ ಐವರು ಮೃತಪಟ್ಟು ಆರು ಜನ ಗಂಭೀರವಾಗಿ ಗಾಯಗೊಂಡ ಘಟನೆ ಗುಜರಾತ್‌ನಲ್ಲಿ ನಡೆದಿದೆ. ಗುಜರಾತ್‌ನ ಗಾಂಧಿನಗರ ಜಿಲ್ಲೆಯ ಕಲೋಲ್ ನಗರದಲ್ಲಿ ಬುಧವಾರ ಮುಂಜಾನೆ ಈ ದುರಂತ ಸಂಭವಿಸಿದೆ. ಮುಂಜಾನೆ 7.30 ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಅಲ್ಲಿ ಕೆಲವು ಪ್ರಯಾಣಿಕರು ಬಸ್‌ಗಾಗಿ ಕಾಯುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.  ರಾಜ್ಯ ಸಾರಿಗೆ ಬಸ್‌ನ ಹಿಂಬದಿಗೆ ಖಾಸಗಿ ಐಷಾರಾಮಿ ಬಸ್‌ ಡಿಕ್ಕಿ ಹೊಡೆದಿದ್ದು, ಪರಿಣಾಮ ಸರ್ಕಾರಿ ಬಸ್‌ಗೆ ಹಿಂಬದಿಯಿಂದ ತಳ್ಳಿದಂತಾಗಿದ್ದು, ಅದು ಸೀದಾ ಹೋಗಿ ರಸ್ತೆ ಬದಿ ನಿಂತವರ ಮೇಲೆ ಚಲಿಸಿದೆ. 

ಈ ಸರ್ಕಾರಿ ಬಸ್ ಅಲ್ಲಿ ನಿಲ್ಲಬೇಕಾಗಿತ್ತು. ಆದರೆ ಹಿಂದಿನಿಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಅದು ಸೀದಾ ಜನರ ಮೇಲೆ ಹರಿದಿದೆ. ಘಟನೆಯಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಉಳಿದ 6 ಜನ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.  ಮತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. 

Bengaluru Accident: ಬೈಕ್‌ಗೆ ಡಿಕ್ಕಿ ಹೊಡೆದ ಟಿಪ್ಪರ್‌: ಚಕ್ರದಡಿ ಸಿಲುಕಿ ಸಾವನ್ನಪ್ಪಿದ ಮಹಿಳೆ

ಘಟನೆಗೆ ಸಂಬಂಧಿಸಿದಂತೆ ಖಾಸಗಿ ಬಸ್ ಚಾಲಕನ ವಿರುದ್ಧ ನಿರ್ಲಕ್ಷ್ಯದ ಪ್ರಕರಣ ದಾಖಲಿಸಲಾಗಿದೆ. ಘಟನಗೆ ಗುಜರಾತ್ ಸಿಎಂ  ಭೂಪೇಂದ್ರ ಪಟೇಲ್ ಶೋಕ ವ್ಯಕ್ತಪಡಿಸಿದ್ದು, ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಘೋಷಿಸಿದ್ದಾರೆ. ಕಲೋಲ ಅಪಘಾತದಲ್ಲಿ ಅಮಾಯಕ ಜೀವಗಳು ಬಲಿಯಾಗಿದ್ದು ಬೇಸರದ ವಿಚಾರ,  ಮೃತರ ಕುಟುಂಬಕ್ಕೆ ನಾನು ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರವೇ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇನೆ.  ದುರಂತದಲ್ಲಿ ಮೃತರಾದವವರ ಕುಟುಂಬಕ್ಕೆ 5 ಲಕ್ಷ ಹಾಗೂ ಗಾಯಾಳುಗಳಿಗೆ 50 ಸಾವಿರ ಹಣವನ್ನು ಹಾಗೂ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಮೃತಪಟ್ಟವರನ್ನು ಕಲೋಲದ ಗೋಪಾಲನಗರ ನಿವಾಸಿ 50 ವರ್ಷದ ಶಾರ್ದ ಜಗಾರಿಯಾ, 45 ವರ್ಷದ ಬಲವಂತ್ ಠಾಕೂರ್, 48 ವರ್ಷದ ದಿಲೀಪ್ ಸಿನ್ಹಾ ವಿಹೊಲ್, 22 ವರ್ಷದ ಪಾರ್ಥ ಪಟೇಲ್ ಹಾಗೂ 21 ವರ್ಷದ ಸಾವನ್ ದರ್ಜಿ ಎಂದು ಗುರುತಿಸಲಾಗಿದೆ.

Chikkamagaluru: ಕಾರು ಹಾಗೂ ಟಿಟಿ ವಾಹನ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!