ಶಾಂತವಾಗಿದ್ದ ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಐವರ ಸಾವು

By Kannadaprabha News  |  First Published Sep 9, 2024, 9:03 AM IST

ಶಂಕಿತ ಕುಕಿ ಉಗ್ರರು ಶನಿವಾರ ಜಿರಿಬಾಂ ಜಿಲ್ಲಾ ಕೇಂದ್ರದಿಂದ 5 ಕಿ.ಮೀ ದೂರದ ಏಕಾಂತ ಪ್ರದೇಶವೊಂದರಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದ ವ್ಯಕ್ತಿಯೊಬ್ಬ ಮನೆಯಲ್ಲಿ ಮಲಗಿ ನಿದ್ದೆ ಮಾಡುತ್ತಿದ್ದ ಮೇಲೆ ದಾಳಿ ನಡೆಸಿ ಆತನನ್ನು ಹತ್ಯೆಗೈದಿದ್ದಾರೆ. ಈ ಸುದ್ದಿ ಎಲ್ಲೆಡೆ ಹಬ್ಬಿ ಕುಕಿ ಮತ್ತು ಮೈತೇಯಿ ಸಮುದಾಯದ ಜನರ ನಡುವೆ ಗುಂಡಿನ ಕಾಳಗ ನಡೆದಿದೆ. ಈ ವೇಳೆ ನಾಲ್ವರು ಕುಕಿ ಉಗ್ರರು ಸಾವನ್ನಪ್ಪಿದ್ದಾರೆ.
 
ಇಂಫಾಲ(ಸೆ.09): ಕೆಲ ದಿನಗಳಿಂದ ಶಾಂತವಾಗಿದ್ದ ಈಶಾನ್ಯ ರಾಜ್ಯ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಶನಿವಾರ ಜಿರಿಬಾಂ ಬಿಲ್ಲೆಯಲ್ಲಿ ಕುಕಿ ಉಗ್ರರು ಹಾಗೂ ಮೈತೇಯಿ ಸಮುದಾಯದ ನಡುವೆ ನಡೆದ ಗುಂಡಿನ ಕಾಳಗದಲ್ಲಿ 5 ಜನರು ಸಾವನ್ನಪ್ಪಿದ್ದಾರೆ.

ಕಳೆದ ವಾರ ಕುಕಿ ಉಗ್ರರು ಮೈತೇಯಿ ಸಮುದಾಯದ ಜನರ ಮೇಲೆ ನಡೆಸಿದ ಡ್ರೋನ್‌ ಹಾಗೂ ರಾಕೆಟ್‌ ಬಾಂಬ್‌ ದಾಳಿ ಮಾಡಿದ್ದರು. ಈ ಪ್ರತ್ಯೇಕ ಘಟನೆಗಳಲ್ಲಿ ಮೂವರು ಸಾವನ್ನಪ್ಪಿದ್ದರು. ಅದರ ಬೆನ್ನಲ್ಲೇ ಮತ್ತೆ ಹಿಂಸಾಚಾರ ನಡೆದಿದೆ. ಈ ಹಿನ್ನೆಲೆಯಲ್ಲಿ ಮಣಿಪುರದಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ರಾಜಧಾನಿ ಇಂಫಾಲದಲ್ಲಿ ಡ್ರೋನ್‌ ದಾಳಿ ತಡೆ ವ್ಯವಸ್ಥೆಯನ್ನು ಅಳವಡಿಸಲಾಗಿದೆ.

Tap to resize

Latest Videos

ಭಾರತದ ಕಾಶ್ಮೀರ & ಮಣಿಪುರಕ್ಕೆ ಭೇಟಿ ನೀಡದಿರಿ: ತನ್ನ ನಾಗರಿಕರಿಗೆ ಅಮೆರಿಕಾ ಸೂಚನೆ

ಶಂಕಿತ ಕುಕಿ ಉಗ್ರರು ಶನಿವಾರ ಜಿರಿಬಾಂ ಜಿಲ್ಲಾ ಕೇಂದ್ರದಿಂದ 5 ಕಿ.ಮೀ ದೂರದ ಏಕಾಂತ ಪ್ರದೇಶವೊಂದರಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದ ವ್ಯಕ್ತಿಯೊಬ್ಬ ಮನೆಯಲ್ಲಿ ಮಲಗಿ ನಿದ್ದೆ ಮಾಡುತ್ತಿದ್ದ ಮೇಲೆ ದಾಳಿ ನಡೆಸಿ ಆತನನ್ನು ಹತ್ಯೆಗೈದಿದ್ದಾರೆ. ಈ ಸುದ್ದಿ ಎಲ್ಲೆಡೆ ಹಬ್ಬಿ ಕುಕಿ ಮತ್ತು ಮೈತೇಯಿ ಸಮುದಾಯದ ಜನರ ನಡುವೆ ಗುಂಡಿನ ಕಾಳಗ ನಡೆದಿದೆ. ಈ ವೇಳೆ ನಾಲ್ವರು ಕುಕಿ ಉಗ್ರರು ಸಾವನ್ನಪ್ಪಿದ್ದಾರೆ.

ಘಟನೆ ಬೆನ್ನಲ್ಲೇ ಮುಖ್ಯಂಂತ್ರಿ ಬೀರೇನ್‌ ಸಿಂಗ್‌, ಸರ್ಕಾರದ ಮಿತ್ರಪಕ್ಷಗಳ ಶಾಸಕರ ಜೊತೆ ತುರ್ತು ಸಭೆ ನಡೆಸಿದ್ದಾರೆ. ಬಳಿಕ ರಾಜ್ಯಪಾಲ ಎಲ್‌. ಆಚಾರ್ಯ ಅವರನ್ನು ಭೇಟಿ ಮಾಡಿ ಪರಿಸ್ಥಿತಿಯ ಮಾಹಿತಿ ನೀಡಿದ್ದಾರೆ.
ಈ ವರ್ಷ ರಾಜ್ಯದಲ್ಲಿ ನಡೆದ ಹಿಂಸಾಚಾರದಲ್ಲಿ 200ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

click me!