ಗಿಗ್ ಕಾರ್ಮಿಕರ ಕಲ್ಯಾಣಕ್ಕಾಗಿ ಅಮೆಜಾನ್, ಫ್ಲಿಪ್‌ಕಾರ್ಟಿಗೆ ಟ್ಯಾಕ್ಸ್‌: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ ಮತ್ತು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. 


ನವದೆಹಲಿ (ಏ.04): ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ ಮತ್ತು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಕಲ್ಯಾಣ ಮಂಡಳಿಗಾಗಿ ಅಮೆಜಾನ್, ಫ್ಲಿಪ್‌ಕಾರ್ಟ್ ಸೇರಿ ಹತ್ತಾರು ಸಂಸ್ಥೆಗಳಿಂದ ಶೇ.5 ರಷ್ಟು ಸೆಸ್ ಸಂಗ್ರಹಿಸಿ, ಅದೇ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಗಿಗ್‌ ಕಾರ್ಮಿಕರ ಕಲ್ಯಾಣಕ್ಕೆ ಬಳಸುವುದು ಮತ್ತು ಉಳಿದ ಅಗತ್ಯ ಹಣ ಸರ್ಕಾರವೇ ಭರಿಸಿ ವಿವಿಧ ಯೋಜನೆ, ಕಾರ್ಯಕ್ರಮ ರೂಪಿಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ. 

ಭಾರತ್ ಜೋಡೋ ಯಾತ್ರೆ ಸಂದರ್ಭ ರಾಹುಲ್ ಗಾಂಧಿ ಅವರೂ ಗಿಗ್ ಕಾರ್ಮಿಕರ ಕಲ್ಯಾಣ ಪರವಾಗಿ ಧ್ವನಿ ಎತ್ತಿದ್ದರು. ಗುರುವಾರ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವರಾದ ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್ ಪಾಲ್ಗೊಂಡು ಸಮಗ್ರವಾಗಿ ಚರ್ಚಿಸಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ ಸಚಿವರಾದ ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್ ಚರ್ಚೆಯಲ್ಲಿ ಭಾಗಿ.

Latest Videos

ಕೆಪಿಸಿಸಿ ಅಧ್ಯಕ್ಷತೆಗೆ ಸತೀಶ್‌, ಖಂಡ್ರೆ ಹೆಸರು ಶಿಫಾರಸು ಮಾಡಿದ ಸಿಎಂ ಸಿದ್ದರಾಮಯ್ಯ?

ಗಿಗ್ ಕಾರ್ಯಕರ್ತರು ಭಾಗಿ: ಸಭೆಗೆ ಆಗಮಿಸಲು ಗಿಗ್ ಕಾರ್ಮಿಕರ ವಲಯದ ಪರವಾಗಿ ಮೂವರು ಕಾರ್ಯಕರ್ತರಿಗೂ ಅವಕಾಶ ಒದಗಿಸಲಾಗಿತ್ತು. ರಾಜ್ಯದವರಾದ ರಕ್ಷಿತಾ ದೇವ್, ಹೈದ್ರಾಬಾದಿನ ಶೇಖ್ ಸಲಾಹುದ್ದೀನ್, ನಿಖಿಲ್ ದೇವ್ ಭಾಗವಹಿಸಿದ್ದರು. ಮುಂದಿನ ಹಂತವಾಗಿ ಸಮಗ್ರ ಅಂಶಗಳನ್ನು ಒಳಗೊಂಡ ಮಸೂದೆ ಸಂಪುಟದ ಮುಂದೆ ಮಂಡಿಸಲು ತೀರ್ಮಾನಿಸಲಾಗಿದೆ.

ದೆಹಲಿಯಲ್ಲಿ ಕರ್ನಾಟಕ ಭವನ ಉದ್ಘಾಟಿಸಿದ ಮುಖ್ಯಮಂತ್ರಿ: ರಾಜಧಾನಿ ದೆಹಲಿಯಲ್ಲಿ ಪುನರ್‌ ನಿರ್ಮಾಣಗೊಂಡಿರುವ ಕರ್ನಾಟಕ ಭವನ, ಕೇಂದ್ರ ಹಾಗೂ ರಾಜ್ಯದ ನಡುವೆ ರಾಯಭಾರ ಕಚೇರಿಯಾಗಿ ಕೆಲಸ ಮಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಶಾಭಾವ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ಸಂಜೆ ₹138 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಕರ್ನಾಟಕ ಭವನ ಉದ್ಘಾಟಿಸಿ ಅವರು ಮಾತನಾಡಿದರು. ಈ ಹಿಂದೆ ಇದು ಮೈಸೂರು ಭವನವಾಗಿತ್ತು. ದೆಹಲಿಯಲ್ಲಿ ಒಟ್ಟು ಮೂರು ಕರ್ನಾಟಕ ಭವನಗಳು ಇವೆ. ಸುಭದ್ರ ರಾಜ್ಯ ನಿರ್ಮಾಣದಲ್ಲಿ ಎಲ್ಲರ ಭಾಗವಹಿಸುವಿಕೆ ಅಗತ್ಯವಾಗಿದ್ದು, ಕೇಂದ್ರ ಸರ್ಕಾರದ ಬಳಿ ಹಲವು ಕೆಲಸ ಕಾರ್ಯಗಳಿಗಾಗಿ ಅಧಿಕಾರಿಗಳು, ಸಚಿವರು, ಶಾಸಕರು ದೆಹಲಿಗೆ ಬರಬೇಕಾಗುತ್ತದೆ. 

ಹಿಂದೂ ಹುಲಿಯನ್ನು ಬೋನಿಗೆ ಹಾಕಿದ ಅಪ್ಪ ಮಗ: ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪ

ಇವರೆಲ್ಲರಿಗೂ ಕರ್ನಾಟಕ ಭವನ ತಂಗಲು ಸಹಾಯವಾಗುತ್ತದೆ ಎಂದರು. ಅಲ್ಲದೆ, ಕರ್ನಾಟಕ ಭವನ-2ರ ಪುನರ್ ನಿರ್ಮಾಣ ಮಾಡುವ ಯೋಜನೆಯೂ ಇದೆ ಎಂದು ತಿಳಿಸಿದರು. ಕೊರೋನಾ ಸೇರಿ ಹಲವು ಸಂಕಷ್ಟಗಳಿಂದಾಗಿ ಕಟ್ಟಡ ಕಾಮಗಾರಿಗೆ ವಿಳಂಬವಾಯಿತು. ಈಗ ಭವ್ಯ ಕಟ್ಟಡ ನಿರ್ಮಾಣಗೊಂಡಿದೆ. ಕರ್ನಾಟಕ ಭವನ ಬೆಳೆದು ಬಂದ ಇತಿಹಾಸ ಕುರಿತು ಬೋಡ್೯ ಹಾಕಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಸೂಚಿಸಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ. ಜೊತೆಗೆ, ಖರ್ಗೆಯವರ ಸಲಹೆಯಂತೆ ಶಾಸಕರು ತಂಗಲು ಇನ್ನಷ್ಟು ಅನುಕೂಲಗಳನ್ನು ಮಾಡಿಕೊಡುತ್ತೇವೆ ಎಂದು ಭರವಸೆ ನೀಡಿದರು.

click me!