
ಅಯೋಧ್ಯೆ: ಅಯೋಧ್ಯೆಯ ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಮೊದಲ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ನೇಮಕ ಪ್ರಕ್ರಿಯೆ ಅಂತಿಮ ಘಟ್ಟಕ್ಕೆ ತಲುಪಿದೆ. ದೇಶಾದ್ಯಂತ ಬಂದಿದ್ದ 5,000ಕ್ಕೂ ಹೆಚ್ಚು ಅರ್ಜಿಗಳನ್ನು ಪರಿಶೀಲಿಸಿದ ಮೂವರು ಸದಸ್ಯರ ಆಯ್ಕೆ ಸಮಿತಿಯು, ಅಂತಿಮವಾಗಿ 18 ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಿದೆ.
ಆಗಸ್ಟ್ 11 ಮತ್ತು 12 ರಂದು ಈ 18 ಅಭ್ಯರ್ಥಿಗಳಿಗೆ ಮುಖಾಮುಖಿ ಸಂದರ್ಶನ ನಡೆಯಲಿದ್ದು, ಅದರಲ್ಲಿ ಅರ್ಹರನ್ನು ಆಯ್ಕೆ ಮಾಡಲಾಗುವುದು.
ಸಂದರ್ಶನಕ್ಕೆ ಆಯ್ಕೆಯಾಗಿರುವ ಅಭ್ಯರ್ಥಿಗಳಲ್ಲಿ ಬಹುತೇಕರು ನಿವೃತ್ತ ಐಎಎಸ್ (IAS) ಅಧಿಕಾರಿಗಳು, ಕಾರ್ಪೊರೇಟ್ ಸಂಸ್ಥೆಗಳ ಮಾಜಿ ಹಿರಿಯ ಅಧಿಕಾರಿಗಳು ಮತ್ತು ನಿವೃತ್ತ ಸೇನಾ ಅಧಿಕಾರಿಗಳಾಗಿದ್ದಾರೆ. ಕಳೆದ ತಿಂಗಳು ದೇಣಿಗೆ ಕಳವು ಆರೋಪದ ಹಿನ್ನೆಲೆಯಲ್ಲಿ ಟ್ರಸ್ಟ್ ಆಡಳಿತವನ್ನು ಮತ್ತಷ್ಟು ವೃತ್ತಿಪರಗೊಳಿಸಲು ಈ ಹೊಸ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿತ್ತು.
ಆಯ್ಕೆಯಾಗುವ CEO ಕೇವಲ ಕಚೇರಿ ಕೆಲಸವನ್ನಷ್ಟೇ ಅಲ್ಲದೆ ಧಾರ್ಮಿಕ ಮತ್ತು ಸಾರ್ವಜನಿಕ ಸಂಸ್ಥೆಯ ಸವಾಲುಗಳನ್ನು ಎದುರಿಸಬೇಕಾಗುತ್ತದೆ.
ಆಗಸ್ಟ್ 11 ಮತ್ತು 12 ರಂದು ನಡೆಯುವ ಸಂದರ್ಶನದ ನಂತರ, ಆಯ್ಕೆ ಸಮಿತಿಯು ಮೂರು ಪ್ರಮುಖ ಹೆಸರುಗಳನ್ನು ಟ್ರಸ್ಟ್‌ಗೆ ಶಿಫಾರಸು ಮಾಡಲಿದೆ. ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಟ್ರಸ್ಟ್‌ನ ಮುಂದಿನ ಸಭೆಯಲ್ಲಿ ಈ ಮೂವರಲ್ಲಿ ಒಬ್ಬರನ್ನು ಅಂತಿಮವಾಗಿ CEO ಆಗಿ ನೇಮಕ ಮಾಡಲಾಗುವುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ