ಪತಿಯಿಂದಲೇ ದೈಹಿಕ ಮತ್ತು ಲೈಂಗಿಕ ಹಿಂಸೆ: ಕರ್ನಾಟಕ ನಂ.1!

Published : Dec 15, 2020, 10:56 AM IST
ಪತಿಯಿಂದಲೇ ದೈಹಿಕ ಮತ್ತು ಲೈಂಗಿಕ ಹಿಂಸೆ: ಕರ್ನಾಟಕ ನಂ.1!

ಸಾರಾಂಶ

ಕರ್ನಾಟಕ ಸೇರಿದಂತೆ 5 ರಾಜ್ಯಗಳಲ್ಲಿ ಶೇ.30ರಷ್ಟು ಮಹಿಳೆಯರು ತಮ್ಮ ಪತಿಯಿಂದಲೇ ದೈಹಿಕ ಮತ್ತು ಲೈಂಗಿಕ ಹಿಂಸೆ| ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ 5ನೇ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ

ನವದೆಹಲಿ(ಡಿ.15): ನವದೆಹಲಿ: ದೇಶದ 20 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪೈಕಿ ಕರ್ನಾಟಕ ಸೇರಿದಂತೆ 5 ರಾಜ್ಯಗಳಲ್ಲಿ ಶೇ.30ರಷ್ಟು ಮಹಿಳೆಯರು ತಮ್ಮ ಪತಿಯಿಂದಲೇ ದೈಹಿಕ ಮತ್ತು ಲೈಂಗಿಕ ಹಿಂಸೆ ಅನುಭವಿಸಿ ದ್ದಾರೆ ಎಂದು ಸಮೀಕ್ಷೆಯೊಂದು ಹೇಳಿದೆ.

ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ 5ನೇ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯಲ್ಲಿ ಈ ಅಂಶವಿದೆ. ಮಹಿಳೆಯರು ಹೆಚ್ಚು ಹಿಂಸೆ ಅನುಭವಿ ಸುತ್ತಿರುವ ಟಾಪ್ 5 ರಾಜ್ಯಗಳೆಂದರೆ ಕರ್ನಾಟಕ, ಅಸ್ಸಾಂ, ಮಿಜೋರಂ, ತೆಲಂಗಾಣ ಮತ್ತು ಬಿಹಾರ. ಸರ್ಕಾರ, ಸಾಮಾ ಜಿಕ ಹೋರಾಟಗಾರರು, ಸರ್ಕಾರೇತರ ಸಂಘಟನೆಗಳು ಜಂಟಿಯಾಗಿ ಈ ಅಧ್ಯಯನ ಕೈಗೊಂಡಿವೆ.

ಸುಮಾರು 6.1 ಲಕ್ಷ ಕುಟುಂಬಗಳನ್ನು ಸಂದರ್ಶಿಸಿ, ಜನ ಸಂಖ್ಯೆ, ಆರೋಗ್ಯ, ಕುಟುಂಬ ಯೋಜನೆ ಮತ್ತು ಪೌಷ್ಠಿಕಾಂಶ ಸಂಬಂಧಿತ ಮಾಹಿತಿ ಸಂಗ್ರಹಿಸಿ ಈ ಸಮೀಕ್ಷೆ ನಡೆಸಲಾಗಿದೆ. ಕರ್ನಾಟಕದ 18-49 ವರ್ಷ ವಯಸ್ಸಿನ ಶೇ.44.4ರಷ್ಟು ಮಹಿಳೆಯರು ಸಂಗಾತಿ ಯಿಂದಲೇ ಕೌಟುಂಬಿಕ ಹಿಂಸೆ ಅನುವಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಕಳೆದ ಸಮೀಕ್ಷೆಯಲ್ಲಿ (2015-16) ರಾಜ್ಯದ ಶೇ.20.6ರಷ್ಟು ಮಹಿಳೆಯರು ಕೌಟುಂಬಿಕ ಹಿಂಸೆ ಅನುಭವಿಸುತ್ತಿ ರುವುದಾಗಿ ಹೇಳಿಕೊಂಡಿದ್ದರು. ಹಾಗೆಯೇ ಅನಕ್ಷರತೆ, ಕುಡಿತವೇ ಈ ಹಿಂಸೆಗೆ ಬಹುತೇಕ ಕಾರಣ ಎಂದು ಸಮೀಕ್ಷಕರು ಅಭಿಪ್ರಾಯಪಟ್ಟಿದ್ದಾ

ಪ್ರಾಥಮಿಕ ಹಂತದಲ್ಲಿ 17 ರಾಜ್ಯಗಳು ಮತ್ತು 5 ಕೇಂದ್ರಾಡಳಿತ ಪ್ರದೇಶಗಳ ಸಮೀಕ್ಷಾ ವರದಿ ಬಿಡುಗಡೆಯಾಗಿದೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ವಿದೇಶಗಳಿಗೆ ಭಾರತೀಯ ಪ್ರತಿಭೆ : ನಷ್ಟವೋ ? ಪ್ರಭಾವವೋ?
India Latest News Live: ನಾವು ದೇಶಕ್ಕಾಗಿ, ನೀವು ಚುನಾವಣೆಗಾಗಿ: ಬಿಜೆಪಿ. ಮೋದಿ ವಿರುದ್ದ ಪ್ರಿಯಾಂಕಾ ಗಾಂಧಿ ವಾಗ್ದಾಳಿ