ಜಿಂದ್: ಹರಿಯಾಣದ ಜಿಂದ್‌ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮಿನಿ ಟ್ರಕ್ ಹಾಗೂ ಲಾರಿ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ ಆರು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಒಂದೇ ಕುಟುಂಬದ 23 ಜನರು ಮಿನಿ ಟ್ರಕ್‌ನಲ್ಲಿ ಹರಿದ್ವಾರಕ್ಕೆ ತೆರಳಿ ವಾಪಸ್ ಬರುತ್ತಿದ್ದಾಗ ಈ ಅನಾಹುತ ಸಂಭವಿಸಿದೆ. ಇವರೆಲ್ಲರೂ ಹಿಸ್ಸಾರ್ ಜಿಲ್ಲೆಯ ನರ್ನಾದ್ (Narnaund) ನಿವಾಸಿಗಳಾಗಿದ್ದಾರೆ.
ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದ 17 ಜನರು ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ ಇವರೆಲ್ಲರೂ ಹಿಸ್ಸಾರ್ ಜಿಲ್ಲೆಯ ನರ್ನಾದ್ (Narnaund) ಗ್ರಾಮದ ನಿವಾಸಿಯಾಗಿದ್ದು, ಇವರ ಕುಟುಂಬದ ಪ್ಯಾರೆ ಲಾಲ್ (Pyare Lal) ಎಂಬುವವರು ಇತ್ತೀಚೆಗೆ ಸಾವನ್ನಪ್ಪಿದ್ದರು. ಅವರ ಚಿತಾಭಸ್ಮವನ್ನು ಬಿಡುವ ಸಲುವಾಗಿ ಇವರೆಲ್ಲರೂ ಹರಿದ್ವಾರಕ್ಕೆ (Haridwar) ತೆರಳಿದ್ದರು. ಮಂಗಳವಾರ ಬೆಳಗ್ಗೆ ಅಲ್ಲಿಂದ ವಾಪಸ್ ಬರುತ್ತಿದ್ದ ವೇಳೆ ನಸುಕಿನ ಜಾವ 5.10 ರ ಸುಮಾರಿಗೆ ಇವರು ಪ್ರಯಾಣಿಸುತ್ತಿದ್ದ ಮಿನಿ ಟ್ರಕ್ (ಈ ಟ್ರಕ್‌ಗೆ ಸ್ಥಳೀಯವಾಗಿ ಚೋಟ ಹಾತಿ ಎಂದು ಕರೆಯಲಾಗುತ್ತದೆ)ಗೆ ಕಂಡೆಲಾ ಗ್ರಾಮದ (Kandela village) ಬಳಿ ಲಾರಿ ಡಿಕ್ಕಿ ಹೊಡೆದಿದೆ.
ಮದುವೆ ದಿಬ್ಬಣದ ವಾಹನ ಹಾಗೂ ಕಾರಿನ ನಡುವೆ ಅಪಘಾತ, ಕಾಂಗ್ರೆಸ್ ನಾಯಕನ ಸಾವು!
ಈ ಅವಘಡದಲ್ಲಿ 45 ವರ್ಷ ಪ್ರಾಯದ ಛನೋ (Channo), 39 ವರ್ಷ ಪ್ರಾಯದ ಶಿಶುಪಾಲ (Shishpal), 15 ವರ್ಷ ಪ್ರಾಯದ ಅಂಕುಶ್ (Ankush), 70 ವರ್ಷ ಪ್ರಾಯದ ಧನ್ನ (Dhanna) ಹಾಗೂ 65 ವರ್ಷ ಪ್ರಾಯದ ಸುರ್ಜಿ ದೇವಿ (Surji Devi) ಹಾಗೂ ಪಂಜಾಬ್ (Punjab) ಮೂಲದ ಸಂಬಂಧಿಯೊಬ್ಬರು ಸಾವಿಗೀಡಾಗಿದ್ದಾರೆ. ಈ ದುರಂತದಲ್ಲಿ ಗಾಯಗೊಂಡವರನ್ನು ಜಿಂದ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರೆಲ್ಲರೂ ಟ್ರಕ್‌ನಲ್ಲಿ ಪ್ರಯಾಣಿಸುತ್ತಿದ್ದವರಾಗಿದ್ದಾರೆ. ಘಟನೆಯ ನಂತರ ಚಾಲಕ ಪರಾರಿಯಾಗಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಹುಬ್ಬಳ್ಳಿ ಬಳಿ ಭೀಕರ ಅಪಘಾತ: ಜವರಾಯನ ಅಟ್ಟಹಾಸಕ್ಕೆ 7 ಮಂದಿ ಬಲಿ
ಖಾಸಗಿ ಬಸ್ ಮತ್ತು ಲಾರಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲೇ 6 ಮಂದಿ ಮೃತಪಟ್ಟು, ಓರ್ವ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ಹೊರವಲಯದ ತಾರಿಹಾಳ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ 12 -45 ಗಂಟೆಗೆ ನಡೆದಿತ್ತು. ಘಟನೆಯಲ್ಲಿ 26 ಜನರಿಗೆ ಗಾಯಗಳಾಗಿದೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಅಂತ ಮಾಹಿತಿ ಲಭ್ಯವಾಗಿದೆ.
ಇಚಲಕರಂಜಿಯ ಬಾಬಾಸೋ ಅಣ್ಣಾಸೋ ಚೌಗಲೆ ಮೃತ ದುರ್ದೈವಿಯಾಗಿದ್ದಾರೆ. ಉಳಿದವರ ಗುರುತು ಇನ್ನೂ ಪತ್ತೆಯಾಗಿಲ್ಲ. ನ್ಯಾಷನಲ್ ಟ್ರಾವಲ್ಸ್ ಚಾಲಕರಾದ ಅತಾವುಲ್ಲಾ ಹಾಗೂ ನಾಗರಾಜ ಮೃತಪಟ್ಟಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪುರದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ಧಾರವಾಡದ ಕಡೆ ಹೊರಟಿದ್ದ ಅಕ್ಕಿ ತುಂಬಿದ್ದ ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಮೃತರೆಲ್ಲರೂ ಮಹಾರಾಷ್ಟ್ರದ ಕೊಲ್ಹಾಪುರಕ್ಕೆ ಸೇರಿದವರಾಗಿದ್ದಾರೆ. ಭೀಕರ ರಸ್ತೆ ಅಪಘಾತಕ್ಕೆ ಲಾರಿ ಡ್ರೈವರ್, ಕ್ಲೀನರ್ ಹಾಗೂ ಬಸ್‌ನಲ್ಲಿದ್ದ ನಾಲ್ವರು ಸೇರಿ ಏಳು ಜನ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಗಾಯಗೊಂಡವರನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಕಮೀಷನರ್ ಲಾಭೂ ರಾಮ್ ಭೇಟಿ ಪರಿಶೀಲನೆ ನಡೆಸಿದ ಬಳಿಕ ಕಿಮ್ಸ್ ಆಸ್ಪತ್ರೆಗೂ ಭೇಟಿ ನೀಡಿದ್ದಾರೆ. ನ್ಯಾಷನಲ್ ಟ್ರಾವೆಲ್ಸ್ ನ KA-51 AA-7146 ನಂಬರ್ ಬಸ್ ಹಾಗೂ MH-16 AY-6916 ಲಾರಿ ಮಧ್ಯೆ ಅಪಘಾತ ಸಂಭವಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ