ತಿರುಪತಿ ತಿಮ್ಮಪ್ಪನಿಗೆ ಅರ್ಪಿಸಿದ ಅರ್ಧ ಕೆಜಿ ಚಿನ್ನ ಕಳ್ಳತನ

ತಿರುಪತಿಯಲ್ಲಿ ಭಕ್ತರಿಂದ ಕಾಣಿಕೆ ರೂಪದಲ್ಲಿ ಬಂದಿದ್ದ ಅರ್ಧ ಕೆಜಿ ಚಿನ್ನವನ್ನು ಕಳವು ಮಾಡಿದ ಆರೋಪದಲ್ಲಿ ಟಿಟಿಡಿ ನೌಕರನನ್ನು ಬಂಧಿಸಲಾಗಿದೆ. ಆರೋಪಿ ಪೆಂಚಲಯ್ಯ ಒಂದು ವರ್ಷದಲ್ಲಿ 46 ಲಕ್ಷ ಮೌಲ್ಯದ 650 ಗ್ರಾಂ ಚಿನ್ನವನ್ನು ಕಳವು ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.


ತಿರುಪತಿ: ಭಕ್ತರಿಂದ ತಿರುಪತಿಯ ಬಾಲಾಜಿ ಸನ್ನಿಧಿಗೆ ಕಾಣಿಕೆ ರೂಪದಲ್ಲಿ ಬಂದಿದ್ದ ಸುಮಾರು ಅರ್ಧ ಕೇಜಿ ಚಿನ್ನವನ್ನು ಕಳವು ಮಾಡಿದ ಆರೋಪದಲ್ಲಿ ಪೊಲೀಸರು ತಿರುಮಲ ತಿರುಪತಿ ದೇವಸ್ಥಾನಮ್‌ ( ಟಿಟಿಡಿ)ಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ನೌಕರನೊಬ್ಬನನ್ನುಬಂಧಿಸಿದ್ದಾರೆ.

ವಿ. ಪೆಂಚಲಯ್ಯ ಬಂಧಿತ ಆರೋಪಿ. ಈತ ಕಳೆದ ಒಂದು ವರ್ಷದಲ್ಲಿ 10 ರಿಂದ 15 ಸಲ ಚಿನ್ನದ ಬಿಸ್ಕೆಟ್‌ ಮತ್ತು ಇತರ ಆಭರಣಗಳು ಸೇರಿದಂತೆ 46 ಲಕ್ಷ ರು. ಮೌಲ್ಯದ 650 ಗ್ರಾಂ ಚಿನ್ನವನ್ನು ಕಳವು ಮಾಡಿದ ಆರೋಪ ಕೇಳಿ ಬಂದಿದೆ. ವೆಂಕಟೇಶ್ವರನ ಸನ್ನಿಧಿಗೆ ಭಕ್ತರು ನೀಡುವ ಕಾಣಿಕೆಯನ್ನು ಪರಕಾಮಣಿಯಲ್ಲಿ ವಿಂಗಡಿಸಲಾಗುತ್ತದೆ. ಅಲ್ಲಿ ಕೆಲಸ ಮಾಡುತ್ತಿದ್ದ ಪೆಂಚಲಯ್ಯ ಚಿನ್ನವನ್ನು ಕಳ್ಳತನ ಮಾಡಿದ್ದಾನೆ. ಚಿನ್ನದ ಬಿಸ್ಕೆಟ್‌ ಕದಿಯಲು ಯತ್ನಿಸುತ್ತಿದ್ದಾಗ ಆತ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದಿದ್ದು, ಜ.12ರಂದು ಪೊಲೀಸರು ಆತನನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Latest Videos

ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ
ಪವಿತ್ರ ಶಬರಿಮಲೆಯಲ್ಲಿ ಮಂಗಳವಾರ ಭಕ್ತರ ಭಕ್ತಿಗೆ ಪಾರವೇ ಇರಲಿಲ್ಲ. ಇಲ್ಲಿನ ಪೊನ್ನಂಬಾಲಮೇಡು ಬೆಟ್ಟದಲ್ಲಿ ಪ್ರತಿ ಮಕರ ಸಂಕ್ರಾಂತಿಯಂದು ಕಾಣಿಸಿಕೊಳ್ಳುವ ಮಕರಜ್ಯೋತಿ ಕಣ್ತುಂಬಿಕೊಳ್ಳಲು ಲಕ್ಷಾಂತರ ಅಯ್ಯಪ್ಪನ ಭಕ್ತರು ಶಬರಿಮಲೆಯಲ್ಲಿ ನೆರೆದಿದ್ದರು. ಸಂಜೆ ವೇಳೆ ಬೆಟ್ಟದಲ್ಲಿ ಮಕರ ಜ್ಯೋತಿ ಕಣ್ತುಂಬಿಕೊಂಡ ಅಯ್ಯಪ್ಪ ಭಕ್ತರು ಪುನೀತರಾದರು.

ಸ್ವಾಮಿಯೇ ಶರಣಂ ಅಯ್ಯಪ್ಪ ಎನ್ನುತ್ತಾ ಮಣಿಕಂಠನ ನಾಮ ಜಪಿಸುತ್ತಾ ಮಾಲಾಧಾರಿಗಳು ಭಕ್ತಿ ಭಾವದಲ್ಲಿ ಮಿಂದೆದ್ದರು. ಶಬರಿಮಲೆ ದೇಗುಲದಲ್ಲಿ ದೀಪಾರಾಧನೆಯ ನಂತರ ಬೆಟ್ಟದಲ್ಲಿ ಮಕರಜ್ಯೋತಿ ಕಾಣಿಸಿಕೊಂಡಿತು. ಈ ಸಂದರ್ಭದಲ್ಲಿ ಅಯ್ಯಪ್ಪನ ವಿಗ್ರಹವನ್ನು ಪಂದಳಂ ಅರಮನೆಯಿಂದ ತಂದ ಪವಿತ್ರ ಆಭರಣಗಳಿಂದ ಅಲಂಕರಿಸಲಾಯಿತು. ಸುಮಾರು 1.5ಲಕ್ಷಕ್ಕೂ ಅಧಿಕ ಭಕ್ತರು ನೆರೆದಿದ್ದರು. ಭಕ್ತರು ಸನ್ನಿಧಾನ ಮತ್ತು ದೇವಾಲಯದ ಸುತ್ತಮುತ್ತಲಿನ 18 ಪವಿತ್ರ ಬೆಟ್ಟಗಳಾದ್ಯಂತ ಆಶ್ರಯ ಪಡೆದು ದಿವ್ಯ ಕ್ಷಣವನ್ನು ಕಣ್ತುಂಬಿಕೊಂಡರು.

ಇದನ್ನೂ ಓದಿ: ಕುಂಭಮೇಳದಲ್ಲಿ 3.5 ಕೋಟಿ ಭಕ್ತರಿಂದ ಅಮೃತ ಸ್ನಾನ; ಸ್ಟೀವ್ ಜಾಬ್ಸ್ ಪತ್ನಿ ಅಸ್ವಸ್ಥ

click me!