ದೇಶದಲ್ಲಿ ದೈನಂದಿನ ಕೋವಿಡ್ ಪ್ರಕರಣಗಳ ಸಂಖ್ಯೆ ಸ್ವಲ್ಪಮಟ್ಟಿಗೆ ತಗ್ಗಿದ್ದು, ಮಂಗಳವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 6,594 ಪ್ರಕರಣಗಳು ದಾಖಲಾಗಿದ್ದು, 6 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ತನ್ಮೂಲಕ ಒಟ್ಟು ಪ್ರಕರಣಗಳು 4.32 ಕೋಟಿಗೆ, ಒಟ್ಟು ಸಾವು 5.24 ಲಕ್ಷಕ್ಕೆ ಏರಿಕೆಯಾಗಿದೆ.
ನವದೆಹಲಿ (ಜೂ.15): ದೇಶದಲ್ಲಿ ದೈನಂದಿನ ಕೋವಿಡ್ ಪ್ರಕರಣಗಳ ಸಂಖ್ಯೆ ಸ್ವಲ್ಪಮಟ್ಟಿಗೆ ತಗ್ಗಿದ್ದು, ಮಂಗಳವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 6,594 ಪ್ರಕರಣಗಳು ದಾಖಲಾಗಿದ್ದು, 6 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ತನ್ಮೂಲಕ ಒಟ್ಟು ಪ್ರಕರಣಗಳು 4.32 ಕೋಟಿಗೆ, ಒಟ್ಟು ಸಾವು 5.24 ಲಕ್ಷಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 2,553 ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ಸಕ್ರಿಯ ಸೋಂಕಿನ ಸಂಖ್ಯೆ 50,548ಕ್ಕೆ ಏರಿಕೆಯಾಗಿದೆ. ಇನ್ನು ದೈನಂದಿನ ಪಾಸಿಟಿವಿಟಿ ದರ ಶೇ.2.05 ಮತ್ತು ವಾರದ ಪಾಸಿಟಿವಿಟಿ ದರ ಶೇ.2.32ರಷ್ಟಿದೆ. ದೇಶದಲ್ಲಿ ಈವರೆಗೆ 195.35 ಕೋಟಿ ಡೋಸ್ ಲಸಿಕೆ ವಿತರಿಸಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
undefined
ಭಾರತದಲ್ಲಿ ಕೋವಿಡ್ ಸ್ಫೋಟ, ಮತ್ತೊಂದು ರಾಜ್ಯದಲ್ಲಿ ಕಠಿಣ ಮಾರ್ಗಸೂಚಿ ಪ್ರಕಟ!
ಮಹಾರಾಷ್ಟ್ರ 2956, ದಿಲ್ಲಿಯಲ್ಲಿ 1118 ಕೋವಿಡ್ ಕೇಸು: ರಾಷ್ಟ್ರರಾಜಧಾನಿ ದೆಹಲಿ ಮತ್ತು ಮುಂಬೈನಲ್ಲಿ ದೈನಂದಿನ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದ್ದು, ಮಂಗಳವಾರ ದೆಹಲಿಯಲ್ಲಿ 1,118 ಪ್ರಕರಣಗಳು ದಾಖಲಾಗಿವೆ. ಸೋಮವಾರಕ್ಕೆ ಹೋಲಿಸಿದರೆ 504 ಪ್ರಕರಣಗಳು ಹೆಚ್ಚಾಗಿವೆ. ಇದೇ ಅವಧಿಯಲ್ಲಿ ಇಬ್ಬರು ಸೋಂಕಿತರು ಸಾವಿಗೀಡಾಗಿದ್ದಾರೆ.
ಇನ್ನೂ ಮಹಾರಾಷ್ಟ್ರದಲ್ಲಿ 2,956 ಪ್ರಕರಣಗಳು ದಾಖಲಾಗಿದ್ದು, ನಾಲ್ವರು ಸಾವಿಗೀಡಾಗಿದ್ದಾರೆ. ಸೋಮವಾರಕ್ಕಿಂತ 1,071 ಪ್ರಕರಣಗಳು ಹೆಚ್ಚಾಗಿವೆ. ಇನ್ನು ದೆಹಲಿಯಲ್ಲಿ ಪಾಸಿಟಿವಿಟಿ ದರ ಶೇ.6.5ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 18 ಸಾವಿರಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದ ಥಾಣೆಯಲ್ಲಿ ಮತ್ತಿಬ್ಬರು ಸೋಂಕಿತರಲ್ಲಿ ಒಮಿಕ್ರೋನ್‌ನ ರೂಪಾಂತರಿಯಾದ ಬಿಎ.5 ಸೋಂಕು ಕಾಣಿಸಿಕೊಂಡಿದೆ.
ಕೋವಿಡ್ ಪರೀಕ್ಷೆ, ಸೋಂಕು ಎರಡೂ ಇಳಿಕೆ: ರಾಜ್ಯದಲ್ಲಿ ಕೊರೋನಾ ಸೋಂಕು ಪರೀಕ್ಷೆ ಇಳಿಕೆಯಿಂದಾಗಿ ಹೊಸ ಪ್ರಕರಣಗಳು ಕೂಡಾ ಸತತ ಎರಡನೇ ದಿನ ಇಳಿಮುಖವಾಗಿವೆ. ಆದರೆ, ಪರೀಕ್ಷೆಗಳ ಪಾಸಿಟಿವಿಟಿ ದರ ಶೇ.2.5ಕ್ಕೆ ಹೆಚ್ಚಿದೆ. ಸೋಮವಾರ 415 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. 378 ಮಂದಿ ಗುಣಮುಖರಾಗಿದ್ದಾರೆ. ಸೋಂಕಿತರ ಸಾವು ವರದಿಯಾಗಿಲ್ಲ. ಸದ್ಯ 3688 ಸೋಂಕಿತರು ಆಸ್ಪತ್ರೆ/ಮನೆಯಲ್ಲಿ ಚಿಕಿತ್ಸೆ, ಆರೈಕೆಯಲ್ಲಿದ್ದಾರೆ. ಸೋಂಕು ಪರೀಕ್ಷೆಗಳು 16 ಸಾವಿರ ನಡೆದಿದ್ದು, ಪಾಸಿಟಿವಿಟಿ ದರ ಶೇ 2.56ರಷ್ಟು ದಾಖಲಾಗಿದೆ.
ಭಾನುವಾರಕ್ಕೆ ಹೋಲಿಸಿದರೆ ಸೋಂಕು ಪರೀಕ್ಷೆಗಳು 5 ಸಾವಿರ ಕಡಿಮೆಯಾಗಿದೆ. ಹೀಗಾಗಿ, ಹೊಸ ಪ್ರಕರಣಗಳು ಕೂಡಾ 48 ಇಳಿಕೆಯಾಗಿವೆ. (ಭಾನುವಾರ 463 ಪ್ರಕರಣಗಳು, ಸಾವು ಶೂನ್ಯ). ಹೊಸ ಪ್ರಕರಣಗಳು ಬೆಂಗಳೂರಿನಲ್ಲಿ 400, ದಕ್ಷಿಣ ಕನ್ನಡ 5, ಕಲಬುರಗಿ 3, ಬಳ್ಳಾರಿ 2, ಬೆಳಗಾವಿ, ಧಾರವಾಡ, ಕೋಲಾರ, ಉತ್ತರ ಕನ್ನಡ ಹಾಗೂ ಶಿವಮೊಗ್ಗದಲ್ಲಿ ತಲಾ ಒಬ್ಬರಿಗೆ ಸೋಂಕು ತಗುಲಿದೆ. 21 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ಪತ್ತೆಯಾಗಿಲ್ಲ.
ಕೋವಿಡ್‌ನಿಂದ ಆಸ್ಪತ್ರೆ ದಾಖಲಾಗುವ ಸಂಖ್ಯೆ ಏರಿಕೆ ಬೆನ್ನಲ್ಲೇ ಕೇಂದ್ರದಿಂದ ಮಹತ್ವದ ಸೂಚನೆ!
ಸೋಂಕು ಪರೀಕ್ಷೆಗಳು 27 ಸಾವಿರದವರೆಗೆ ನಡೆಯುತ್ತಿದ್ದ ಕಾರಣ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿತ್ತು. ಆದರೆ ಕಳೆದ ಎರಡು ದಿನದಿಂದ ಪರೀಕ್ಷೆ ಕಡಿಮೆಯಾದ ಕಾರಣ ಸೋಂಕಿನ ಪ್ರಕರಣ ಸಹ ಇಳಿಕೆಯಾಗಿದೆ. ಕಳೆದ ಎಂಟು ದಿನಗಳಿಂದ ಸೋಂಕಿತರ ಸಾವು ವರದಿಯಾಗಿಲ್ಲ. ರಾಜ್ಯದಲ್ಲಿ ಈವರೆಗೆ 39.5 ಲಕ್ಷ ಮಂದಿಗೆ ಸೊಂಕು ತಗುಲಿದೆ. 39.1 ಲಕ್ಷ ಮಂದಿ ಗುಣಮುಖರಾಗಿದ್ದು, 40,066 ಮಂದಿ ಸಾವಿಗೀಡಾಗಿದ್ದಾರೆ.