* ಮುಂಬೈ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ದುರಂತ'
* ಬೆಂಕಿ ತೀವ್ರತೆಗೆ ಏಳು ಸಾವು, ಹದಿನೈದು ಮಂದಿಗೆ ಗಾಯ
* ರಕ್ಷಣಾ ಕಾರ್ಯ ಮುಂದುವರೆಸಿದ ಸಿಬ್ಬಂದಿ
ಮುಂಬೈ(ಜ.22): ಮುಂಬೈನ ತದ್ದೇವ್ ಪ್ರದೇಶದ ಭಾಟಿಯಾ ಆಸ್ಪತ್ರೆ ಬಳಿಯ ಕಟ್ಟಡದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಇದುವರೆಗೆ 7 ಜನರು ಸಾವನ್ನಪ್ಪಿದ್ದಾರೆ. ಹಲವರಿಗೆ ಸುಟ್ಟ ಗಾಯಗಳಾಗಿವೆ. ಮೃತಪಟ್ಟ ಏಳು ಮಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ವೇಳೆ ಅವರು ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರಲ್ಲಿ 5 ಜನರು ನಾಯರ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಒಬ್ಬರು ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮತ್ತು ಇನ್ನೊಬ್ಬರು ಭಾಟಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಗಾಯಗೊಂಡವರು ಆಸ್ಪತ್ರೆಗೆ
undefined
ಮಾಹಿತಿ ಪ್ರಕಾರ ಬೆಳಗ್ಗೆ 7.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದ 15ನೇ ಮಹಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡು ನಂತರ ಮೇಲಕ್ಕೆ ತಲುಪಿದೆ ಎಂದು ಹೇಳಲಾಗಿದೆ. ಬೆಂಕಿಯಿಂದಾಗಿ 19 ನೇ ಮಹಡಿಗೆ ಹೆಚ್ಚು ಹಾನಿಯಾಗಿದೆ. ಹಲವಾರು ಅಗ್ನಿಶಾಮಕ ದಳದವರು ಸಾಕಷ್ಟು ಪ್ರಯತ್ನದ ನಂತರ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಬೆಂಕಿಯಿಂದಾವರಿಸಿದ ಹೊಗೆಯಿಂದಾಗಿ ರಕ್ಷಣಾ ಕಾರ್ಯಕರ್ತರು ಒಳ ಹೋಗಲು ಕಷ್ಟಪಡುತ್ತಿದ್ದಾರೆ. ಬೆಂಕಿ ಅನಾಹುತಕ್ಕೆ ಕಾರಣ ಏನೆಂದು ಇನ್ನೂ ಪತ್ತೆಯಾಗಿಲ್ಲ.
ಬೆಂಕಿ ನಿಯಂತ್ರಣದಲ್ಲಿದೆ, ರಕ್ಷಣಾ ಕಾರ್ಯ ನಡೆಯುತ್ತಿದೆ
ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ, ಆದರೆ ಹೊಗೆಯಿಂದಾಗಿ ಜನರು ಉಸಿರಾಡಲು ಕಷ್ಟಪಡುತ್ತಿದ್ದಾರೆ ಎಂದು ಮುಂಬೈ ಮೇಯರ್ ಕಿಶೋರಿ ಪೆಡ್ನೇಕರ್ ಹೇಳಿದ್ದಾರೆ. ಕಟ್ಟಡದಲ್ಲಿ ಮೂರನೇ ಹಂತದ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಎಷ್ಟು ತೀವ್ರವಾಗಿದೆ ಎಂದರೆ 13 ಅಗ್ನಿಶಾಮಕ ಟೆಂಡರ್‌ಗಳ ಸಹಾಯದಿಂದ ಅದನ್ನು ಹತೋಟಿಗೆ ತರಲಾಯಿತು. ಆದರೂ ಕಟ್ಟಡದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಕಟ್ಟಡದ ಬಳಿ ಐದು ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.