ವಾರಕ್ಕೆ 70 ಗಂಟೆ ಕೆಲಸ: ಇನ್ಫಿ ಮೂರ್ತಿ ಹೇಳಿಕೆಗೆ ಪ್ರಿಯಾಂಕ್‌ ಖರ್ಗೆ ಬೆಂಬಲ

Published : Nov 01, 2023, 10:37 AM IST
ವಾರಕ್ಕೆ 70 ಗಂಟೆ ಕೆಲಸ: ಇನ್ಫಿ ಮೂರ್ತಿ ಹೇಳಿಕೆಗೆ ಪ್ರಿಯಾಂಕ್‌ ಖರ್ಗೆ ಬೆಂಬಲ

ಸಾರಾಂಶ

ನಾರಾಯಣ ಮೂರ್ತಿಯವರು ಇನ್ಫೋಸಿಸ್‌ ಸಂಸ್ಥೆಯನ್ನು ಕಷ್ಟಪಟ್ಟು ಕಟ್ಟಿದ್ದಾರೆ. ಯುವಕರು ಪ್ರತಿ ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು ಎಂದು ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ಭವಿಷ್ಯದ ಭಾರತಕ್ಕೆ ಇದೊಂದು ಉತ್ತಮವಾದ ಸಲಹೆ. ನಾನು ಇದನ್ನು ಸ್ವಾಗತಿಸುತ್ತೇನೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. 

ನವದೆಹಲಿ (ನ.01): ನಾರಾಯಣ ಮೂರ್ತಿಯವರು ಇನ್ಫೋಸಿಸ್‌ ಸಂಸ್ಥೆಯನ್ನು ಕಷ್ಟಪಟ್ಟು ಕಟ್ಟಿದ್ದಾರೆ. ಯುವಕರು ಪ್ರತಿ ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು ಎಂದು ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ಭವಿಷ್ಯದ ಭಾರತಕ್ಕೆ ಇದೊಂದು ಉತ್ತಮವಾದ ಸಲಹೆ. ನಾನು ಇದನ್ನು ಸ್ವಾಗತಿಸುತ್ತೇನೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಭಾರತದ ಉತ್ಪಾದಕತೆ ಕಡಿಮೆಯಾಗಿದ್ದು, ಜಿಡಿಪಿ ಹೆಚ್ಚಾಗಲು ಯುವಕರು ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಮಾಡಬೇಕು ಎಂಬ ಇನ್ಫೋಸಿಸ್‌ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಹೇಳಿಕೆ ಇತ್ತೀಚೆಗೆ ಭಾರೀ ಪರ ವಿರೋಧಗಳ ಚರ್ಚೆಗೆ ಗ್ರಾಸವಾಗಿದ್ದ ಬೆನ್ನಲ್ಲೇ ಮೂರ್ತಿ ಹೇಳಿಕೆಗೆ ಪ್ರಿಯಾಂಕ್‌ ಬೆಂಬಲ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್‌ ‘ಮೂರ್ತಿ ಅವರು ಕಠಿಣ ಪರಿಶ್ರಮದಿಂದ ಕಂಪನಿ ನಿರ್ಮಿಸಿ ಹೆಚ್ಚಿನ ಜನರಿಗೆ ಉದ್ಯೋಗ ನೀಡುವ ಮೂಲಕ ತಮ್ಮನ್ನು ತಾವು ಏನೆಂದು ಸಾಬೀತುಪಡಿಸಿದ್ದಾರೆ. ಅವರು ದೇಶದ ಹಿತದೃಷ್ಟಿಯಿಂದ ತಮ್ಮ ಅಭಿಪ್ರಾಯ ಹೇಳಿದ್ದಾರೆ. ನಾವು ಉತ್ಪಾದಕ ಕೆಲಸಗಳತ್ತ ಹೆಚ್ಚು ಗಮನ ಹರಿಸಬೇಕು. ಜಾಗತಿಕ ಉತ್ಪಾದನಾ ಕೇಂದ್ರವಾಗಿ ಹೊರಹೊಮ್ಮಲು ಉತ್ಪಾದಕತೆ ಹೆಚ್ಚಿಸಿಕೊಳ್ಳಬೇಕು. ಅದಕ್ಕಾಗಿ ಎಲ್ಲರೂ ಶ್ರಮಿಸಬೇಕು’ ಎಂದಿದ್ದಾರೆ.

ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು: ಭಾರತ ಗಮನಾರ್ಹ ಬದಲಾವಣೆಯನ್ನು ಸಾಧಿಸಬೇಕಾದರೆ ಭಾರತದ ಯುವಕರು ವಾರಕ್ಕೆ ಗರಿಷ್ಠ 70 ಗಂಟೆಗಳ ಕಾಲ ಕೆಲಸ ಮಾಡಬೇಕು. ಅಲ್ಲದೇ ಅನಪೇಕ್ಷಿತ ಹವ್ಯಾಸಗಳನ್ನು ಪಾಶ್ಚಿಮಾತ್ಯರಿಂದ ಕಲಿಯಬಾರದು ಎಂದು ಇನ್ಫೊಸಿಸ್‌ ಸ್ಥಾಪಕ ನಾರಾಯಣ ಮೂರ್ತಿ ಗುರುವಾರ ಹೇಳಿದ್ದಾರೆ. ಇನ್ಫೋಸಿಸ್‌ನ ಮಾಜಿ ಸಿಎಫ್‌ಒ ಮೋಹನ್‌ದಾಸ್‌ ಪೈ ಅವರ ಜೊತೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಮೂರ್ತಿ, ಭಾರತೀಯರು ಪಾಶ್ಚಿಮಾತ್ಯರಿಂದ ಅನಪೇಕ್ಷಿತ ಹವ್ಯಾಸಗಳನ್ನು ಕಲಿಯಬಾರದು. ಭಾರತ ನನ್ನ ದೇಶ, ಇದಕ್ಕಾಗಿ ನಾನು 70 ಗಂಟೆಗಳ ಕಾಲ ದುಡಿಯುತ್ತೇನೆ ಎಂಬ ಮನಃಸ್ಥಿತಿಯನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕೇಂದ್ರ ಸಚಿವ ಶೆಖಾವತ್‌ ಆತ್ಮವಿಮರ್ಶೆ ಮಾಡಿಕೊಳ್ಳಲಿ: ಸಿದ್ದರಾಮಯ್ಯ

ಕಳೆದ 25ರಿಂದ 30 ವರ್ಷಗಳಲ್ಲಿ ಇತರ ದೇಶಗಳ ಅಭಿವೃದ್ಧಿಯನ್ನು ನಾವು ಗಮನಿಸಿದರೆ ಇದು ನಮಗೆ ಅರ್ಥವಾಗುತ್ತದೆ. ಇಷ್ಟು ಕಾಲಮಾನವನ್ನು ಏಕೆ ಹೇಳುತ್ತಿದ್ದೇನೆ ಎಂದರೆ, ಈ ಅವಧಿಯಲ್ಲಿ ಈ ದೇಶಗಳು ಏಳು ಬೀಳುಗಳನ್ನು ಕಂಡಿವೆ. ಚೀನಾದಂತಹ ದೇಶಗಳು ಆರ್ಥಿಕ ಅಭಿವೃದ್ಧಿ ಸಾಧಿಸಲು ತೆಗೆದುಕೊಂಡ ನಿರ್ಧಾರಗಳನ್ನು ಗಮನಿಸಿದರೆ ನಾವು ಏನು ಮಾಡಬೇಕು ಎಂಬುದು ಗೊತ್ತಾಗುತ್ತದೆ ಎಂದು ಹೇಳಿದರು. ವಿಶ್ವಕ್ಕೆ ಹೋಲಿಸಿದರೆ ಭಾರತದ ಕೆಲಸದ ಉತ್ಪನ್ನ ಬಹಳ ಕಡಿಮೆ ಇದೆ. ಹಾಗಾಗಿ ನಾವು ನಮ್ಮ ಕೆಲಸವನ್ನು ಹೆಚ್ಚು ಮಾಡದಿದ್ದರೆ, ಸರ್ಕಾರದಲ್ಲಿ ಭ್ರಷ್ಟಾಚಾರವನ್ನು ಕಡಿಮೆ ಮಾಡದಿದ್ದರೆ, ನಾವು ಅಂದುಕೊಂಡಿರುವ ಅವಧಿಯಲ್ಲಿ ಅಭಿವೃದ್ಧಿಯನ್ನು ಸಾಧಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
ಮದುವೆ ನಂತರ ಕಾರಿನ ಸ್ಟೇರಿಂಗ್ ಹಿಡಿದ ವಧು; ದೇವ್ರೇ ಕಾಪಾಡಪ್ಪಾ ಎಂದು ಕೈಮುಗಿದು ಕುಳಿತುಕೊಂಡ ವರ!