
ಚೆನ್ನೈ(ಜ.25): ಕಳೆದ 3 ದಿನಗಳಿಂದ ದುಬೈ ಮತ್ತು ಶಾರ್ಜಾದ ನಗರಗಳಿಂದ ಭಾರತಕ್ಕೆ ಅಕ್ರಮವಾಗಿ ತರಲಾಗಿದ್ದ 9 ಆರೋಪಿಗಳನ್ನು ಬಂಧಿಸುವಲ್ಲಿ ಚೆನ್ನೈ ವಿಮಾನ ನಿಲ್ದಾಣದ ಸೀಮಾಸುಂಕ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಅಲ್ಲದೆ ಬಂಧಿತರ ಗುದನಾಳ ಸೇರಿದಂತೆ ಇನ್ನಿತರೆಡೆಗಳಲ್ಲಿ ಬಚ್ಚಿಟ್ಟುಕೊಂಡಿದ್ದ 9 ಕೇಜಿಯಷ್ಟುಚಿನ್ನವನ್ನು ಸಹ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ದುಬೈ ಮತ್ತು ಶಾರ್ಜಾದ ನಗರಗಳಿಂದ ನಾಲ್ವರು ಮಹಿಳೆಯರು ಸೇರಿದಂತೆ ಒಟ್ಟಾರೆ 17 ಮಂದಿ ವಿದೇಶದಿಂದ ಅಕ್ರಮ ಚಿನ್ನವನ್ನು ಭಾರತಕ್ಕೆ ತರುತ್ತಿದ್ದಾರೆ ಎಂಬ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಈ ಎಲ್ಲಾ ಪ್ರಯಾಣಿಕರನ್ನು ವಶಕ್ಕೆ ಪಡೆದು ತಪಾಸಣೆ ನಡೆಸಲಾಗಿದ್ದು, ಈ ವೇಳೆ 48 ಬಂಡಲ್‌ಗಳಲ್ಲಿದ್ದ 9.03ರಷ್ಟು ಕೇಜಿ ಚಿನ್ನವು ಆರೋಪಿಗಳ ಗುದನಾಳದಲ್ಲಿ ಪತ್ತೆಯಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದಲ್ಲದೆ ಬ್ಯಾಗ್ ಮತ್ತು ಪಾಕೆಟ್‌ಗಳಲ್ಲಿ 12 ಚಿನ್ನದ ಗಟ್ಟಿಗಳು, ಚಿನ್ನದ ಸರ ಸೇರಿದಂತೆ ಇನ್ನಿತರ ವಸ್ತುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ