
ಹೈದರಾಬಾದ್(ಮೇ.24): ವಾರಂಗಲ್‌ನಲ್ಲಿರುವ ತೆರೆದ ಕೊಳವೆ ಬಾವಿಯೊಂದರಿಂದ ಎರಡು ದಿನಗಳಲ್ಲಿ 9 ಮೃತದೇಹಗಳು ಪತ್ತೆಯಾಗಿವೆ. ಇದು ಭಾರೀ ಆತಂಕಕ್ಕೆ ಕಾರಣವಾಗಿದೆ. ಇದು ಸಾಮೂಹಿಕ ಆತ್ಮಹತ್ಯೆ ಇರಬಹುದೇ ಎಂಬ ಶಂಕೆ ವ್ಯಕ್ತವಾಗಿದೆ.
ಮೃತರೆಲ್ಲರೂ ಗೋಣಿ ಚೀಲದ ಬ್ಯಾಗ್ ತಯಾರಿಸುವ ಸ್ಥಳೀಯ ಕಂಪನಿಯಲ್ಲಿ ಕೆಲಸ ಮಾಡುತ್ತಿರುವವರಾಗಿದ್ದಾರೆ. ಈ ಕೊಳವೆ ಬಾವಿಯಲ್ಲಿ ಗುರುವಾರ 4 ಮತ್ತು ಶುಕ್ರವಾರ ಮತ್ತೆ 5 ಮೃತದೇಹಗಳು ಪತ್ತೆಯಾಗಿವೆ.
ಮರಣೋತ್ತರ ಪರೀಕ್ಷೆ ವೇಳೆ ದೇಹದ ಮೇಲೆ ಗಾಯದ ಗುರುತುಗಳು ಅಥವಾ ದೇಹದಲ್ಲಿ ವಿಷದ ಅಂಶವೂ ಪತ್ತೆಯಾಗಿಲ್ಲ. ಹೀಗಾಗಿ, ಇದೊಂದು ಸಾಮೂಹಿಕ ಆತ್ಮಹತ್ಯೆ ಅಥವಾ ಕೊಲೆ ಇರಬಹುದು ಎಂಬ ವದಂತಿಗಳು ಹರದಾಡುತ್ತಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ