Srinagar Nowgam Blast: ಶ್ರೀನಗರದ ನೌಗಮ್ ಪೊಲೀಸ್ ಠಾಣೆಯಲ್ಲಿ ಸ್ಪೋಟ; 9 ಸಾವು, 29 ಮಂದಿಗೆ ಗಾಯ

Published : Nov 15, 2025, 09:09 AM IST
nowgam blast

ಸಾರಾಂಶ

ಶ್ರೀನಗರದ ನೌಗಮ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭಾರಿ ಸ್ಫೋಟದಲ್ಲಿ 9 ಜನರು ಮೃತಪಟ್ಟು, 29 ಮಂದಿ ಗಾಯಗೊಂಡಿದ್ದಾರೆ. ವಶಪಡಿಸಿಕೊಂಡಿದ್ದ ಸ್ಫೋಟಕಗಳ ಪರಿಶೀಲನೆ ವೇಳೆ ಈ ದುರಂತ ಸಂಭವಿಸಿರಬಹುದೆಂದು ಶಂಕಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.

ಶ್ರೀನಗರ: ಶುಕ್ರವಾರ ತಡರಾತ್ರಿ ಶ್ರೀನಗರದ ನೌಗಮ್ ಪೊಲೀಸ್ ಠಾಣೆಯಲ್ಲಿ ದೊಡ್ಡಪ್ರಮಾಣದ ಸ್ಫೋಟ ಸಂಭವಿಸಿದ್ದು, 9 ಜನರು ಮೃತರಾಗಿದ್ರೆ, 29 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ದೆಹಲಿಯ ಕೆಂಪುಕೋಟೆಯ ಸ್ಪೋಟಕ ಸಂಬಂಧಿಸಿದ ಸ್ಫೋಟಕಗಳನ್ನು ಈ ಸ್ಥಳದಲ್ಲಿ ಸಂಗ್ರಹಿಸಲಾಗಿತ್ತು. ಸುಮಾರು 30 ಕಿಲೋ ಮೀಟರ್‌ ದೂರದವರೆಗೆ ಸ್ಪೋಟದ ಶಬ್ದ ಕೇಳಿಸಿದೆ. ಪೊಲೀಸ್ ಠಾಣೆಯ ಬಳಿಯಲ್ಲಿದ್ದ ವಾಹನಗಳು ಬೆಂಕಿಗಾಹುತಿಯಾಗಿವೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ, ಭದ್ರತಾ ಅಧಿಕಾರಿಗಳು ಆಗಮಿದ್ದಾರೆ. ಮುಂಜಾಗ್ರತ ಕ್ರಮವಾಗಿ ಈ ಭಾಗದ ರಸ್ತೆಗಳನ್ನು ಮುಚ್ಚಲಾಗಿದೆ.

ತನಿಖೆ ಆರಂಭ

ಪೊಲೀಸ್ ಠಾಣೆಯಲ್ಲಿ ವಶಕ್ಕೆಪಡಿಸಿಕೊಳ್ಳಲಾದ ಸ್ಫೋಟಕಗಳನ್ನು ಸಂಗ್ರಹಿಸಿಡಲಾಗಿತ್ತು. ಸ್ಪೋಟಕಗಳ ಪರಿಶೀಲನೆ ಸಂದರ್ಭದಲ್ಲಿ ಈ ಸ್ಫೋಟ ಸಂಭವಿಸಿದೆಯಾ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ. ಮ್ಯಾಜಿಸ್ಟ್ರೇಟ್ ಮತ್ತು ವಿಧಿವಿಜ್ಞಾನ ಪ್ರಯೋಗಾಲಯ ಅಧಿಕಾರಿಗಳ ಸಮ್ಮುಖದಲ್ಲಿ ಸ್ಪೋಟಕಗಳ ತಪಾಸಣೆ ನಡೆಯಬೇಕಿತ್ತು.

 

 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರತನ್ ಟಾಟಾ ಮಲತಾಯಿ, ಲ್ಯಾಕ್‌ಮೆ ಫ್ಯಾಶನ್ ಸಂಸ್ಥಾಪಕಿ ಸೈಮನ್ ಟಾಟಾ ನಿಧನ
ಭಾರತದ 2 ಬಿಲಿಯನ್ ಡಾಲರ್ ಪರಮಾಣು ಜಲಾಂತರ್ಗಾಮಿ ಒಪ್ಪಂದ ಅಂತಿಮಗೊಳಿಸಿದ ಪುಟಿನ್ ಭೇಟಿ