ಏ.1ರಿಂದ 9 ಲಕ್ಷ ಸರ್ಕಾರಿ ವಾಹನ ಗುಜರಿಗೆ: ನಿತಿನ್‌ ಗಡ್ಕರಿ

Published : Jan 31, 2023, 08:19 AM ISTUpdated : Jan 31, 2023, 08:59 AM IST
ಏ.1ರಿಂದ 9 ಲಕ್ಷ ಸರ್ಕಾರಿ ವಾಹನ ಗುಜರಿಗೆ:  ನಿತಿನ್‌ ಗಡ್ಕರಿ

ಸಾರಾಂಶ

15 ವರ್ಷಕ್ಕಿಂತ ಹೆಚ್ಚು ಹಳೆಯದಾದ 9 ಲಕ್ಷ ಸರ್ಕಾರಿ ವಾಹನಗಳನ್ನು ಏ.1ರಿಂದ ಗುಜರಿಗೆ ಹಾಕಲಾಗುತ್ತದೆ. ಅವುಗಳ ಜಾಗದಲ್ಲಿ ನೂತನ ವಾಹನ ಬಳಕೆ ಆರಂಭಿಸಲಾಗುತ್ತದೆ. ಈ ಮೂಲಕ ಮಾಲಿನ್ಯಕ್ಕೆ ಕಡಿವಾಣ ಹಾಕಲಾಗುತ್ತದೆ ಎಂದು ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ.

ನವದೆಹಲಿ: 15 ವರ್ಷಕ್ಕಿಂತ ಹೆಚ್ಚು ಹಳೆಯದಾದ 9 ಲಕ್ಷ ಸರ್ಕಾರಿ ವಾಹನಗಳನ್ನು ಏ.1ರಿಂದ ಗುಜರಿಗೆ ಹಾಕಲಾಗುತ್ತದೆ. ಅವುಗಳ ಜಾಗದಲ್ಲಿ ನೂತನ ವಾಹನ ಬಳಕೆ ಆರಂಭಿಸಲಾಗುತ್ತದೆ. ಈ ಮೂಲಕ ಮಾಲಿನ್ಯಕ್ಕೆ ಕಡಿವಾಣ ಹಾಕಲಾಗುತ್ತದೆ ಎಂದು ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಸೋಮವಾರ ಹೇಳಿದ್ದಾರೆ.

ಉದ್ಯಮ ಸಂಸ್ಥೆ ಎಫ್‌ಐಸಿಸಿಐ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಗಡ್ಕರಿ, ‘ಏ.1 ರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮತ್ತು ಸಾರ್ವಜನಿಕ ವಲಯಗಳ ಸಾರಿಗೆ ನಿಗಮಗಳ ಸ್ವಾಮ್ಯದಲ್ಲಿರುವ 15 ವರ್ಷ ಮೇಲ್ಪಟ್ಟಹಳೆಯ 9 ಲಕ್ಷಕ್ಕೂ ಅಧಿಕ ವಾಹನಗಳನ್ನು ರದ್ದುಗೊಳಿಸಿ ಅವುಗಳನ್ನು ಗುಜರಿಗೆ ಹಾಕಲು ಅನಮೋದನೆ ನೀಡಲಾಗಿದೆ ಹಾಗೂ ಏಪ್ರಿಲ್‌ನಲ್ಲಿ ಅವುಗಳ ಸ್ಥಾನಕ್ಕೆ ನೂತನ ವಾಹನಗಳನ್ನು ತರಲಾಗುತ್ತದೆ. ಇದು ವಾಯುಮಾಲಿನ್ಯವನ್ನು ಕಡಿಮೆ ಮಾಡುತ್ತದೆ’ ಎಂದರು.

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ 1 ಲಕ್ಷ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ, ಅದ್ಭುತ ಫೋಟೋ ಇಲ್ಲಿದೆ ನೋಡಿ

ಆದರೆ ‘ಈ ನಿಯಮವು ದೇಶದ ರಕ್ಷಣೆ, ಆಂತರಿಕ ಭದ್ರತೆ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸುವ ಶಸ್ತ್ರಸಜ್ಜಿತ ವಾಹನಗಳಿಗೆ ಅನ್ವಯಿಸುವುದಿಲ್ಲ’ ಎಂದು ಸ್ಪಷ್ಟಪಡಿಸಿದರು. ಅಲ್ಲದೇ ‘ಎಥನಾಲ್‌, ಮೆಥನಾಲ್‌, ಬಯೋ- ಸಿಎನ್‌ಜಿ, ಬಯೋ- ಎಲ್‌ಎನ್‌ಜಿ ಹಾಗೂ ವಿದ್ಯುತ್‌ ಚಾಲಿತ ವಾಹನಗಳ ಬಳಕೆಯನ್ನು ಸುಗಮವಾಗಿಸುವಲ್ಲಿ ಸರ್ಕಾರವು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ’ ಎಂದರು.

ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಹಾಕಿದವನ ಕ್ರೈಂ ಹಿಸ್ಟರಿ, ತಾಯಿ-ಮಗುವನ್ನ ಕೊಂದಿದ್ದ ಪಾತಕಿ ಜಯೇಶ್!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೆಹೆಂದಿಯಾಗಿತ್ತು, ಆದರೆ ಮದುವೆಯಾಗಲ್ಲ: ಕೊನೆಗೂ Palash Muchhal ಜೊತೆಗಿನ ಸಂಬಂಧಕ್ಕೆ ತೆರೆ ಎಳೆದ Smriti Mandhana
ಮನೆಯಲ್ಲಿ ಒಂದು ರೂಪಾಯಿ ಇಲ್ಲ ಆದ್ರೂ ಸಿಸಿಟಿವಿ ಯಾಕೆ ಹಾಕಿದ್ರಿ: ಸಿಕ್ಕಿದ್ದನ್ನು ದೋಚಿ ಪತ್ರ ಬರೆದಿಟ್ಟು ಹೋದ ಕಳ್ಳ