
ಹಿಮಾಚಲ ಪ್ರದೇಶ(ಜು.25): ಹಿಮಾಚಲ ಪ್ರದೇಶದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಸಾಂಗ್ಲಾ ಕಣಿವೆಯಲ್ಲಿರುವ ಎತ್ತರದ ಪರ್ವತದಲ್ಲಿ ಗುಡ್ಡು ಕುಸಿತ ಸಂಭವಿಸಿದೆ. ಪರಿಣಾಣ ಕಣಿವೆಗೆ ದೊಡ್ಡ ಬಂಡೆ ಕಲ್ಲುಗಳು ಉರುಳಿ ಬಿದ್ದಿವೆ. ಇದರಿಂದ 9 ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಧರ್ಮಶಾಲಾದಲ್ಲಿ ಮೇಘಸ್ಫೋಟ, ನೀರಿನ ರಭಸಕ್ಕೆ ಕೊಚ್ಚಿ ಹೋದ ಕಾರುಗಳು!
ಕಿನ್ನೌರ್ ಜಿಲ್ಲೆಯ ಸಾಂಗ್ಲಿ ಕಣಿವೆಯಲ್ಲಿ ಈ ದುರಂತ ಸಂಭವಿಸಿದೆ. ಪರ್ವತದ ಮೇಲಿನಿಂದ ದೊಡ್ಡ ಬಂಡೆ ಕಲ್ಲುಗಳು ಇದ್ದಕ್ಕಿದ್ದಂತೆ ಉರುಳಿದೆ. ಕೆಳಗೆ ಹರಿಯುತ್ತಿರುವ ನದಿಯತ್ತ ಬಂಡೆಗಳು ಉರುಳಿದೆ. ನದಿ ಇತ್ತ ಕಡೆ ಇದ್ದ ಪ್ರವಾಸಿಗರು ಮೊಬೈಲ್ ಮೂಲಕ ವಿಡಿಯೋ ಸೆರೆ ಹಿಡಿದ್ದಾರೆ.
ಕಣಿವೆಯ ಕೆಳಭಾಗ ಪ್ರಸಿದ್ದ ಪ್ರವಾಸಿ ತಾಣವಾಗಿದೆ. ಹಲವು ರೆಸಾರ್ಟ್ ಇಲ್ಲಿವೆ. ಹೀಗೆ ಆಗಮಿಸಿದವರಲ್ಲಿ 9 ಮಂದಿ ಈ ಭೂಕುಸಿತದಲ್ಲಿ ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ರಕ್ಷಣಾ ತಂಡವನ್ನು ನಿಯೋಜಿಸಲಾಗಿದ್ದು, ಗಾಯಗೊಂಡ ಮೂವರನ್ನು ಸ್ಥಳೀಯ ಆಸ್ಪತ್ರೆ ದಾಖಲಿಸಲಾಗಿದೆ. ಪ್ರವಾಸಿಗರ ಕಾರು ಸಂಪೂರ್ಣ ಪುಡಿ ಪುಡಿಯಾಗಿದೆ.
ಘಟನೆ ಕುರಿತು ಮಾಹಿತಿ ಪಡೆದ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್ ಠಾಕೂರ್, ಅಗತ್ಯ ನೆರವು ಘೋಷಿಸಿದ್ದಾರೆ. ಜಿಲ್ಲಾಧಿಕಾರಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ತಕ್ಷಣ ಪರಿಹಾರ ನೀಡಲು ಸೂಚಿಸಲಾಗಿದೆ. ಇದೇ ವೇಳೆ ಗಾಯಗೊಂಡವರು ಶೀಘ್ರ ಚೇತರಿಕೆಗೆ ಪಾರ್ಥಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ