ಬಿಹಾರದಲ್ಲಿ ಮತ್ತೊಂದು ಸೇತುವೆ ದುರಂತ ಸಂಭವಿಸಿದೆ. 1,710 ಕೋಟಿ. ರು ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಅಗುವಾನಿ ಮತ್ತು ಸುಲ್ತಾನ್ ಗಂಜ್ ಸೇತುವೆಯ ಒಂದು ಭಾಗ ಶನಿವಾರ ಕುಸಿದಿದೆ.
ಪಟನಾ (ಆ.18): ಬಿಹಾರದಲ್ಲಿ ಮತ್ತೊಂದು ಸೇತುವೆ ದುರಂತ ಸಂಭವಿಸಿದೆ. 1,710 ಕೋಟಿ. ರು ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಅಗುವಾನಿ ಮತ್ತು ಸುಲ್ತಾನ್ ಗಂಜ್ ಸೇತುವೆಯ ಒಂದು ಭಾಗ ಶನಿವಾರ ಕುಸಿದಿದೆ. ಕಳೆದ ಮೂರು ವರ್ಷಗಳಲ್ಲಿ ಈ ಸೇತುವೆ ಕುಸಿದಿದ್ದು, ಇದು ಮೂರನೇ ಸಲ. ಸೇತುವೆಯ 9 ಮತ್ತು 10ನೇ ಕಂಬದ ನಡುವಿನ ಭಾಗ ಶನಿವಾರ ಕುಸಿದು ಗಂಗಾನದಿ ಪಾಲಾಗಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಸಾವು- ನೋವಿನ ವರದಿಯಾಗಿಲ್ಲ.
ಅಗುವಾನಿ - ಸುಲ್ತಾನ್ ಗಂಜ್ ಸೇತುವೆಯು ಬಿಹಾರದ ಉತ್ತರ ಮತ್ತು ದಕ್ಷಿಣ ಭಾಗಗಳ ನಡುವಿನ ಪ್ರಮುಖ ಸಂಪರ್ಕ ಕೊಂಡಿಯಾಗಿದ್ದು, ಹಲವು ಪ್ರಮುಖ ನಗರಗಳನ್ನು ಸಂಪರ್ಕಿಸುತ್ತದೆ. 3.1 ಕಿ.ಮೀ ಉದ್ದದ ಈ ಸೇತುವೆ ನಿರ್ಮಾಣ ಕಾರ್ಯ 2014ರಲ್ಲಿ ಆರಂಭವಾಗಿತ್ತು. ಆದರೆ ಇಲ್ಲಿಯವರೆಗೆ ಶೇ.45 ರಷ್ಟು ಕೆಲಸಗಳು ಮಾತ್ರ ಪೂರ್ಣಗೊಂಡಿವೆ. ಈ ವರ್ಷದ ಆರಂಭದಿಂದ ಇದುವರೆಗೂ ಬಿಹಾರದಲ್ಲಿ ಕನಿಷ್ಠ 12 ಸೇತುವೆಗಳು ಕುಸಿದಿವೆ.
ಹಳೆಯ ಸೇತುವೆ ಧರೆಗೆ: ಬಿಹಾರದಲ್ಲಿ ಸೇತುವೆ ಕುಸಿತದ ಸರಣಿ ಮುಂದುವರಿದಿದ್ದು, ವೈಶಾಲಿ ಜಿಲ್ಲೆಯ ರಾಘೋಪುರದಲ್ಲಿ ಶನಿವಾರ ಸಣ್ಣ ಸೇತುವೆಯೊಂದು ಕುಸಿದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ‘20 ವರ್ಷ ಹಳೆಯದಾಗಿದ್ದ ಈ ಸೇತುವೆ ನೀರಿನ ರಭಸದಿಂದ ಹಾನಿಗೊಳಗಾಗಿತ್ತು. ಆದ್ದರಿಂದ ಅದರ ಬಳಕೆಯನ್ನು 2021ರಲ್ಲೇ ನಿಲ್ಲಿಸಲಾಗಿತ್ತು’ ಎಂದು ಜಿಲ್ಲಾಧಿಕಾರ ಹೇಳಿಕೆ ಬಿಡುಗಡೆ ಮಾಡಿದೆ.
ಭಾರತ ತನ್ನ ಅಭಿವೃದ್ಧಿಯ ವೇಗಕ್ಕೆ ಹೋಲಿಸಿದರೆ ಉದ್ಯೋಗ ಸೃಷ್ಟಿಯಲ್ಲಿ ಹಿಂದುಳಿದಿದೆ: ಗೀತಾ ಗೋಪಿನಾಥ್
ಇತ್ತೀಚಿನ ದಿನಗಳಲ್ಲಿ ಬಿಹಾರದ ಹಲವು ಜಿಲ್ಲೆಗಳಲ್ಲಿ ಹತ್ತಕ್ಕೂ ಹೆಚ್ಚು ಸೇತುವೆಗಳು ಕುಸಿದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ. ಸಿವಾನ್, ಸರನ್, ಮಧುಬನಿ, ಅರಾರಿಯಾ, ಪೂರ್ವ ಚಂಪಾರಣ್, ಕಿಶನ್‌ಗಂಜ್ ಜಿಲ್ಲೆಗಳು ಮತ್ತು ಇತರ ಸ್ಥಳಗಳಲ್ಲಿ ಸಣ್ಣ ಸೇತುವೆಗಳು ಕುಸಿದ ಘಟನೆಗಳು ವರದಿಯಾಗಿವೆ. ಹೀಗಾಗಿ ರಾಜ್ಯದ ಎಲ್ಲಾ ಸೇತುವೆಗಳನ್ನು ಪರಿಶೀಲಿಸಿ ಅಗತ್ಯವಿದ್ದರೆ ರಿಪೇರಿ ಮಾಡಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಸೂಚಿಸಿದ್ದರು.