ಬೆಂಕಿಯ ಕೆನ್ನಾಲಿಗೆಯಲ್ಲಿ ಧಗಧಗ ಹೊತ್ತಿ ಉರಿದ ಐವರು ಮದುವೆಗೆ ತೆರಳುತ್ತಿದ್ದವರ ಕಾರ್

Published : Apr 12, 2026, 08:51 PM IST
car Accident

ಸಾರಾಂಶ

ಮದುವೆಗೆ ತೆರಳುತ್ತಿದ್ದ ಐವರು ಪ್ರಯಾಣಿಸುತ್ತಿದ್ದ ಕಾರೊಂದು ಚಲಿಸುತ್ತಿದ್ದಂತೆಯೇ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಚಾಲಕನ ಸಮಯಪ್ರಜ್ಞೆಯಿಂದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿರಬಹುದೆಂದು ಶಂಕಿಸಲಾಗಿದೆ.

ಕಾಸರಗೋಡು: ಚೀಮೇನಿ ತಾರವುರ್ ಎಂಬಲ್ಲಿ ಚಲಿಸುತ್ತಿದ್ದ ಕಾರೊಂದು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಪದನ್ನದಿಂದ ಕಂಬಲ್ಲೂರ್‌ಗೆ ಮದುವೆ ಸಮಾರಂಭಕ್ಕೆ ಹೋಗುತ್ತಿದ್ದ ಐವರು ಈ ಕಾರ್‌ನಲ್ಲಿ ಪ್ರಯಾಣಿಸುತ್ತಿದ್ದರು. ಕಾರಿನಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ತಕ್ಷಣ ಚಾಲಕ ಸೇರಿದಂತೆ ಎಲ್ಲಾ ಪ್ರಯಾಣಿಕರು ಕಾರ್‌ನಿಂದ ಕೆಳಗಿಳಿದಿದ್ದಾರೆ. ಹೀಗಾಗಿ, ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚೀಮೇನಿ ತಾರವುರ್ ರಸ್ತೆಯಲ್ಲಿ ರೆನಾಲ್ಟ್ ಲಾಡ್ಜಿ ಎಂಬವರಿಗೆ ಸೇರಿದ ಕಾರ್ ಬೆಂಕಿಗಾಹುತಿಯಾಗಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಕಾರಿನ ಬಾನೆಟ್‌ನಿಂದ ಹೊಗೆ ಬರುತ್ತಿರುವುದನ್ನು ನೋಡಿದ ಡ್ರೈವರ್ ತಕ್ಷಣ ಗಾಡಿ ನಿಲ್ಲಿಸಿದ್ದಾರೆ. ಒಳಗಿದ್ದ ಐವರು ವೇಗವಾಗಿ ಕೆಳಗೆ ಇಳಿದುಕೊಂಡಿದ್ದಾರೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ಕಾರನ್ನು ಸಂಪೂರ್ಣವಾಗಿ ಆವರಿಸಿಕೊಂಡು, ಸುಟ್ಟು ಕರಕಲಾಗಿದೆ ಎಂದು ಪ್ರಯಾಣಿಕರು ಹೇಳಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಬಂದ ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಕಾರು ಸಂಪೂರ್ಣವಾಗಿ ಸುಟ್ಟು ಹೋಗಿದ್ದರೂ, ಪ್ರಯಾಣಿಕರಿಗೆ ಯಾವುದೇ ಗಾಯಗಳಾಗದೆ ಪಾರಾಗಿದ್ದು, ಸಂಬಂಧಿಕರು ಮತ್ತು ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಈ ಅವಘಡ ಸಂಭವಿಸಿರಬಹುದು ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಲಾರಿ ಡಿಕ್ಕಿಯಾಗಿ ಕ್ಲೀನರ್ ಸ್ಥಳದಲ್ಲೇ ಸಾವು

ಸೂಲಿಬೆಲೆ ಸಮೀಪದ ಚೆನ್ನೈ ಎಕ್ಸಪ್ರೆಸ್ ಹೈವೇಯ ಸಾದಪ್ಪನಹಳ್ಳಿ ಗೇಟ್ ಬಳಿ ಭಾನುವಾರ ಬೆಳಗಿನ ಜಾವ ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದ ಬಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಕ್ಲೀನರ್ ಸಿಂಧೆ ಮಹದೇವ ದತ್ತಾಜಿ (೩೮) ಎಂಬುವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತೊಂದು ಲಾರಿ ಚಾಲಕ ಗೋಕುಲ್ ಹಾಗೂ ಕ್ಲೀನರ್ ಧನಶೇಖರ್ ಅವರಿಗೆ ಗಂಭೀರ ಗಾಯಾಗಳಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಅಪಘಾತ ಕಾರಣ ಹೆದ್ದಾರಿ ಬಂದ್ ಮಾಡಲಾಗಿ ಸೂಲಿಬೆಲೆ ಪೊಲೀಸರು ಪರ‍್ಯಾಯ ರಸ್ತೆ ವ್ಯವಸ್ಥೆ ಮಾಡಿ ಸುಗುಮ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.

ಬೈಕ್‌ಗಳ ನಡುವೆ ಅಪಘಾತ: ಓರ್ವ ಸಾವು

ಮಳವಳ್ಳಿ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಬೈಕ್ ಸವಾರ ಮೃತಪಟ್ಟಿರುವ ಘಟನೆ ಪಟ್ಟಣದ ಸುಲ್ತಾನ್ ರಸ್ತೆಯ ಕೆಎಸ್‌ಆರ್‌ಟಿಸಿ ತರಬೇತಿ ಕೇಂದ್ರದ ಬಳಿ ನಡೆದಿದೆ. ತಾಲೂಕಿನ ಕೊಡಗಹಳ್ಳಿ ನಂಜುಂಡಸ್ವಾಮಿ ಮೃತಪಟ್ಟವರು. ಪಟ್ಟಣದಿಂದ ಮಂಡ್ಯ ಕಡೆಗೆ ಸ್ನೇಹಿತನೊಂದಿಗೆ ತಮ್ಮ ಬೈಕ್ ನಲ್ಲಿ ಹೋಗುತ್ತಿದ್ದಾಗ ಎದುರಿನಿಂದ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ. 

ಇದನ್ನೂ ಓದಿ: ಪ್ರೀತಿ ವಿಶ್ವಾಸದೊಂದಿಗೆ ಭಾವೈಕ್ಯತೆಯಿಂದ ಬಾಳಿ, ಮೂಢನಂಬಿಕೆ ಬಿಟ್ಬಾಕಿ: ಸಿಎಂ ಸಿದ್ದರಾಮಯ್ಯ

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಾಗರಾಜು ಹಾಗೂ ಹಿಂಬದಿ ಸವಾರ ನಾಗರಾಜು ಅವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ನಂಜುಂಡಸ್ವಾಮಿ ಚಿಕಿತ್ಸೆ ಫಲಕಾರಿಯಾಗದೇ ಮಿಮ್ಸ್ ಆಸ್ಪತ್ರೆಯಲ್ಲಿ ಬುಧವಾರ ಸಾವನ್ನಪ್ಪಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:  ರೈತರ ಪಂಪಸೆಟ್‌ಗಳಿಗೆ ವಿದ್ಯುತ್ ಸಂಪರ್ಕಕ್ಕೆ ಅಗತ್ಯ ಕ್ರಮ: ಸಚಿವ ಶಿವಾನಂದ ಪಾಟೀಲ ಭರವಸೆ

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕುಂಭಮೇಳ ವೈರಲ್ ಹುಡುಗಿ ಮದುವೆ ವಯಸ್ಸಿನ ವಿವಾದದಲ್ಲಿ ಹೊಸ ತಿರುವು! ಕೇರಳ ಪೊಲೀಸರ ತನಿಖೆ
ಅಂಬಾನಿ ಮನೆಯಲ್ಲಿ ರೊಟ್ಟಿ ಮಾಡಿದ್ರೆ ಸಿಗತ್ತೆ 24 ಲಕ್ಷ ರೂ. ಸಂಬಳ: ಇದೊಂದು ಕ್ವಾಲಿಫಿಕೇಷನ್​ ಇದ್ರೆ ಸಾಕು ನೋಡಿ