ಮಹಾರಾಷ್ಟ್ರ: ಅಪಘಾತದಿಂದ ಕುಖ್ಯಾತಿ ಗಳಿಸಿರುವ ಥಾಣೆಯ ಸಮೃದ್ಧಿ ಹೆದ್ದಾರಿಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಕ್ರೇನ್ ಕುಸಿದು 16 ಮಂದಿ ದಾರುಣವಾಗಿ ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ ಅನೇಕರು ಗಾಯಗೊಂಡಿದ್ದಾರೆ. ಹೆದ್ದಾರಿಯಲ್ಲಿ ಸೇತುವೆ ನಿರ್ಮಾಣ ಕಾರ್ಯಕ್ಕಾಗಿ ಈ ಕ್ರೇನ್‌ನ್ನು ಬಳಸಲಾಗುತ್ತಿತ್ತು.
ಅಪಘಾತ ಸಂಭವಿಸಿದ ಕೂಡಲೇ ರಕ್ಷಣಾ ಕಾರ್ಯಾಚರಣೆಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಎರಡು ತಂಡಗಳನ್ನು ನಿಯೋಜಿಸಲಾಗಿತ್ತು. ಥಾಣೆ ಜಿಲ್ಲೆಯ ಶಹಾಪುರ ಬಳಿ ಸಮೃದ್ಧಿ ಹೆದ್ದಾರಿಯಲ್ಲಿ ಇಂದು ನಸುಕಿನ ಜಾವ ಈ ದುರಂತ ಸಂಭವಿಸಿದೆ. ದುರಂತದಲ್ಲಿ 16 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಎರಡು ತಂಡಗಳು ಇದುವರೆಗೆ 16 ಮೃತದೇಹಗಳನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ. ಗಾಯಗೊಂಡ ಮೂವರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ.
ಕ್ರೇನ್ ಮೂಲಕ ಕೋವಿಡ್ ರೋಗಿಯ ಸ್ಥಳಾಂತರಿಸಿದ ಚೀನಾ: ವಿಡಿಯೋ ವೈರಲ್
ಟ್ರಕ್ ಮೇಲೆತ್ತುವಾಗ ನೀರಿಗೆ ಬಿದ್ದ ಕ್ರೇನ್!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ