
ನವದೆಹಲಿ: ಚುನಾವಣೆ ವೇಳೆ ರಾಜಕೀಯ ಪಕ್ಷಗಳು ಘೋಷಿಸುವ ಉಚಿತ ಕೊಡುಗೆಗಳ ವಿರುದ್ಧ ಸ್ವತಃ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರೇ ಹೈಕೋರ್ಟ್ ಮೆಟ್ಟಿಲೇರಿರುವ ಅಚ್ಚರಿಯ ಘಟನೆ ದೆಹಲಿಯಲ್ಲಿ ನಡೆದಿದೆ. ಆದರೆ ಈ ಕುರಿತ ಅರ್ಜಿ ವಿಚಾರಣೆಗೆ ನಿರಾಕರಿಸಿರುವ ಹೈಕೋರ್ಟ್, ಅರ್ಜಿದಾರರಿಗೆ ಸುಪ್ರೀಂಕೋರ್ಟ್ ಮೆಟ್ಟಿಲೇರುವಂತೆ ಸಲಹೆ ನೀಡಿದೆ.
ಇತ್ತೀಚೆಗೆ ಮುಕ್ತಾಯಗೊಂಡ ದೆಹಲಿ ವಿಧಾನಸಭಾ ಚುನಾವಣೆ ವೇಳೆ ವಿವಿಧ ರಾಜಕೀಯ ಪಕ್ಷಗಳು ನಾನಾ ರೀತಿಯ ಗ್ಯಾರಂಟಿ ಘೋಷಿಸಿದ್ದವು. ಇದನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ದಿಂಗ್ರಾ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.
ಇದನ್ನೂ ಓದಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣ: ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ದೋಷಿ:, ಮರಣದಂಡನೆ ಸಾಧ್ಯತೆ?
ಅರ್ಜಿಯಲ್ಲಿ, ‘ರಾಜಕೀಯ ಪಕ್ಷಗಳ ಇಂತಹ ಭರವಸೆಗಳು ಜನತಾ ಪ್ರಾತಿನಿಧ್ಯ ಕಾಯ್ದೆಯಡಿಯಲ್ಲಿ ಭ್ರಷ್ಟ ಅಭ್ಯಾಸಗಳು. ಈ ಭರವಸೆಗಳ ವಿರುದ್ಧ ತನಿಖೆ ಮಾಡಬೇಕು. ಅವುಗಳನ್ನು ಅಸಾಂವಿಧಾನಿಕ ಎಂದು ಘೋಷಿಸಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು. ಅಲ್ಲದೇ ಅರ್ಹ ಮಹಿಳಾ ಮತದಾರರಿಗೆ ಮಾಸಿಕ ಆರ್ಥಿಕ ನೆರವು ನೀಡಲು ಆಪ್ 2,100 ರು., ಕಾಂಗ್ರೆಸ್ ಮತ್ತು ಬಿಜೆಪಿ 2,500ರು. ಘೋಷಿಸಿದ್ದ ಭರವಸೆಗಳು ಲಂಚಕ್ಕೆ ಸಮಾನಪಕ್ಷಗಳು ಮತದಾರರ ವೈಯುಕ್ತಿಕ ಡೇಟಾವನ್ನು ಸಂಗ್ರಹಿಸುವುದನ್ನು ಮತ್ತು ಅವುಗಳನ್ನು ಮೂರನೇ ವ್ಯಕ್ತಿಗಳೊಂದಿಗೆ ಹಂಚಿಕೊಳ್ಳುವುದನ್ನು ತಡೆಯಬೇಕು’ ಎಂದು ನ್ಯಾ.ದಿಂಗ್ರಾ ಮನವಿ ಮಾಡಿದ್ದರು.
ಆದರೆ ಅರ್ಜಿ ವಿಚಾರಣೆಗೆ ಕೈಗೆತ್ತಿಕೊಂಡ ಕೋರ್ಟ್, ಇದೇ ರೀತಿಯ ಪ್ರಕರಣವು ಈಗಾಲೇ ವಿಚಾರಣೆಗೆ ಬಾಕಿಯಿದ್ದು,ನೀ ಹಿನ್ನೆಲೆಯಲ್ಲಿ ಸುಪ್ರೀಂ ಮೊರೆ ಹೋಗಲು ನಿರ್ದೇಶಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ