
ಲಕ್ನೋ: ಮೂವರು ಅಪರಿಚಿತ ಯುವಕರು ಕಾಲೇಜು ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿನಿಯನ್ನು ಎಳೆದಾಡಿ ಆಕೆಯ ಬಟ್ಟೆ ಹರಿದು ಆಕೆಗೆ ಬಲವಂತವಾಗಿ ಮುತ್ತಿಕ್ಕಿದ ಆಘಾತಕಾರಿ ಘಟನೆ ಬಿಹೆಯು ಐಐಟಿಯಲ್ಲಿ ನಡೆದಿದೆ. ಘಟನೆ ಖಂಡಿಸಿ ನೂರಾರು ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ತಪ್ಪಿತಸ್ಥರ ಬಂಧನಕ್ಕೆ ಆಗ್ರಹಿಸಿದ್ದಾರೆ. ಹಿಂದೂ ಬನಾರಸ್ ವಿಶ್ವವಿದ್ಯಾಲಯದ ಐಐಟಿಯ ಕಾಲೇಜು ಹಾಸ್ಟೆಲ್ ಆವರಣದಲ್ಲಿ ಈ ಘಟನೆ ನೆಡೆದಿದೆ. ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದು, ಅವರು ಈ ದೃಶ್ಯವನ್ನು ವೀಡಿಯೋ ಕೂಡ ಮಾಡಿಕೊಂಡಿದ್ದಾರೆ.
ಈ ಕೃತ್ಯದಲ್ಲಿ ಹೊರಗಿನವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾ ನಿರತ ವಿದ್ಯಾರ್ಥಿಗಳು, ಹೊರಗಿನವರು ಕ್ಯಾಂಪಸ್‌ಗೆ ಪ್ರವೇಶಿಸುವುದನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಅಲ್ಲದೇ ಬನಾರಸ್ ಹಿಂದೂ ವಿಶ್ವವಿದ್ಯಾಲಯ (BHU) ಕ್ಯಾಂಪಸ್‌ನಿಂದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಅನ್ನು ಪ್ರತ್ಯೇಕ ಮಾಡಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
ಹಾವಿನ ವಿಷ ಹೀರಿ ಕಿಕ್ಕೇರಿಸಿಕೊಳ್ತಿದ್ರಾ? ಬಿಗ್‌ಬಾಸ್ ವಿನ್ನರ್ ಆಯೋಜಿಸ್ತಿದ್ದ ರೇವ್ ಪಾರ್ಟಿ: ಐವರ ಬಂಧನ
ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಕಾಲೇಜು ಆಡಳಿತ ಮಂಡಳಿ ಈ ಬಗ್ಗೆ ಶಿಕ್ಷಣ ಸಚಿವಾಲಯದೊಂದಿಗೆ ಮಾತನಾಡಿದ ಹೊರಗಿನವರಿಗೆ ಪ್ರವೇಶ ನಿಷೇಧಿಸುವ ಬಗ್ಗೆ ಪ್ರಸ್ತಾಪ ಮಾಡುವುದಾಗಿ ಹೇಳಿದ್ದಾರೆ. ಪ್ರವೇಶ ನಿರ್ಬಂಧಿಸುವ ಹಾಗೂ ಬಂದ್ ಆಗಿರುವಂತಹ ಕ್ಯಾಂಪಸ್ ಸೃಷ್ಟಿಗೆ ಶಿಕ್ಷಣ ಸಚಿವಾಲಯ ಮತ್ತು ವಿಶ್ವವಿದ್ಯಾನಿಲಯ (Banaras Hindu University) ಆಡಳಿತದೊಂದಿಗೆ ಸಕ್ರಿಯ ಮಾತುಕತೆ ನಡೆಯುತ್ತದೆ ಎಂದು ಬಿಹೆಚ್‌ಯು ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಲ್ಲದೇ ಕ್ಯಾಂಪಸ್‌ನಲ್ಲಿ ಸಿಸಿಟಿವಿ ಅಳವಡಿಸುವುದರ ಜೊತೆ ಭದ್ರತೆ ಹೆಚ್ಚಿಸುವುದಾಗಿ ಹೇಳಿದ್ದಾರೆ. ಅಲ್ಲದೇ ರಾತ್ರಿ 10 ರಿಂದ ಬೆಳಗ್ಗೆ 5ರವರೆಗೆ ವಿದ್ಯಾರ್ಥಿಗಳ ಓಡಾಟವನ್ನು ಕೂಡ ನಿರ್ಬಂಧಿಸಲಾಗುವುದು ಎಂದು ಸಂಸ್ಥೆ ಹೇಳಿದೆ.ವಿದ್ಯಾರ್ಥಿನಿ ನೀಡಿರುವ ದೂರಿನಲ್ಲಿ ಬುಧವಾರ ರಾತ್ರಿ ತನ್ನ ಸ್ನೇಹಿತೆಯರ ಜೊತೆ ಹೋಗುತ್ತಿದ್ದಾಗ ನನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಸಂತ್ರಸ್ತ ಯುವತಿ ನೀಡಿದ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾಳೆ.
ನೀತಾ ಅಂಬಾನಿಯಿಂದ ಹಿಡಿದು ಬಾಲಿವುಡ್ ಸೆಲೆಬ್ರಿಟಿಗಳವರೆಗೆ ಎಲ್ಲರೂ ಇಷ್ಟಪಡೋ ಈ ಓರಿ ಯಾರು..?
ತಾನು ತನ್ನ ಸ್ನೇಹಿತೆಯರ ಜೊತೆ ಹೋಗುತ್ತಿದ್ದಾಗ ಕರ್ಮನ್ ಬಾಬಾ ದೇಗುಲದ ಬಳಿ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಬಲವಂತವಾಗಿ ನನ್ನನ್ನು ನನ್ನ ಸ್ನೇಹಿತರಿಂದ ಎಳೆದು ದೂರ ಮಾಡಿದ್ದಾರೆ. ನಂತರ ಆರೋಪಿಗಳು ಯುವತಿಯ ಬಟ್ಟೆ ಹರಿದಿದ್ದಾರೆ. ಈ ದೃಶ್ಯವನ್ನು ದುಷ್ಕರ್ಮಿಗಳು ವೀಡಿಯೋ ಕೂಡ ಮಾಡಿಕೊಂಡಿದ್ದು, 15 ನಿಮಿಷದ ನಂತರ ತನ್ನ ಫೋನ್ ಕಸಿದುಕೊಂಡು ನನ್ನನ್ನು ಅಲ್ಲಿಂದ ಹೋಗಲು ಬಿಟ್ಟರು ಎಂದು ಯುವತಿ ದೂರಿನಲ್ಲಿ ಹೇಳಿದ್ದಾಳೆ.
ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದ್ದು, ಕ್ಯಾಂಪಸ್‌ನಲ್ಲಿ ಭದ್ರತಾ ಕ್ರಮ ಕೈಗೊಳ್ಳಲು ಕಾಲೇಜು ಆಡಳಿತದೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ