ಯಾವುದೇ ಭಯೋತ್ಪಾದಕ ದಾಳಿ ನಡೆದರೆ, ಅದನ್ನು ಯುದ್ಧವೆಂದು ಪರಿಗಣಿಸಲು ಭಾರತ ಸರ್ಕಾರದಿಂದ ಮಹತ್ವದ ನಿರ್ಧಾರ

Published : May 10, 2025, 04:42 PM ISTUpdated : May 10, 2025, 04:45 PM IST
ಯಾವುದೇ ಭಯೋತ್ಪಾದಕ ದಾಳಿ ನಡೆದರೆ, ಅದನ್ನು ಯುದ್ಧವೆಂದು ಪರಿಗಣಿಸಲು ಭಾರತ ಸರ್ಕಾರದಿಂದ ಮಹತ್ವದ ನಿರ್ಧಾರ

ಸಾರಾಂಶ

ಭಯೋತ್ಪಾದಕ ದಾಳಿಗಳನ್ನು ಯುದ್ಧವೆಂದು ಪರಿಗಣಿಸುವ ಮಹತ್ವದ ನಿರ್ಧಾರವನ್ನು ಭಾರತ ಸರ್ಕಾರ ಕೈಗೊಂಡಿದೆ. ಪಾಕಿಸ್ತಾನದಿಂದ ಉಂಟಾಗುತ್ತಿರುವ ಆತಂಕದ ವಾತಾವರಣವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಗಡಿ ಗ್ರಾಮಗಳಲ್ಲಿ ಆತಂಕದ ವಾತಾವರಣವಿದ್ದರೂ, ಭಾರತೀಯ ಸೇನೆಯ ಮೇಲೆ ನಂಬಿಕೆ ಇದೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

ನವದೆಹಲಿ: ಇಂದು ಭಾರತ ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದು, ಯಾವುದೇ ಭಯೋತ್ಪಾದಕ ದಾಳಿ ನಡೆದ್ರೆ ಅದನ್ನು ಯುದ್ಧವೆಂದು ಪರಿಗಣಿಸಲಾಗುತ್ತದೆ ಎಂದು ಹೇಳಿದೆ. ಭವಿಷ್ಯದಲ್ಲಿ ಯಾವುದೇ ಭಯೋತ್ಪಾದಕ ಕೃತ್ಯವನ್ನು ಭಾರತದ ವಿರುದ್ಧದ ಯುದ್ಧ ಕೃತ್ಯವೆಂದು ಪರಿಗಣಿಸಲಾಗುತ್ತದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ. ಇದರೊಂದಿಗೆ, ಅಂತಹ ಯಾವುದೇ ಕ್ರಮಕ್ಕೆ ತಕ್ಕಂತೆ ಪ್ರತಿಕ್ರಿಯಿಸಲಾಗುತ್ತದೆ. ಭಾರತದ ಪಶ್ವಿಮದ ಗಡಿಯಲ್ಲಿ ಪಾಕಿಸ್ತಾನ, ದೀರ್ಘ-ಶ್ರೇಣಿಯ ಶಸ್ತ್ರಾಸ್ತ್ರಗಳು ಮತ್ತು ಯುದ್ಧ ವಿಮಾನಗಳನ್ನು ಬಳಸಿಕೊಂಡು ಆತಂಕದ ವಾತಾವರಣ ಸೃಷ್ಟಿಸಲು ಮುಂದಾಗಿತ್ತು. ಪಾಕಿಸ್ತಾನದ ಈ ಪ್ರಯತ್ನವನ್ನ ಸಂಪೂರ್ಣವಾಗಿ ವಿಫಲಗೊಳಿಸಲಾಗಿದೆ ಎಂದ ಭಾರತೀಯ ಸೇನೆ ಹೇಳಿದೆ. ಪಾಕಿಸ್ತಾನ ತನ್ನ ಸೈನಿಕರನ್ನು ಭಾರತದ ಗಡಿಯತ್ತ ಸ್ಥಳಾಂತರ ಮಾಡುತ್ತಿದ್ದು, ಇದು ಪರಿಸ್ಥಿತಿಯನ್ನು ಮತ್ತಷ್ಟು ಉಲ್ಬಣಗೊಳಿಸುವ ಸೂಚನೆ ಎಂದು ಭಾರತೀಯ ಸೇನೆ ಹೇಳಿದೆ. ಎಲ್ಲಾ ಪ್ರಯತ್ನಗಳನ್ನು ಭಾರತ ವಿಫಲಗೊಳಿಸುತ್ತಿದ್ರೂ, ಬುದ್ಧಿ ಕಲಿಯದ ಪಾಕಿಸ್ತಾನ "ಆಕ್ರಮಣಕಾರಿ ಉದ್ದೇಶ"ದಿಂದ ಹೊರ ಬರುತ್ತಿಲ್ಲ. ಭಾರತದ ಸೇನೆ ಕಾರ್ಯಾಚರಣೆಗೆ ಸಂಪೂರ್ಣವಾಗಿ ಸಿದ್ಧವಾಗಿದೆ ಎಂದು ಸೇನೆ ತಿಳಿಸಿದೆ.

ಗಡಿಯಲ್ಲಿ ಆತಂಕವೂ ಇದೆ, ಧೈರ್ಯವೂ ಇದೆ:

ಜಮ್ಮುವಿಗೆ 30 ಕಿಲೋಮಿಟರ್ ದೂರದಲ್ಲಿರುವ ಸುಚೇತ್ ಘಡ್ ಗಡಿಗೆ ಭೇಟಿ ಕೊಟ್ಟಾಗ ಕೊನೆಯ ಗ್ರಾಮದ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದರು. ಆದ್ರೂ ನಮ್ಮ ಬಿಎಸ್ಎಫ್ ಯೋಧರು ನಮ್ಮ ಜೊತೆಗೆ ಇದ್ದಾರೆ. ನಮ್ಮನ್ನು ಕಾಯುತ್ತಾರೆ ಅಂತಾರೆ ಈ ಊರಿನ ಸರಪಂಚ ಸ್ವರ್ಣಲಾಲ್.

2018ರ ಬಳಿಕ ಸುಚೇತ್‌ಗಢ ಗಡಿಯಲ್ಲಿ ಗುಂಡಿನ ಶಬ್ದ ಕೇಳಿಲ್ಲ. ಆದ್ರೆ ಆತಂಕಿಗಳು ಯಾವುದು ಲೆಕ್ಕ ಹಾಕುವುದಿಲ್ಲ. ಜೀವದ ಮೇಲೆ ನಮಗೆ ಪ್ರೀತಿ ಇರುತ್ತೆ ಅಲ್ವಾ ಹಾಗಾಗಿ ಆತಂಕ ಇರುತ್ತೆ. ನಮ್ಮ ಸೈನ್ಯ, ನಮ್ಮ ಸರ್ಕಾರ ಗಡಿ ಗ್ರಾಮದ ಜನರ ಜೊತೆ ಇದೆ. ಹಲವರು ಗ್ರಾಮ ಬಿಟ್ಟು ಬೇರೆ ಕಡೆ ಸುರಕ್ಷಿತ ಸ್ಥಳಕ್ಕೆ ಹೋಗಿದ್ದಾರೆ. ಉಳಿದವರು ಬಂಕರ್ ಗಳ ಆಶ್ರಯದಲ್ಲಿದ್ದಾರೆ. ಪರಿಸ್ಥಿತಿ ಏನು ಬೇಕಾದರೂ ಎದುರಾಗಬಹುದು ಎದೆಯೊಡ್ಡಲು ನಾವು ಸಿದ್ದರಿದ್ದೇವೆ ಎಂದರು ಸ್ವರ್ಣಲಾಲ್

ಟರ್ಕಿ ನಿರ್ಮಿತ 300-400 ಡ್ರೋನ್‌
ಗುರುವಾರ ರಾತ್ರಿ ಭಾರತದ ಮೇಲೆ ಭಾರೀ ಪ್ರಮಾಣದ ದಾಳಿ ನಡೆಸಿದ್ದ ಪಾಕಿಸ್ತಾನ, ಈ ವೇಳೆ 3 ತಾಸಿನ ಅವಧಿಯಲ್ಲಿ ಟರ್ಕಿ ನಿರ್ಮಿತ 300-400 ಡ್ರೋನ್‌ಗಳನ್ನು ಭಾರತದತ್ತ ಹಾರಿಬಿಟ್ಟಿತ್ತು ಎಂಬ ವಿಷಯ ಬೆಳಕಿಗೆ ಬಂದಿದೆ. ರಾತ್ರಿ 8 ರಿಂದ 11.30ರ ನಡುವೆ ಏಕಕಾಲದಲ್ಲಿ ಭಾರತದ 36 ಸ್ಥಳಗಳನ್ನು ಗುರಿಯಾಗಿರಿಸಿಕೊಂಡು ದಾಳಿಗೆ ಯತ್ನಿಸಲಾಗಿತ್ತು. ಆದರೆ ಈ ಪೈಕಿ 50ಕ್ಕೂ ಹೆಚ್ಚು ಡ್ರೋನ್‌ಗಳನ್ನು ಭಾರತದ ವಾಯುರಕ್ಷಣಾ ವ್ಯವಸ್ಥೆಗಳು ಹೊಡೆದುರುಳಿಸಿದ್ದರೆ, ಉಳಿದ ಮತ್ತೊಂದಿಷ್ಟನ್ನು ಜ್ಯಾಮರ್‌ ಬಳಸುವ ಮೂಲಕ ನಿಷ್ಕ್ರಿಯಗೊಳಿಸಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..