ರಸ್ತೆ ಪಕ್ಕ ಮಲಗಿದ್ದ 10 ಕಾರ್ಮಿಕರ ಮೇಲೆ ಹರಿದ ಟ್ರಕ್‌: 5 ಸಾವು, ಐವರು ಗಂಭೀರ

By Kannadaprabha News  |  First Published Oct 3, 2023, 7:16 AM IST

ಸೇಬು ಸಾಗಿಸುತ್ತಿದ್ದ ಟ್ರಕ್ಕೊಂದು ರಸ್ತೆ ಪಕ್ಕದಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಪರಿಣಾಮ 5 ಕಾರ್ಮಿಕರು ಸಾವನ್ನಪ್ಪಿದ್ದು ಐವರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಮಹಾರಾಷ್ಟ್ರದ ಬುಲ್ಡಾನಾ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.


ಬುಲ್ಡಾನಾ: ಸೇಬು ಸಾಗಿಸುತ್ತಿದ್ದ ಟ್ರಕ್ಕೊಂದು ರಸ್ತೆ ಪಕ್ಕದಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಪರಿಣಾಮ 5 ಕಾರ್ಮಿಕರು ಸಾವನ್ನಪ್ಪಿದ್ದು ಐವರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಮಹಾರಾಷ್ಟ್ರದ ಬುಲ್ಡಾನಾ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಕಾರ್ಮಿಕರು ರಸ್ತೆ ರಿಪೇರಿ ಕೆಲಸಕ್ಕೆ ಬಂದು ಅಲ್ಲೇ ತಾತ್ಕಾಲಿಕ ಶೆಡ್‌ ನಿರ್ಮಿಸಿ ವಾಸಿಸುತ್ತಿದ್ದರು. ವಾಹನದ ಚಕ್ರದ ಮೇಲಿನ ನಿಯಂತ್ರಣ ಕಳೆದುಕೊಂಡ ಟ್ರಕ್‌ ಚಾಲಕ ವಾಹನವನ್ನು ಕಾರ್ಮಿಕರ ಮೇಲೆ ಹರಿಸಿದ್ದು, ಘಟನೆ ನಡೆದ ಸ್ಥಳದಿಂದ ಟ್ರಕ್‌ ಚಾಲಕ ಪರಾರಿಯಾಗಿದ್ದಾನೆ. ಆತನ ಪತ್ತೆಗೆ ಬಲೆ ಬೀಸಲಾಗಿದೆಯೆಂದು ಪೋಲೀಸರು ತಿಳಿಸಿದ್ದಾರೆ. ಬದುಕುಳಿದವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಚೋಪ್ಡೆ ಆಸ್ಪತ್ರೆಗೆ ಸೇರಿಸಲಾಗಿದೆ.

ಮುಂಜಾನೆ 5.30ರ ಸುಮಾರಿಗೆ ಈ ಘಟನೆ ನಡೆದಿದೆ.  ಜಿಲ್ಲೆಯ ವಡ್ನರ್ ಭೋಲ್ಜಿ ಗ್ರಾಮದಲ್ಲಿ ನಿರ್ಮಿಸಲಾಗುತ್ತಿರುವ ಸರ್ವಿಸ್ ರಸ್ತೆಯ ಬದಿಯಲ್ಲಿ ತಾತ್ಕಾಲಿಕ ಗುಡಿಸಲುಗಳಲ್ಲಿ ಕಾರ್ಮಿಕರು ಮಲಗಿದ್ದಾಗ ಬೆಳಿಗ್ಗೆ 5.30 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ರಸ್ತೆಯಲ್ಲಿ ಚಲಿಸುತ್ತಿದ್ದ ಟ್ರಕ್ ಕಾರ್ಮಿಕರ ಮೇಲೆ ಹರಿದಿದೆ ಎಂದು ಅವರು ಹೇಳಿದರು.

Tap to resize

Latest Videos

ಜಾತ್ರೆಯಲ್ಲಿ ಜಾಯಿಂಟ್ ವ್ಹೀಲ್‌ಗೆ ಸಿಲುಕಿಕೊಂಡ ಬಾಲಕಿಯ ಕೂದಲು: ಆಘಾತಕಾರಿ ವೀಡಿಯೋ ವೈರಲ್

click me!