
ಗುಜರಾತ್ನ ಅಹಮ್ಮದಾಬಾದ್ನಲ್ಲಿ ಭೀಕರ ವಿಮಾನ ಅಪಘಾತ ಇಂದು ಸಂಭವಿಸಿದೆ. ಮೇಘನಿ ನಗರ ಪ್ರದೇಶದಲ್ಲಿ ಪ್ರಯಾಣಿಕರು, ಸಿಬ್ಬಂದಿ ಸೇರಿ ಸುಮಾರು 242 ಜನರನ್ನು ಹೊತ್ತ ವಿಮಾನ ಟೇಕ್ ಆಫ್ ವೇಳೆ ಪತನಗೊಡಿದೆ. ಸುಮಾರು 180 ಮಂದಿ ಮೃತಪಟ್ಟಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಇದರ ಜೊತೆಗೆ ವಿಮಾನ ಅಪ್ಪಳಿಸಿರುವ ಕಟ್ಟಡದಲ್ಲಿ ಇದ್ದ ಜನರೂ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಕೂಡ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದ್ದು, ಈ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬರಬೇಕಿದೆ. ತಾಂತ್ರಿಕ ದೋಷದ ಕಾರಣಕ್ಕೆ ಟೇಕ್ ಆಫ್ ಆದ 15 ಕಿ ಮೀಟರ್ ದೂರದಲ್ಲಿ 600 ರಿಂದ 700 ಅಡಿ ಎತ್ತರದಲ್ಲಿ ಹಾರಿರುವಾಗ ವಿಮಾನ ಪತನವಾಗಿದೆ. ಜನ ವಸತಿ ಕಟ್ಟಡ ಮೇಲೆ ಮತ್ತು ಅಲ್ಲೇ ಇರುವ ಹಾರ್ಸ್ ಕ್ಯಾಂಪ್ ಬಳಿ ವಿಮಾನ ಬಿದ್ದಿದೆ ಎಂದು ಹೇಳಲಾಗುತ್ತಿದ್ದರೂ, ಈ ವಿಮಾನ ದುರಂತಕ್ಕೆ ಸಂಭವಿಸಿದಂತೆ ಹಲವಾರು ಅನುಮಾನಗಳೂ ಸುಳಿದಾಡುತ್ತಿವೆ.
ಆದರೆ ಇದರ ನಡುವೆಯೇ, ಇದೀಗ ಕುತೂಹಲದ ವಿಷಯವೊಂದು ಬೆಳಕಿಗೆ ಬಂದಿದೆ. ಅದೇನೆಂದರೆ, ಘಟನೆಯ ಸ್ಥಳದಲ್ಲಿ ಭಗವದ್ಗೀತೆ ಪುಸ್ತಕ ಸಿಕ್ಕಿದ್ದು, ಅದು ಸುಡದೇ ಇರುವುದು ಮಾತ್ರ ಎಲ್ಲರನ್ನೂ ಅಚ್ಚರಿಗೊಳಿಸಿದೆ. ಇದರ ವಿಡಿಯೋ ವೈರಲ್ ಆಗುತ್ತಲೇ ಸನಾತನ ಧರ್ಮದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಚರ್ಚೆಯಾಗುತ್ತಿದೆ. ಭಗವದ್ಗೀತೆ ಪುಸ್ತಕ ಸಿಕ್ಕಿರುವುದು ನಿಜವಲ್ಲ, ಅದು ಹಳೆಯ ವಿಡಿಯೋ ಎಂದು ಕೆಲವರು ವಾದವನ್ನೂ ಮಂಡಿಸುತ್ತಿದ್ದಾರೆ. ಆದರೆ ಆಜ್ತಕ್ ಮಾಧ್ಯಮದ ವರದಿಗಾರ್ತಿ ಘಟನಾ ಸ್ಥಳಕ್ಕೆ ಹೋದ ಸಂದರ್ಭದಲ್ಲಿ ಅಲ್ಲಿಯೇ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ವ್ಯಕ್ತಿ ಘಟನಾ ಸ್ಥಳದಲ್ಲಿ ಸಿಕ್ಕ ಭಗವದ್ಗೀತೆ ಪುಸ್ತಕದ ಬಗ್ಗೆ ವಿವರಣೆ ನೀಡುವುದನ್ನು ನೋಡಬಹುದು. ಈ ವಿಡಿಯೋ ನೋಡಿದ ಮೇಲೆ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಸುದ್ದಿ ನಿಜ ಎನ್ನುವುದು ತಿಳಿಯುತ್ತದೆ.
ಇನ್ನು ಈ ವಿಮಾನ ದುರಂತದ ಕುರಿತು ಹೇಳುವುದಾದರೆ, ವಿಮಾನವು ಅಹಮ್ಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್ ಗೆ ತೆರಳುತ್ತಿತ್ತು. ಟೇಕ್ ಆಫ್ ಆದ ಕೆಲವೇ ನಿಮಿಷದಲ್ಲಿ ತಾಂತ್ರಿಕ ದೋಷದಿಂದ ಪತನಗೊಂಡಿದೆ. ಅಪಘಾತದ ಕಾರಣವನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ. AI-171 ನಂಬರ್ ನ ಬೋಯಿಂಗ್ -787-8 ಮಾದರಿಯ ವಿಮಾನ 1.10ಕ್ಕೆ ಟೇಕ್ ಆಫ್ ಆಗಬೇಕಿದ್ದ ವಿಮಾನ 1.38ಕ್ಕೆ ತಡವಾಗಿ ಟೇಕ್ ಆಫ್ ಆಗಿದೆ ಎಂದು ವರದಿಗಳು ತಿಳಿಸಿವೆ. ಸುಮಾರು ಎರಡು ಕಿಲೋಮೀಟರ್ ವ್ಯಾಪ್ತಿಯಲ್ಲಿ ದಟ್ಟ ಹೊಗೆ ಆವರಿಸಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಈ ಅಪಘಾತದ ನಂತರ, ಎಲ್ಲ ವಿಮಾನ ಮಾರ್ಗಗಳನ್ನು, ಭೂ ಮಾರ್ಗವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದ್ದು, ಸ್ಥಳಕ್ಕೆ ಭಾರೀ ಭದ್ರತೆಯೊಂದಿಗೆ ಪೊಲೀಸ್ ಪಡೆ, ಅಗ್ನಿಶಾಮಕ, ವೈದ್ಯರ ತಂಡ ಆಗಮಿಸಿದೆ. ವಿಮಾನದಲ್ಲಿ ಒಟ್ಟು 242 ಪ್ರಯಾಣಿಕರು ಇದ್ದರು. ಇದರಲ್ಲಿ 10 ಮಂದಿ ವಿಮಾನ ಸಿಬ್ಬಂದಿಗಳು ಎಂಬ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಕಾರಿಗಳ ದೃಢೀಕರಣ ನಿರೀಕ್ಷೆಯಲ್ಲಿದೆ. ಸದ್ಯ ದುರ್ಘಟನೆ ನಡೆದ ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದ್ದು, ಗಾಯಗಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೊಂದು ಘಟನೆಯ ಬಗ್ಗೆ ಪ್ರಧಾನಿ ಮೋದಿ, ವಿಮಾನಯಾನ ಸಚಿವ, ಏರ್ ಇಂಡಿಯಾ ವಿಮಾನ ಸಂಸ್ಥೆ ಅಧ್ಯಕ್ಷರು ಸೇರಿದಂತೆ ಹಲವರು ಪ್ರತಿಕ್ರಿಯೆ ನೀಡಿ ಸಂತಾಪ ಸೂಚಿಸಿದ್ದಾರೆ. ಈ ಘಟನೆಯಿಂದ ನನಗೆ ದಿಗ್ಬ್ರಮೆಯಾಗಿದೆ. ಗುಜರಾತ್ ಸರ್ಕಾರದ ಎಲ್ಲಾ ಸಚಿವರ ಜತೆ ಮಾತುಕತೆ ನಡೆಸುತ್ತಿದ್ದು, ಅಗತ್ಯ ನೆರವು ನೀಡಲು ಸೂಚಿಸಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ