ಕೇಜ್ರಿ ಬಂಧನ ಖಂಡಿಸಿ ಆಪ್‌ ನಾಯಕರ ಉಪವಾಸ: ದೇಶ, ವಿದೇಶಗಳಲ್ಲಿ ನಾಯಕರ ಸಾಮೂಹಿಕ ನಿರಶನ

By Kannadaprabha NewsFirst Published Apr 8, 2024, 6:43 AM IST
Highlights

ದೆಹಲಿ ಅಬಕಾರಿ ಹಗರಣದಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ಬಂಧನವನ್ನು ವಿರೋಧಿಸಿ ಭಾನುವಾರ ಎಎಪಿ ನಾಯಕರು ದೇಶ-ವಿದೇಶಗಳಲ್ಲಿ ಸಾಮೂಹಿಕ ಉಪಹಾಸ ಕೈಗೊಂಡರು. 
 

ನವದೆಹಲಿ (ಏ.08): ದೆಹಲಿ ಅಬಕಾರಿ ಹಗರಣದಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ಬಂಧನವನ್ನು ವಿರೋಧಿಸಿ ಭಾನುವಾರ ಎಎಪಿ ನಾಯಕರು ದೇಶ-ವಿದೇಶಗಳಲ್ಲಿ ಸಾಮೂಹಿಕ ಉಪಹಾಸ ಕೈಗೊಂಡರು. ಬೆಳಗ್ಗೆ 11 ಗಂಟೆಗೆ ಇಲ್ಲಿನ ಜಂತರ್‌ ಮಂತರ್‌ನಲ್ಲಿ ಆರಂಭವಾದ ಉಪವಾಸ ಸತ್ಯಾಗ್ರಹ ಸಂಜೆಯವರೆಗೆ ನಡೆಯಿತು. ಈ ಸಾಮೂಹಿಕ ಉಪವಾಸದಲ್ಲಿ ದೆಹಲಿ ವಿಧಾನಸಭಾ ಸ್ಪೀಕರ್‌ ರಾಮ್ ನಿವಾಸ್ ಗೋಯೆಲ್, ಡೆಪ್ಯೂಟಿ ಸ್ಪೀಕರ್ ರಾಖಿ ಬಿರ್ಲಾ, ಸಚಿವರಾದ ಅತಿಷಿ, ಗೋಪಾಲ್ ರೈ ಮತ್ತು ಇಮ್ರಾನ್ ಹುಸೇನ್ ಸೇರಿದಂತೆ ಅನೇಕ ಹಿರಿಯ ಆಪ್‌ ನಾಯಕರು ಭಾಗವಹಿಸಿದ್ದರು.

ಮಹಾರಾಷ್ಟ್ರದ ಮುಂಬೈ, ಪುಣೆ, ಹರ್ಯಾಣ, ಪಂಜಾಬ್‌ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲೂ ಆಪ್‌ ನಾಯಕರು ಮತ್ತು ಕಾರ್ಯಕರ್ತರು ತಮ್ಮ ನಾಯಕನ ಬಂಧನವನ್ನು ವಿರೋಧಿಸಿ ಸಾಮೂಹಿಕ ಉಪವಾಸ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

370 ರದ್ದು: ಖರ್ಗೆ ಅವರದ್ದು ತುಕ್ಡೆ ತುಕ್ಡೆ ಗ್ಯಾಂಗ್‌ನ ಮನಸ್ಥಿತಿ: ಪ್ರಧಾನಿ ಮೋದಿ ವಾಗ್ದಾಳಿ

ವಿದೇಶದಲ್ಲೂ ಪ್ರತಿಭಟನೆ: ಬೋಸ್ಟನ್‌ನ ಹಾರ್ವರ್ಡ್ ಸ್ಕ್ವೇರ್‌, ಲಾಸ್ ಏಂಜಲೀಸ್‌ನ ಹಾಲಿವುಡ್ ಸೈನ್, ವಾಷಿಂಗ್ಟನ್‌ನ ಭಾರತೀಯ ರಾಯಭಾರಿ ಕಚೇರಿಯ ಹೊರಗೆ, ನ್ಯೂಯಾರ್ಕ್ ಟೈಮ್ಸ್ ಸ್ಕ್ವೇರ್, ಟೊರೊಂಟೊ, ಲಂಡನ್, ಮೆಲ್ಬರ್ನ್‌ ಸೇರಿದಂತೆ ಇತರೆ ದೇಶಗಳಲ್ಲೂ ಪ್ರತಿಭಟನೆ ನಡೆದಿವೆ ಎಂದು ಮುಖಂಡರು ಹೇಳಿದ್ದಾರೆ. 

ಚಿಕ್ಕಮಗಳೂರಿನ ಗಾಂಧಿ ಪ್ರತಿಮೆ ಎದುರು ಧರಣಿ: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಆಮ್‌ ಆದ್ಮಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾನುವಾರ ನಗರದಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದರು. ನಗರದ ಜಿಲ್ಲಾ ಕೋರ್ಟ್ ಸಮೀಪದ ಉದ್ಯಾವನದ ಮಹಾತ್ಮಗಾಂಧಿ ಪ್ರತಿಮೆ ಬಳಿ ಶಾಂತಿಯುತ ಪ್ರತಿಭಟನೆ ನಡೆಸಿ ಕೇಂದ್ರ ಬಿಜೆಪಿ ಸರ್ಕಾರದ ಧೋರಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಆಮ್‌ ಆದ್ಮಿ ಪಕ್ಷದ ರೈತ ಮೋರ್ಚಾದ ರಾಜ್ಯ ಕಾರ್ಯದರ್ಶಿ ಹೇಮಂತ್‌ಕುಮಾರ್ ಮಾತನಾಡಿ, ಪಕ್ಷದ ನಾಯಕರಾದ ಅರವಿಂದ ಕೇಜ್ರಿವಾಲ್ ಅವರು ಯಾವುದೇ ತಪ್ಪು ಮಾಡದಿದ್ದರೂ ದುರುದ್ದೇಶಪೂರ್ವಕವಾಗಿ ಬಂಧಿಸಿರುವುದು ಖಂಡನೀಯ. 

ಪ್ರಚಾರಕ್ಕೆ ನನ್ನನ್ನೂ ಯಾರೂ ಕರೆದಿಲ್ಲ: ಸಿಎಂ, ಡಿಸಿಎಂ ವಿರುದ್ಧ ಮುನಿಯಪ್ಪ ಮುನಿಸು

ಕೇಂದ್ರ ಬಿಜೆಪಿ ಸರ್ಕಾರ ಇಡಿ, ಸಿಬಿಐ ಮೊದಲಾದ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಚುನಾವಣೆ ಸಮಯದಲ್ಲಿ ವಿಪಕ್ಷಗಳನ್ನು ಸೋಲಿಸಲು ಕುತಂತ್ರ ನಡೆಸುತ್ತಿದೆ ಎಂದು ದೂರಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ವಾಧಿಕಾರಿ ಧೋರಣೆ ಸರಿಯಲ್ಲ. ದೇಶದ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳಿಸಲು ಜನತೆ ಜಾಗೃತರಾಗಬೇಕು. ಬಂಧಿಸಿರುವ ಅರವಿಂದ ಕೇಜ್ರಿವಾಲ್ ಅವರನ್ನು ಕೂಡಲೇ ಬಿಡುಗಡೆ ಗೊಳಿಸಬೇಕು. ಇಲ್ಲವಾದಲ್ಲಿ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಸಿದರು. ಪಕ್ಷದ ಜಿಲ್ಲಾ ಮಾಧ್ಯಮ ಉಸ್ತುವಾರಿ ಡಾ. ಕೆ.ಸುಂದರಗೌಡ ಮಾತನಾಡಿ, ದೆಹಲಿಯಲ್ಲಿ ಉಚಿತ ಶಿಕ್ಷಣ, ಆರೋಗ್ಯ ಸೇವೆ, ಭ್ರಷ್ಟಾಚಾರ ರಹಿತ ಆಡಳಿತದಿಂದ ಆಮ್‌ ಆದ್ಮಿ ಪಕ್ಷ ಅಧಿಕಾರ ಪಡೆಯಲು ಸಾಧ್ಯವಾಗಿದೆ. 

click me!