
ನವದೆಹಲಿ[ಫೆ.13]: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಮ್ ಆದ್ಮಿ ದಾಖಲೆಯ ಗೆಲುವು ಸಾಧಿಸಿದೆ. ಕಾಂಗ್ರೆಸ್ ಹಾಗೂ ಬಿಜೆಪಿಯನ್ನು ಹೀನಾಯವಾಗಿ ಸೋಲಿಸಿರುವ ಆಪ್ ಸತತ ಮೂರನೇ ಬಾರಿ ದೆಹಲಿಯಲ್ಲಿ ಸರ್ಕಾರ ರಚಿಸಲು ಸಜ್ಜಾಗಿದೆ. ಐಐಟಿ ಪದವೀಧರ ಕೇಜ್ರೀವಾಲ್, ಭಾನುವಾರ ಮೂರನೇ ಬಾರಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಎಲ್ಲಾ ಸಂಭ್ರಮದ ನಡುವೆ ಆಮ್ ಆದ್ಮಿ ಪಕ್ಷಕ್ಕೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ.
ಹೌದು ದೆಹಲಿ ಚುನಾವಣೆಯಲ್ಲಿ 62 ಕ್ಷೇತ್ರಗಳಲ್ಲಿ ಗೆದ್ದ ಖುಷಿಯಲ್ಲಿರುವ ಆಪ್ ಗೆ, ಜಯ ಸಾಧಿಸಿದ ಕೇವಲ 24 ಗಂಟೆಯೊಳಗೆ ಮತ್ತೊಂದು ಸಿಹಿ ಸಿಕ್ಕಿದೆ. ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರಕ್ಕೇರಲು ಸಜ್ಜಾಗುತ್ತಿರುವ ಆಮ್ ಆದ್ಮಿ ಪಕ್ಷಕ್ಕೆ ದೇಶದಾದ್ಯಂತ 10 ಲಕ್ಷಕ್ಕೂ ಅಧಿಕ ಮಂದಿ ಕಾರ್ಯಕರ್ತರಾಗಿ ಸೇರ್ಪಡೆಗೊಂಡಿದ್ದಾರೆ. ಪಕ್ಷದ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ಸಂಬಂಧ ಟ್ವೀಟ್ ಮಾಡಲಾಗಿದ್ದು, 'ಭರ್ಜರಿ ಜಯ ಸಾಧಿಸಿದ 24 ಗಂಟೆಯೊಳಗೆ 1 ಮಿಲಿಯನ್ ಗೂ ಅಧಿಕ ಮಂದಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ' ಎಂದು ಟ್ವೀಟ್ ಮಾಡಿದೆ.
ಆಮ್ ಆದ್ಮಿ ಪಕ್ಷ ರಾಷ್ಟ್ರ ನಿರ್ಮಾಣಕ್ಕಾಗಿ ಅಭಿಯಾನವೊಂದನ್ನು ಆರಂಭಿಸಿದೆ. 'ರಾಷ್ಟ್ರ ನಿರ್ಮಾಣ್’ ಎಂಬ ಈ ಅಭಿಯಾನಕ್ಕೆ ಕೈ ಜೋಡಿಸಲು ಪಕ್ಷವು ಭಾರತೀಯರಿಗೆ ಕರೆ ನೀಡಿದೆ. ಇದೀಗ ಈ ಅಭಿಯಾನಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಫೆಬ್ರವರಿ 13ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ