ಸೋಂಕು ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಿ: 8 ರಾಜ್ಯಗಳಿಗೆ ಸೂಚನೆ!

Published : Jul 09, 2021, 11:34 AM IST
ಸೋಂಕು ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಿ: 8 ರಾಜ್ಯಗಳಿಗೆ ಸೂಚನೆ!

ಸಾರಾಂಶ

* ಸೋಂಕು ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಿ * 8 ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯದ ಸೂಚನೆ * ಈ ರಾಜ್ಯಗಳ ಕೆಲ ಜಿಲ್ಲೆಗಳಲ್ಲಿ ಶೇ.10ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ

ನವದೆಹಲಿ(ಜು.09): ಹಲವು ಜಿಲ್ಲೆಗಳಲ್ಲಿ ಕೊರೋನಾ ಪಾಸಿಟಿವಿಟಿ ದರ ಅಧಿಕ ಪ್ರಮಾಣದಲ್ಲಿ ದಾಖಲಾಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರ, ಸೋಂಕು ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ. ಈ ಸಂಬಂಧ ಅರುಣಾಚಲ ಪ್ರದೇಶ, ಮಣಿಪುರ, ಕೇರಳ, ಅಸ್ಸಾಂ, ಮೇಘಾಲಯ, ತ್ರಿಪುರಾ, ಒಡಿಶಾ ಮತ್ತು ಸಿಕ್ಕಿಂ ರಾಜ್ಯಗಳಿಗೆ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್‌ ಭೂಷಣ್‌ ಪತ್ರ ಬರೆದಿದ್ದಾರೆ.

ದೇಶದಲ್ಲಿ ಕೊರೋನಾ 2ನೇ ಅಲೆ ಇಳಿಕೆ ಆಗುತ್ತಿರುವ ಹೊರತಾಗಿಯೂ ಈ ಎಂಟು ರಾಜ್ಯಗಳ ಬಹುತೇಕ ಜಿಲ್ಲೆಗಳಲ್ಲಿ ಶೇ.10ಕ್ಕಿಂತಲೂ ಅಧಿಕ ಪಾಸಿಟಿವಿಟಿ ದರ ದಾಖಲಾಗುತ್ತಿದೆ. ಹೀಗಾಗಿ ಪ್ರತಿಯೊಂದು ಜಿಲ್ಲೆಯಲ್ಲಿ ವಾರದ ಪಾಸಿಟಿವಿಟಿ ಪ್ರಮಾಣದ ಮೇಲೆ ನಿಗಾ ಇಡಬೇಕು. ಸೋಂಕು ಏರಿಕೆ ಆಗುತ್ತಿದ್ದರೆ ಅದನ್ನು ಆರಂಭದಲ್ಲೇ ಗುರುತಿಸಬೇಕು ಎಂದು ರಾಜ್ಯ ಕಾರ್ಯದರ್ಶಿಗಳಿಗೆ ಬರೆದಿರುವ ಪತ್ರದಲ್ಲಿ ತಿಳಿಸಲಾಗಿದೆ.

ಇದೇ ವೇಳೆ ಅರುಣಾಚಲ ಪ್ರದೇಶದ ಮುಖ್ಯ ಕಾರ್ಯದರ್ಶಿಗೆ ಬರೆದಿರುವ ಪತ್ರದಲ್ಲಿ, ರಾಜ್ಯದ 25 ಜಿಲ್ಲೆಗಳ ಪೈಕಿ 19 ಜಿಲ್ಲೆಗಳಲ್ಲಿ ಪಾಸಿಟಿವಿಟಿ ಪ್ರಮಾಣ ಶೇ.10ಕ್ಕೂ ಹೆಚ್ಚು ದಾಖಲಾಗುತ್ತಿದೆ. ರಾಜ್ಯದಲ್ಲಿ ಜೂ.28ರಿಂದ ಜು.4ರ ಅವಧಿಯಲ್ಲಿ ವಾರದ ಪಾಸಿಟಿವಿಟಿ ಪ್ರಮಾಣ ಶೇ.16.2ರಷ್ಟಿದೆ. ಕಳೆದ ನಾಲ್ಕು ವಾರಗಳಿಂದ ಪಾಸಿಟಿವಿಟಿ ದರ ಏರಿಕೆ ಆಗುತ್ತಿದೆ ಎಂಬುದನ್ನು ಭೂಷಣ್‌ ಉಲ್ಲೇಖಿಸಿದ್ದಾರೆ.

ಅಸ್ಸಾಂನ 33 ಜಿಲ್ಲೆಗಳ ಪೈಕಿ 29 ಜಿಲ್ಲೆಗಳಲ್ಲಿ ಕಳೆದ ವಾರ 100ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿರುವುದು ಕಳವಳಕಾರಿ ಆಗಿದೆ ಎಂದು ಭೂಷಣ್‌ ಅಸ್ಸಾಂ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕೇವಲ 2 ನಿಮಿಷ ಮಗಳ ನೋಡಲು 11ಗಂಟೆಗೆ ಸ್ಟೇಶನ್‌ಗೆ ಬಂದ ತಂದೆ, ಭಾವುಕ ಕ್ಷಣದ ವಿಡಿಯೋ
ಬೀದಿಯಲ್ಲಿ ಬಿದ್ದಿದ್ದ ಕಲ್ಲಿಂದ ಹಣ ಮಾಡೋದು ಹೇಗೆ ಎಂದು ತೋರಿಸಿಕೊಟ್ಟ ಹುಡುಗ: ವೀಡಿಯೋ ಭಾರಿ ವೈರಲ್