
ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (ಆರ್‌ಎಸ್‌ಎಸ್) 100 ವರ್ಷ ಪೂರ್ಣವಾದ ಹಿನ್ನೆಲೆಯಲ್ಲಿ ಇಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಖ್ಯಾತ ಬಾಲಿವುಡ್ ನಟ ಸಲ್ಮಾನ್ ಖಾನ್ ಭಾಗಿಯಾಗಿದ್ದರು. ಈ ವೇಳೆ ಸಂಘದ ಮುಖ್ಯಸ್ಥ ಡಾ. ಮೋಹನ್ ಭಾಗ್ವತ್ ಅವರ ಭಾಷಣವನ್ನು ನಟ ಸಲ್ಮಾನ್ ಖಾನ್ ತೀವ್ರ ಗಮನವಿಟ್ಟು ಕೇಳಿಸಿಕೊಂಡಿದ್ದು ಗಮನ ಸೆಳೆಯಿತು.
ಆರ್‌ಎಸ್‌ಎಸ್ ಶತಾಬ್ದಿ ವರ್ಷದ ನಿಮಿತ್ತ ಮುಂಬೈನ ನೆಹರೂ ಕೇಂದ್ರ ಸಭಾಂಗಣದಲ್ಲಿ 2 ದಿನದ ‘100 ವರ್ಷದ ಸಂಘ ಪಯಣ: ಹೊಸ ಭರವಸೆ’ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಶನಿವಾರ ಸಲ್ಮಾನ್ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಂತೆ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದರು. ಆ ಬಳಿಕ ಕಾರ್ಯಕ್ರಮ ಪ್ರವೇಶಿಸಿದ ನಟ, ಭಾಗ್ವತ್ ಅವರ ಭಾಷಣವನ್ನು ತೀವ್ರ ಲಕ್ಷ್ಯಗೊಟ್ಟು ಕೇಳಿಸಿಕೊಂಡರು.
ಈ ವೇಳೆ ಖ್ಯಾತ ಚಿತ್ರ ನಿರ್ಮಾಪಕ ಸುಭಾಷ್ ಘೈ, ಕವಿ, ಲೇಖಕ ಪ್ರಸೂದ್ ಜೋಶಿ ಉಪಸ್ಥಿತರಿದ್ದರು. ಚರ್ಚೆಗಾಗಿ ಸಮಾಜದ ವಿವಿಧ ಗಣ್ಯರು ಮತ್ತು ಆರ್‌ಎಸ್‌ಎಸ್ ನಾಯಕರನ್ನು ಆಹ್ವಾನಿಸಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ