ಹಲವು ಸಿನಿಮಾಗಳು ಹಾಗೂ ವೆಬ್ ಸರಣಿಗಳಲ್ಲಿ ಅಭಿನಯಿಸಿರುವ ನಟಿ ಗೆಹನಾ ವಸಿಷ್ಠ| ಪೋರ್ನ್ ವಿಡಿಯೋ ಚಿತ್ರಿಸಿ ವೆಬ್‌ಸೈಟ್‌ಗೆ ಅಪ್ಲೋಡ್: ನಟಿ ಗೆಹನಾ ವಸಿಷ್ಠ ಬಂಧನ!
ಮುಂಬೈ(ಫೆ.08): ಹಲವು ಸಿನಿಮಾಗಳು ಹಾಗೂ ವೆಬ್ ಸರಣಿಗಳಲ್ಲಿ ಅಭಿನಯಿಸಿರುವ ನಟಿ ಗೆಹನಾ ವಸಿಷ್ಠ ಅವರನ್ನು ಮುಂಬೈನ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿ ವೆಬ್‌ಸೈಟ್‌ಗೆ ಅಪ್ಲೋಡ್ ಮಾಡುತ್ತಿದ್ದರು ಎಂಬ ಆರೋಪದ ಮೇರೆಗೆ ನಟಿ ಗೆಹನಾ ಅಲಿಯಾಸ್ ವಂದನಾ ತಿವಾರಿ ಸೇರಿದಂತೆ ಒಟ್ಟಾರೆ ಐವರನ್ನು ಭಾನುವಾರ ಬೆಳ್ಳಂಬೆಳಗ್ಗೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗೆಹನಾ ವಸಿಷ್ಠ ಅವರು ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಈ ಕಾರಾರಯಚರಣೆ ನಡೆಸಲಾಗಿತ್ತು ಎಂದು ಮುಂಬೈನ ಅಪರಾಧ ವಿಭಾಗದ ಪೊಲೀಸರು ತಿಳಿಸಿದ್ದಾರೆ.