
ನವದೆಹಲಿ (ಜು.03): ದೇಶದ ಹಲವು ಭಾಗಗಳಲ್ಲಿ ಮುಂಗಾರು ಪ್ರವೇಶವಾಗಿದ್ದಾಗ್ಯೂ, ದಿಲ್ಲಿ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳ ಜನ ಬಿರುಬಿಸಿಲಿನಿಂದ ತಲ್ಲಣಗೊಂಡಿದ್ದಾರೆ. ದಿಲ್ಲಿಯಲ್ಲಿ 15 ವರ್ಷದಲ್ಲಿ ಇದೇ ಮೊದಲ ಬಾರಿಗೆ ಮುಂಗಾರು ಇಷ್ಟೊಂದು ವಿಳಂಬವಾಗಿದೆ.
ಈ ವರ್ಷವೂ ಸಾಮಾನ್ಯ ಮುಂಗಾರು: ಸ್ಕೈಮೆಟ್! ...
ಪಾಕಿಸ್ತಾನದಿಂದ ಬರುತ್ತಿರುವ ಬಿಸಿಗಾಳಿ ಹಾಗೂ ಉತ್ತರ ಭಾರತದಲ್ಲಿ ಮಳೆಗೆ ಪೂರಕ ವಾತಾವರಣ ಇಲ್ಲದಿರುವುದೇ ಇದಕ್ಕೆ ಈ ಭಾಗದಲ್ಲಿ ಉಷ್ಣತೆ ಹೆಚ್ಚಲು ಕಾರಣ ಎಂದು ತಜ್ಞರು ವಿಶ್ಲೇಷಿಸಿದ್ದಾರೆ.
ರಾಜ್ಯದಲ್ಲಿ ವರುಣನ ಅಬ್ಬರ: ಡ್ಯಾಂಗಳಿಗೆ ಭಾರೀ ನೀರು ...
ವಿಶ್ವದಲ್ಲೇ ಅತಿಹೆಚ್ಚು ಜನಸಂಖ್ಯೆ ಹೊಂದಿದ 2ನೇ ದೇಶವಾದ ಭಾರತದಲ್ಲಿ 2010 ಈವರೆಗೆ 6500 ಮಂದಿ ಬಿಸಿಗಾಳಿಗೆ ಬಲಿಯಾಗಿದ್ದಾರೆ.
ನವದೆಹಲಿ, ರಾಜಸ್ಥಾನ ಮತ್ತು ಹರಾರಯಣ ರಾಜ್ಯಗಳಲ್ಲಿ ಸತತ 4ನೇ ದಿನವಾದ ಶುಕ್ರವಾರ 40 ಡಿಗ್ರಿ ಸೆಲ್ಸಿಯಸ್ಗಿಂತ ಹೆಚ್ಚು ತಾಪಮಾನ ದಾಖಲಾಗಿದೆ. ಇನ್ನು ಬಿಸಿಲಿನ ಬೇಗೆಗೆ ಪಂಜಾಬ್, ಉತ್ತರ ಪ್ರದೇಶ ಮತ್ತು ಮಧ್ಯ ಪ್ರದೇಶ ರಾಜ್ಯಗಳು ಸಹ ತತ್ತರಿಸಿ ಹೋಗಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ