ಆಂಧ್ರಪ್ರದೇಶದಲ್ಲಿ ಚುನಾವಣೆ ಮುಗಿದ ಬೆನ್ನಲ್ಲೇ ತಿರುಪತಿಯಲ್ಲಿ ಭಕ್ತ ಪ್ರವಾಹ

Published : May 19, 2024, 06:50 AM IST
ಆಂಧ್ರಪ್ರದೇಶದಲ್ಲಿ ಚುನಾವಣೆ ಮುಗಿದ ಬೆನ್ನಲ್ಲೇ ತಿರುಪತಿಯಲ್ಲಿ ಭಕ್ತ ಪ್ರವಾಹ

ಸಾರಾಂಶ

ಆಂಧ್ರಪ್ರದೇಶದಲ್ಲಿ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆಯೇ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಭಕ್ತರ ದಂಡೇ ಹರಿದುಬರುತ್ತಿದೆ. ಬುಧವಾರ ಒಂದೇ ದಿನ ಒಂದೇ ದಿನ ಭಾರಿ ಪ್ರಮಾಣದ ಎನ್ನಬಹುದಾದ 81,930, ಗುರುವಾರ 76,369 ಹಾಗೂ ಶುಕ್ರವಾರ 71,510 ಭಕ್ತರು ದರ್ಶನ ಪಡೆದಿದ್ದಾರೆ. 

ತಿರುಮಲ (ಮೇ.19): ಆಂಧ್ರಪ್ರದೇಶದಲ್ಲಿ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆಯೇ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಭಕ್ತರ ದಂಡೇ ಹರಿದುಬರುತ್ತಿದೆ. ಬುಧವಾರ ಒಂದೇ ದಿನ ಒಂದೇ ದಿನ ಭಾರಿ ಪ್ರಮಾಣದ ಎನ್ನಬಹುದಾದ 81,930, ಗುರುವಾರ 76,369 ಹಾಗೂ ಶುಕ್ರವಾರ 71,510 ಭಕ್ತರು ದರ್ಶನ ಪಡೆದಿದ್ದಾರೆ. 

ಹೀಗಾಗಿ ಭಕ್ತರನ್ನು ನಿಯಂತ್ರಿಸುವುದು ಟಿಟಿಡಿಗೆ ಸವಾಲಾಗಿ ಪರಿಣಮಿಸಿದೆ.ಚುನಾವಣೆಗೆ ಮುನ್ನ ಸಾಮಾನ್ಯವಾಗಿ ಸುಮಾರು 60 ಸಾವಿರದ ಆಸುಪಾಸಲ್ಲಿ ಭಕ್ತರು ಭೇಟಿ ನೀಡುತ್ತಿದ್ದರು. ಆದರೆ ಮತದಾನ ಮುಗಿಯುತ್ತಿದ್ದಂತೆಯೇ ರಾಜಕೀಯ ನಾಯಕರು, ಕಾರ್ಯಕರ್ತರು ಭಾರಿ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ಸಾಮಾನ್ಯ ಉಚಿತ ದರ್ಶನ ಪಡೆಯಲು ಭಕ್ತರು 24 ತಾಸಿಗೂ ಹೆಚ್ಚು ಸಮಯ ಆಗುತ್ತಿದೆ.

ರಾಹುಲ್‌ ಗಾಂಧಿ ಹಿಡಿದಿರುವುದು ಭಾರತ ಅಲ್ಲ, ಚೀನಾ ಸಂವಿಧಾನ ಪುಸ್ತಕ : ಹಿಮಂತ

ಇದೇ ವೇಳೆ, ಭಾನುವಾರ ರಜಾದಿನದಂದು ಇನ್ನಷ್ಟು ಭಕ್ತಸಮೂಹ ದೇಗುಲಕ್ಕೆ ಹರಿದು ಬರಬಹುದು ಎಂದು ಅಂದಾಜಿಸಲಾಗಿದೆ. ಹೀಗಾಗಿ ಟಿಟಿಡಿ ಮುಖ್ಯಸ್ಥ ಧರ್ಮಾರೆಡ್ಡಿ ಹಾಗೂ ಇತರ ಅಧಿಕಾರಿಗಳು, ಸಿಬ್ಬಂದಿ ಖುದ್ದು ಭಕ್ತ ಸಮೂಹ ನಿಯಂತ್ರಣಕ್ಕೆ ಟೊಂಕಕಟ್ಟಿ  ನಿಂತಿದ್ದಾರೆ. ಹೆಚ್ಚಿನ ಭಕ್ತಗಣ ಹರಿದುಬಂದಿದ್ದರಿಂದ ದೇಗುಲದ ಅಲ್ಲಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾದ ಘಟನೆಗಳು ನಡೆದಿವೆ. ಹೀಗಾಗಿ ಇನ್ನು ಇಂಥ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಸಿಬ್ಬಂದಿಗೆ ಟಿಟಿಡಿ ಸೂಚಿಸಿದೆ ಹಾಗೂ ಭಕ್ತರಿಗೆ ಇಡೀ ದಿನ ಉಚಿತ ನೀರು ಹಾಗೂ ಆಹಾರ ಲಭ್ಯ ಇರುವಂತೆ ತಾಕೀತು ಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಿಚ್ಚೇದನ ಪ್ರಕರಣದ ಕ್ಲೈಂಟ್ ಜೊತೆ ರೋಮ್ಯಾಂಟಿಕ್ ರಿಲೇಷನ್‌ ಶಿಪ್‌: ಮಹಿಳಾ ವಕೀಲೆಗೆ ಸುಪ್ರೀಂಕೋರ್ಟ್ ತರಾಟೆ
ಹಿರಿಯ ನಾಗರಿಕರು, 45+ ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟ ರೈಲ್ವೆ; ಇಲ್ಲಿದೆ ಸೂಪರ್ ಅಪ್‌ಡೇಟ್