ಈಡನ್‌ ಗಾರ್ಡನ್ಸ್‌ ಬಳಿಕ ಜೈಪುರದ ಸ್ಟೇಡಿಯಂಗೆ ಬಾಂಬ್ ಬೆದರಿಕೆ

Published : May 09, 2025, 04:23 AM IST
ಈಡನ್‌ ಗಾರ್ಡನ್ಸ್‌ ಬಳಿಕ ಜೈಪುರದ ಸ್ಟೇಡಿಯಂಗೆ ಬಾಂಬ್ ಬೆದರಿಕೆ

ಸಾರಾಂಶ

ಕೋಲ್ಕತಾದ ಈಡನ್‌ ಗಾರ್ಡನ್ಸ್‌ ಕ್ರೀಡಾಂಗಣಕ್ಕೆ ಬಾಂಬ್ ಬೆದರಿಕೆ ಬೆನ್ನಲ್ಲೇ ಜೈಪುರದ ಸವಾಯ್‌ ಮಾನ್‌ಸಿಂಗ್ ಸ್ಟೇಡಿಯಂಗೂ ಇಮೇಲ್ ಮುಖೇನ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ‘ಆಪರೇಶನ್ ಸಿಂದೂರ ಯಶಸ್ಸು ವಿರೋಧಿಸಿ ಸ್ಟೇಡಿಯಂ ಸ್ಫೋಟಿಸುತ್ತೇವೆ’ ಎಂದು ಬೆದರಿಕೆ ಹಾಕಿದ್ದಾರೆ.

ಜೈಪುರ (ಮೇ.09): ಕೋಲ್ಕತಾದ ಈಡನ್‌ ಗಾರ್ಡನ್ಸ್‌ ಬಳಿಕ ಜೈಪುರದ ಸ್ಟೇಡಿಯಂಗೆ ಬಾಂಬ್ ಬೆದರಿಕೆಕ್ಕೆ ಬಾಂಬ್ ಬೆದರಿಕೆ ಬೆನ್ನಲ್ಲೇ ಜೈಪುರದ ಸವಾಯ್‌ ಮಾನ್‌ಸಿಂಗ್ ಸ್ಟೇಡಿಯಂಗೂ ಇಮೇಲ್ ಮುಖೇನ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ‘ಆಪರೇಶನ್ ಸಿಂದೂರ ಯಶಸ್ಸು ವಿರೋಧಿಸಿ ಸ್ಟೇಡಿಯಂ ಸ್ಫೋಟಿಸುತ್ತೇವೆ’ ಎಂದು ಬೆದರಿಕೆ ಹಾಕಿದ್ದಾರೆ. ಮೇ 16 ರಂದು ಈ ಮೈದಾನದಲ್ಲಿ ರಾಜಸ್ಥಾನ ರಾಯಲ್ಸ್‌ ಮತ್ತು ಪಂಜಾಬ್ ಕಿಂಗ್ಸ್ ನಡುವೆ ಐಪಿಎಲ್ ಪಂದ್ಯ ನಿಗದಿಯಾಗಿದೆ. ಅದಕ್ಕೂ ಮುನ್ನ ಬೆದರಿಕೆ ಬಂದಿದೆ.

ಈ ಬೆನ್ನಲ್ಲೇ ಪೊಲೀಸರು ಮತ್ತು ಬಾಂಬ್ ನಿಷ್ಕ್ರೀಯದ ದಳ ಭೇಟಿ ನೀಡಿ ಪರಿಶಿಲನೆ ನಡೆಸಿದ್ದು, ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಇಮೇಲ್ ವಿಳಾಸ ಪತ್ತೆಗಾಗಿ ತನಿಖೆ ಮುಂದುವರೆದಿದೆ.‘ಆಪರೇಷನ್ ಸಿಂದೂರದ ಯಶಸ್ಸಿನ ಕಾರಣಕ್ಕಾಗಿ ಸ್ಟೇಡಿಯಂನಲ್ಲಿ ಬಾಂಬ್ ಸ್ಫೋಟಿಸುತ್ತೇವೆ. ನಿಮ್ಮಿಂದ ಸಾಧ್ಯವಾದರೆ ಎಲ್ಲರನ್ನು ಉಳಿಸಿಕೊಳ್ಳಿ’ ಎಂದು ಇಮೇಲ್‌ನಲ್ಲಿ ಬೆದರಿಕೆ ಹಾಕಲಾಗಿದೆ.ಬುಧವಾರ ಈಡನ್ ಗಾರ್ಡನ್ಸ್‌ ಮೈದಾನದಲ್ಲಿ ಕೋಲ್ಕತಾ ಮತ್ತು ಚೆನ್ನೈ ನಡುವಿನ ಪಂದ್ಯದ ವೇಳೆ ಬಂಗಾಳ ಕ್ರಿಕೆಟ್‌ನ ಅಧಿಕೃತ ಖಾತೆಗೆ ಇದೇ ರೀತಿ ಇಮೇಲ್‌ ಸಂದೇಶ ಬಂದಿತ್ತು.

ಪಂಜಾಬ್ ಗಡಿಯಲ್ಲಿ ಪಾಕ್‌ ನುಸುಳುಕೋರ ಗುಂಡಿಕ್ಕಿ ಹತ್ಯೆ: ಪಂಜಾಬ್‌ನ ಅಂತಾರಾಷ್ಟ್ರೀಯ ಗಡಿಯಲ್ಲಿ ಭಾರತ ಪ್ರವೇಶಕ್ಕೆ ಯತ್ನಿಸುತ್ತಿದ್ದ ಪಾಕ್ ನುಸುಳುಕೋರನನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) ಯೋಧರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.ಬುಧವಾರ ಮಧ್ಯರಾತ್ರಿ ಇಲ್ಲಿನ ಫಿರೋಜ್‌ಪುರ ವಲಯದಲ್ಲಿ ಘಟನೆ ನಡೆದಿದೆ. ಪಾಕ್ ನುಸುಳುಕೋರ ಉದ್ದೇಶಪೂರ್ವಕವಾಗಿ ಕತ್ತಲೆಯಲ್ಲಿ ಅಂತಾರಾಷ್ಟ್ರೀಯ ಗಡಿ ದಾಟುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಬಿಎಸ್‌ಎಫ್‌ ಈ ಕ್ರಮ ಕೈಗೊಂಡಿದೆ. ಶವವನ್ನು ಪಂಜಾಬ್ ಪೊಲೀಸರಿಗೆ ಗಡಿ ಭದ್ರತಾ ಪಡೆ ಸಿಬ್ಬಂದಿ ಹಸ್ತಾಂತರಿಸಿದ್ದಾರೆ.

Operation Sindoor: ಅಣಕು ಡ್ರಿಲ್‌ ನೆಪದಲ್ಲಿ ಪಾಕ್‌ ದಿಕ್ಕು ತಪ್ಪಿಸಿದ ಪ್ರಧಾನಿ ಮೋದಿ

ಪಂಜಾಬ್‌ ಗಡಿಯಲ್ಲಿ ಬಿಎಸ್‌ಎಫ್‌ ಸಂಜೆ ಕವಾಯತು ರದ್ದು: ಆಪರೇಷನ್ ಸಿಂದೂರ ಕಾರ್ಯಾಚರಣೆಯ ಬೆನ್ನಲ್ಲೇ ಸಾರ್ವಜನಿಕ ಸುರಕ್ಷತೆಯ ದೃಷ್ಟಿಯಿಂದ ಪಂಜಾಬ್‌ನ ಪಾಕ್‌ ಗಡಿಯಲ್ಲಿನ ಮೂರು ಚೆಕ್‌ಪೋಸ್ಟ್‌ಗಳಲ್ಲಿ ನಿತ್ಯ ನಡೆಯುತ್ತಿದ್ದ ಸಂಜೆಯ ಕವಾಯತನ್ನು (ರೀಟ್ರೀಟ್ ಸೆರೆಮನಿ) ಮುಂದಿನ ಆದೇಶದ ತನಕ ನಿಲ್ಲಿಸುತ್ತಿರುವುದಾಗಿ ಬಿಎಸ್‌ಎಫ್‌ ಪಡೆ ಹೇಳಿದೆ. ಆಪರೇಷನ್ ಸಿಂದೂರ ಕಾರ್ಯಾಚರಣೆಯ ಒಂದು ದಿನದ ಬಳಿಕ ಗಡಿ ಭದ್ರತಾ ಪಡೆ ಈ ನಿರ್ಧಾರಕ್ಕೆ ಬಂದಿದ್ದು, ‘ಮುಂದಿನ ಆದೇಶದವರೆಗೆ ಮೂರು ಜಂಟಿ ಚೆಕ್‌ಪೋಸ್ಟ್‌ಗಳಲ್ಲಿ( ಜಿಸಿಪಿ) ಯಾವುದೇ ಕವಾಯತು ಪ್ರದರ್ಶನ ಇರುವುದಿಲ್ಲ. ಭದ್ರತಾ ದೃಷ್ಟಿಯಿಂದ ಯಾವುದೇ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ’ ಎಂದು ಪ್ರಕಟಣೆ ಹೊರಡಿಸಿದೆ. ಪಾಕಿಸ್ತಾನದ ವಾಘಾ ಎದುರಿನ ಅಟ್ಟಾರಿ( ಅಮೃತಸರ), ಫಿರೋಜ್‌ಪುರ ಜಿಲ್ಲೆಯ ಹುಸೇನಿವಾಲಾ ಮತ್ತು ಫಜಿಲ್ಕಾ ಜಿಲ್ಲೆಯ ಸದ್ಕಿ ಚೆಕ್‌ಪೋಸ್ಟ್‌ಗಳಲ್ಲಿ ಕವಾಯತು ರದ್ದುಪಡಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!