ಮೆಟ್ರೋ ಶ್ರೀಧರನ್ ಪ್ರಖ್ಯಾತ ಕ್ರೀಡಾಪಟುವಿಗೆ ಬಿಜೆಪಿ ಗಾಳ!

Published : Feb 23, 2021, 02:48 PM ISTUpdated : Feb 23, 2021, 03:19 PM IST
ಮೆಟ್ರೋ ಶ್ರೀಧರನ್ ಪ್ರಖ್ಯಾತ ಕ್ರೀಡಾಪಟುವಿಗೆ ಬಿಜೆಪಿ ಗಾಳ!

ಸಾರಾಂಶ

2-3 ತಿಂಗಳಲ್ಲಿ ನಡೆಯಲಿರುವ ಕೇರಳದ ವಿಧಾನಸಭೆ ಚುನಾವಣೆಗಾಗಿ ಭರದ ಸಿದ್ಧತೆ| ಮೆಟ್ರೋ ಶ್ರೀಧರನ್‌ ನಂತರ ಪಿ.ಟಿ.ಉಷಾಗೆ ಬಿಜೆಪಿ ಗಾಳ

ತಿರುವನಂತಪುರಂ(ಫೆ.23): 2-3 ತಿಂಗಳಲ್ಲಿ ನಡೆಯಲಿರುವ ಕೇರಳದ ವಿಧಾನಸಭೆ ಚುನಾವಣೆಗಾಗಿ ಭರದ ಸಿದ್ಧತೆ ನಡೆಸಿರುವ ಬಿಜೆಪಿ, ‘ಮೆಟ್ರೋ ಮ್ಯಾನ್‌’ ಇ.ಶ್ರೀಧರನ್‌ ನಂತರ ಇದೀಗ ಒಲಿಂಪಿಕ್‌ ಪದಕ ವಿಜೇತ ಓಟಗಾರ್ತಿ ಪಿ.ಟಿ.ಉಷಾ ಅವರನ್ನು ಪಕ್ಷಕ್ಕೆ ಸೆಳೆಯಲು ಮುಂದಾಗಿದೆ.

ದೇಶದ ಮೆಟ್ರೋ ರೈಲ್ವೆ ಯೋಜನೆಗಳ ಹಿಂದಿನ ಮೆದುಳು ಎನ್ನಲಾಗುವ ಶ್ರೀಧರನ್‌ ಕೆಲ ದಿನಗಳ ಹಿಂದಷ್ಟೇ ಬಿಜೆಪಿ ಸೇರಿದ್ದರು. ಅದರ ಬೆನ್ನಲ್ಲೇ ಬಿಜೆಪಿ ನಾಯಕರು ಉಷಾ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ತೆರೆಮರೆಯಲ್ಲಿ ಸಿದ್ಧತೆ ನಡೆಸಿದ್ದಾರೆ. ಉಷಾ ಕೂಡ ಬಿಜೆಪಿ ಬಗ್ಗೆ ಒಲವು ಹೊಂದಿದ್ದಾರೆ ಎನ್ನಲಾಗಿದ್ದು, ಇತ್ತೀಚೆಗೆ ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಂಡು ಅವರು ಟ್ವೀಟ್‌ ಮಾಡಿದ್ದು ಎಲ್ಲರ ಗಮನ ಸೆಳೆದಿತ್ತು. ಉಷಾ ಹಾಗೂ ಶ್ರೀಧರನ್‌ ರೀತಿಯ ಸೆಲೆಬ್ರಿಟಿಗಳು ಬಿಜೆಪಿ ಸೇರಿದರೆ ನಗರ ಪ್ರದೇಶಗಳ ಮತದಾರರನ್ನು ಸೆಳೆಯುವುದು ಸುಲಭವಾಗುತ್ತದೆ ಎಂಬ ಚಿಂತನೆ ಪಕ್ಷದಲ್ಲಿದೆ.

ಕೇರಳದಲ್ಲಿ ಗೆಲ್ಲಲು ‘ಮಿಷನ್‌ ಸೌತ್‌’ ಹೆಸರಿನಲ್ಲಿ ಪಣ ತೊಟ್ಟಿರುವ ಬಿಜೆಪಿ ನಾಯಕರು ಚಿತ್ರರಂಗದ ಜನಪ್ರಿಯ ತಾರೆಗಳು, ಸಾಮಾಜಿಕ ಹಾಗೂ ಸಾಂಸ್ಕೃತಿಕ ನೇತಾರರನ್ನು ಪಕ್ಷಕ್ಕೆ ಸೆಳೆಯಲು ಯತ್ನಿಸುತ್ತಿದ್ದಾರೆ. ಶೀಘ್ರದಲ್ಲೇ ಇನ್ನಷ್ಟುಖ್ಯಾತನಾಮರು ಪಕ್ಷ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!