
ನವದೆಹಲಿ(ಜೂ.01): ಉತ್ತರ ಭಾರತದಲ್ಲಿ ಉಷ್ಣಹವೆ ಮುಂದುವರೆದಿದ್ದು, ರಾಷ್ಟ್ರಾದ್ಯಂತ ಉಷ್ಣಹವೆಗೆ ಕಳೆದ 24 ತಾಸಿನಲ್ಲಿ 54 ಮಂದಿ ಸಾವನ್ನಪ್ಪಿದ್ದಾರೆ. ಇವರಲ್ಲಿ ಉತ್ತರ ಪ್ರದೇಶ ಹಾಗೂ ಬಿಹಾರದ 20 ಚುನಾವಣಾ ಸಿಬ್ಬಂದಿ ಇದ್ದಾರೆ. ಇದು ಶನಿವಾರದ ಚುನಾವಣೆ ವೇಳೆ ಪರಿಣಾಮ ಬೀರುವ ಸಾಧ್ಯತೆ ಇದೆ.
ಬಿಹಾರದಲ್ಲಿ ಅತಿ ಹೆಚ್ಚು ಎಂದರೆ- 32 ಮಂದಿ ಉಷ್ಣಹವೆಯಿಂದ ಸಾವನ್ನಪ್ಪಿದ್ದಾರೆ. ಅದರಲ್ಲಿ ಔರಂಗಾಬಾದ್‌ನಲ್ಲಿ 17 ಮಂದಿ, ಅರಾದಲ್ಲಿ 6, ಗಯಾ ಮತ್ತು ರೋಪ್ತಾಸ್‌ನಲ್ಲಿ ತಲಾ 3 ಮಂದಿ, ಬಕ್ಸರ್‌ನಲ್ಲಿ ಇಬ್ಬರು ಮತ್ತು ಪಟನಾದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಇನ್ನು ಒಡಿಶಾದ ರೂರ್ಕೆಲಾದಲ್ಲಿ 10, ಜಾರ್ಖಂಡ್‌ನ ಪಲಮು ಮತ್ತು ರಾಜಸ್ಥಾನದಲ್ಲಿ ತಲಾ 5 ಸಾವನ್ನಪ್ಪಿದ್ದರೆ, ಉತ್ತರ ಪ್ರದೇಶದಲ್ಲೂ ಹಲವರು ಉಷ್ಣಹವೆಗೆ ಮೃತಪಟ್ಟಿದ್ದಾರೆ.
ದೆಹಲಿ, ಬಿಹಾರ ಸೇರಿ 4 ರಾಜ್ಯಗಳಲ್ಲಿ ಉಷ್ಣ ಮಾರುತಕ್ಕೆ 32 ಬಲಿ..!
ಶುಕ್ರವಾರ ರಾಜಧಾನಿ ದೆಹಲಿ, ಬಿಹಾರ, ಒಡಿಶಾ, ಜಾರ್ಖಂಡ್, ರಾಜಸ್ಥಾನ, ಉತ್ತರ ಪ್ರದೇಶ, ಹರ್ಯಾಣ, ಚಂಡೀಗಢ, ಪೂರ್ವ ಮಧ್ಯಪ್ರದೇಶ ಮತ್ತು ವಿದರ್ಭದಲ್ಲಿ 45 ರಿಂದ 48 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಜೂ.1 ರಂದು ಉತ್ತರ ಪ್ರದೇಶ, ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ಧೂಳಿನ ಬಿರುಗಾಳಿ ಬೀಸುವ ಮುನ್ಸೂಚನೆ ಇದೆ. ಜೂ.1, 2 ರಂದು ವಾಯುವ್ಯ ಭಾರ ತದ ಭಾಗದಲ್ಲಿ ಗುಡುಗು, ಮಿಂಚು ಸಮೇತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ